ಉಡುಪಿ ಜಿಲ್ಲೆ: ಕ್ರೈಸ್ತ ಬಾಂಧವರಿಂದ ಪವಿತ್ರ ಗುರುವಾರ ಆಚರಣೆ

KannadaprabhaNewsNetwork |  
Published : Apr 18, 2025, 12:45 AM IST
17ಗುರುವಾರ | Kannada Prabha

ಸಾರಾಂಶ

ಯೇಸು ಕ್ರಿಸ್ತರು ತಮ್ಮ ಶಿಷ್ಯರೊಂದಿಗೆ ನಡೆಸಿದ ಕೊನೆಯ ಭೋಜನ ಹಾಗೂ ಕ್ರೈಸ್ತ ಧರ್ಮಸಭೆಯ ಉಗಮದ ಸ್ಮರಣಾರ್ಥ ಪವಿತ್ರ ಗುರುವಾರವನ್ನು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂಧವರು ಶ್ರದ್ಧೆ, ಭಕ್ತಿಯಿಂದ ಆಚರಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಯೇಸು ಕ್ರಿಸ್ತರು ತಮ್ಮ ಶಿಷ್ಯರೊಂದಿಗೆ ನಡೆಸಿದ ಕೊನೆಯ ಭೋಜನ ಹಾಗೂ ಕ್ರೈಸ್ತ ಧರ್ಮಸಭೆಯ ಉಗಮದ ಸ್ಮರಣಾರ್ಥ ಪವಿತ್ರ ಗುರುವಾರವನ್ನು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂಧವರು ಶ್ರದ್ಧೆ, ಭಕ್ತಿಯಿಂದ ಆಚರಿಸಿದರು.

ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ.ಜೆರಾಲ್ಡ್ ಐಸಾಕ್ ಲೋಬೊ ನೇತೃತ್ವದಲ್ಲಿ ಕಲ್ಯಾಣಪುರದ ಮಿಲಾಗ್ರಿಸ್ ಕೆಥೆಡ್ರಲ್ ಚರ್ಚ್‌ನಲ್ಲಿ ಧರ್ಮಪಾಂತ್ಯದ ಪ್ರಧಾನ ಧಾರ್ಮಿಕ ಕಾರ್ಯಕ್ರಮ ನಡೆಯಿತು.

ಗುರುವಾರ ಯೇಸು ಕ್ರಿಸ್ತರು 12 ಮಂದಿ ಶಿಷ್ಯರೊಂದಿಗೆ ಕೊನೆಯ ಭೋಜನ ಮಾಡಿ, ಅವರ ಪಾದಗಳನ್ನು ತೊಳೆದು ದೀನತೆಯ ಹಾಗೂ ಸೇವೆಯ ಸಂದೇಶ ಸಾರಿದ್ದರು. ಅದರ ದ್ಯೋತಕವಾಗಿ ಧರ್ಮಾಧ್ಯಕ್ಷರು 12 ಮಂದಿ ಪ್ರೇಷಿತರ ಪಾದಗಳನ್ನು ತೊಳೆಯುವ ಮೂಲಕ ಏಸುಕ್ರಿಸ್ತರು ಸಾರಿದ ದೀನತೆ ಹಾಗೂ ಪ್ರೀತಿಯ ಸಂದೇಶವನ್ನು ನೀಡಿದರು.

ನಂತರ, ಯೇಸು ತನ್ನ ಶಿಷ್ಯರ ಪಾದಗಳನ್ನು ತೊಳೆಯುವ ಮೂಲಕ ಅನುಕರಣೀಯ ಸೇವೆಯನ್ನು ಮಾಡಿದಂತೆ ನಾವೂ ಕೂಡಾ ಪ್ರತಿದಿನ ಬದುಕಿನಲ್ಲಿ ವಿನಮ್ರತೆಯಿಂದ ಇತರರಿಗೆ ನೆರವಾಗುವ, ಮನೋಭಾವವನ್ನು ಬೆಳೆಸಬೇಕು. ಯೇಸು ನೀಡಿದ ಆಜ್ಞೆ ‘ನಾನು ನಿಮ್ಮನ್ನು ಪ್ರೀತಿಸಿದಂತೆಯೇ ನೀವು ಸಹ ಒಬ್ಬರನ್ನೊಬ್ಬರು ಪ್ರೀತಿಸಿ’ ಎಂಬುದನ್ನು ಪಾಲಿಸಬೇಕು ಎಂಬ ಸಂದೇಶ ನೀಡಿದರು.

ಚರ್ಚಿನ ಪ್ರಧಾನ ಧರ್ಮಗುರು ಹಾಗೂ ಧರ್ಮಪ್ರಾಂತ್ಯದ ಶ್ರೇಷ್ಠಗುರು ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್, ಸಹಾಯಕ ಧರ್ಮಗುರು ವಂ.ಪ್ರದೀಪ್ ಕಾರ್ಡೊಜಾ, ವಂ.ಡಾ.ಜೆನ್ಸಿಲ್ ಆಲ್ವಾ, ಕುಲಪತಿ ವಂ.ಸ್ಟೀಫನ್ ಡಿಸೋಜಾ, ಕಟಪಾಡಿ ಹೋಲಿ ಕ್ರೊಸ್ ಸಂಸ್ಥೆಯ ನಿರ್ದೇಶಕ ವಂ.ರೋನ್ಸನ್ ಡಿಸೋಜಾ, ಪಿಲಾರ್ ಫಾದರ್ಸ್ ಸಂಸ್ಥೆಯ ನಿರ್ದೇಶಕ ವಂ.ಮನೋಜ್ ಫುರ್ಟಾಡೊ ಉಪಸ್ಥಿತರಿದ್ದರು

ಪವಿತ್ರ ಗುರುವಾರ ಅಂಗವಾಗಿ ಚರ್ಚ್‌ಗಳಲ್ಲಿ ಪರಮ ಪ್ರಸಾದ ಸಂಸ್ಕಾರ, ಗುರು ದೀಕ್ಷೆಯ ಸಂಸ್ಕಾರ, ಸೇವೆಯ ಸಂಸ್ಕಾರದ ಸ್ಮರಣೆಯೊಂದಿಗೆ ವಿಶೇಷ ಪ್ರಾರ್ಥನೆ, ಬಲಿಪೂಜೆ, ಆರಾಧನೆಗಳು ಜರುಗಿದವು. ಜಿಲ್ಲೆಯ ವಿವಿಧ ಚರ್ಚುಗಳಲ್ಲಿ ಆಯಾ ಚರ್ಚುಗಳಲ್ಲಿ ಧರ್ಮಗುರುಗಳಿಂದ ಪವಿತ್ರ ಗುರುವಾರದ ಬಲಿಪೂಜೆ ಹಾಗೂ ಪ್ರೇಷಿತರ ಪಾದಗಳನ್ನು ತೊಳೆಯುವ ವಿಧಿ ವಿಧಾನಗಳು ಜರುಗಿದವು.

ಉಡುಪಿ ಶೋಕಮಾತಾ ಚರ್ಚಿನಲ್ಲಿ ಧರ್ಮಗುರುಗಳಾದ ವಂ.ಚಾರ್ಲ್ಸ್ ಮಿನೇಜಸ್, ತೊಟ್ಟಂ ಸಂತ ಅನ್ನಮ್ಮ ದೇವಾಲಯದಲ್ಲಿ ವಂ|ಡೆನಿಸ್ ಡೆಸಾ, ಕುಂದಾಪುರ ಹೋಲಿ ರೋಸರಿ ಚರ್ಚಿನಲ್ಲಿ ವಂ.ಪಾವ್ಲ್ ರೇಗೊ, ಶಿರ್ವ ಆರೋಗ್ಯ ಮಾತಾ ಚರ್ಚಿನಲ್ಲಿ ವಂ.ಡಾ.ಲೆಸ್ಲಿ ಡಿಸೋಜಾ, ಕಾರ್ಕಳ ಸಂತ ಲಾರೆನ್ಸ್ ಬಸಿಲಿಕಾದಲ್ಲಿ ವಂ|ಆಲ್ಬನ್ ಡಿಸೋಜಾ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ಜರುಗಿದವು.

..................

ಇಂದು ಶುಭ ಶುಕ್ರವಾರ ಆಚರಣೆ

ಶುಕ್ರವಾರ ಯೇಸುವನ್ನು ಶಿಲುಬೆಗೇರಿಸಿದ ದಿನವಾವಾಗಿದ್ದು, ಕ್ರೈಸ್ತರು ಶುಭ ಶುಕ್ರವಾರ (ಗುಡ್ ಫ್ರೈಡೆ)ವಾಗಿ ಆಚರಿಸಲಿದ್ದಾರೆ. ಅಂದು ಧ್ಯಾನ, ಉಪವಾಸ ನಡೆಯಲಿದೆ. ಯೇಸುವಿನ ಶಿಲುಬೆಯ ಹಾದಿಯನ್ನು ನೆರವೇರಿಸಲಾಗುತ್ತದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌