ಉಡುಪಿ: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ (ಸಾಸ್) ಇದರ ಜಿಲ್ಲಾ ಕಾರ್ಯಕಾರಿಣಿ ಸಭೆ ಹಾಗೂ ಉಡುಪಿ ಮತ್ತು ಕುಂದಾಪುರ ತಾಲೂಕು ನೂತನ ಸಮಿತಿಗಳ ಪದಗ್ರಹಣ ಸಮಾರಂಭ ನಡೆಯಿತು.
ಸಭೆಯ ಮುಖ್ಯ ಅತಿಥಿಗಳಾಗಿ ಸಾಸ್‌ನ ದಕ್ಷಿಣ ಪ್ರಾಂತ ಕಾರ್ಯದರ್ಶಿ ಕೃಷ್ಣಯ್ಯ, ರಾಜ್ಯಾಧ್ಯಕ್ಷ ಜಯರಾಮ್, ರಾಜ್ಯ ಸಂಘಟನಾ ಕಾರ್ಯದರ್ಶಿ ದತ್ತಾತ್ರೇಯ ಶಿಂತ್ರೆ, ರಾಜ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ವಸಂತ್ ಕುಮಾರ್ ಆಗಮಿಸಿದ್ದರು.ಜಿಲ್ಲಾ ಗೌರವಾಧ್ಯಕ್ಷ ಹರಿಯಪ್ಪ ಕೋಟ್ಯಾನ್, ಗೌರವ ಸಲಹೆಗಾರ ದಿವಾಕರ್ ಶೆಟ್ಟಿ, ಜಿಲ್ಲಾ ಸಾಸ್ ಅಧ್ಯಕ್ಷ ರಾಧಾಕೃಷ್ಣ ಮೆಂಡನ್, ಉಪಾಧ್ಯಕ್ಷರಾದ ಕೆ. ವಿಜಯ ಕೊಡವೂರು, ಗೋಪಾಲ್ ಪೂಜಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಂಜಿತ್ ಶೆಟ್ಟಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ತಾರಾ ಉಮೇಶ್ ಆಚಾರ್ಯ, ಪ್ರಧಾನ ಕಾರ್ಯದರ್ಶಿ ತಾರಾ ಸತೀಶ್, ಉಡುಪಿ ತಾಲೂಕು ನೂತನ ಅಧ್ಯಕ್ಷ ಸತೀಶ್ ಕುಲಾಲ್, ಪ್ರಧಾನ ಕಾರ್ಯದರ್ಶಿ ಅಶ್ವಥ್ ಆಚಾರ್ಯ, ಕುಂದಾಪುರ ತಾಲೂಕು ಮಹಿಳಾ ಘಟಕದ ನೂತನ ಅಧ್ಯಕ್ಷೆ ಸುಶ್ಮಾ ಗಿರೀಶ್, ಪ್ರಧಾನ ಕಾರ್ಯದರ್ಶಿ ಶ್ವೇತಾ ಶ್ರೀನಿಧಿ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಅಯ್ಯಪ್ಪ ಸ್ವಾಮಿ ಭಕ್ತರು ಉಪಸ್ಥಿತರಿದ್ದರು.