ಧರ್ಮಸ್ಥಳ ವಿರುದ್ಧ ಅಪಪ್ರಚಾರ: ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆ ಖಂಡನೆ

KannadaprabhaNewsNetwork |  
Published : Aug 02, 2025, 12:15 AM IST
01ಧರ್ಮಸ್ಥಳ | Kannada Prabha

ಸಾರಾಂಶ

ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಉಡುಪಿ ಜಿಲ್ಲಾ ಘಟಕ ಸಭೆಯಲ್ಲಿ ತೀವ್ರವಾಗಿ ಖಂಡಿಸಿದೆ.

ಕನ್ನಡಪ್ರಭ ವಾರ್ತೆ ಉಡುಪಿಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಉಡುಪಿ ಜಿಲ್ಲಾ ಘಟಕ ಪ್ರಥಮ ತ್ರೈಮಾಸಿಕ ಸಭೆಯು ಅಂಬಲಪಾಡಿಯ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಪ್ರಗತಿ ಸೌಧ ಸಭಾಂಗಣದಲ್ಲಿ ಜನ ಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು.ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ಸಭೆಯಲ್ಲಿ ತೀವ್ರವಾಗಿ ಖಂಡಿಸಿ, ನಿರ್ಣಯ ಕೈಗೊಳ್ಳಲಾಯಿತು.

ಯೋಜನೆಯ ಉಡುಪಿ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಸಭೆಯನ್ನು ಉದ್ಘಾಟಿಸಿದರು. ಮಾಜಿ ರಾಜ್ಯಾಧ್ಯಕ್ಷ ದೇವದಾಸ್ ಹೆಬ್ಬಾರ್ ಹಾಗೂ ಮಾಜಿ ಜಿಲ್ಲಾಧ್ಯಕ್ಷ ನವೀನ್ ಅಮೀನ್ ಶಂಕರಪುರ ಅವರು ವೇದಿಕೆಯ ಚಟುವಟಿಕೆಗಳ ಬಗ್ಗೆ ಸಲಹೆ ಸೂಚನೆಗಳನ್ನಿತ್ತರು.

ಇದೇ ಸಂದರ್ಭ ವೇದಿಕೆಯ ನೂತನ ಅಧ್ಯಕ್ಷರನ್ನಾಗಿ ನೀರೆ ಕೃಷ್ಣ ಶೆಟ್ಟಿ ಅವರನ್ನು ಮುಂದಿನ 2 ವರ್ಷಗಳಿಗೆ ಆಯ್ಕೆ ಮಾಡಲಾಯಿತು. ನೂತನ ಸದಸ್ಯರನ್ನಾಗಿ ಸುಜಾತ ಸುವರ್ಣ, ಸತ್ಯೇಂದ್ರ ಪೈ, ಸುಧಾಕರ ಕರ್ಕೇರ ಹಾಗೂ ವೃಷಭರಾಜ್ ಜಯಂತ್ ಅವರನ್ನು ಸೇರ್ಪಡೆಗೊಳಿಸಲಾಯಿತು.ವೇದಿಕೆಯ ನಿಯೋಜತ ಜಿಲ್ಲಾಧ್ಯಕ್ಷ ನೀರೆ ಕೃಷ್ಣ ಶೆಟ್ಟಿ ಹೆಬ್ರಿ, ಪ್ರಮುಖರಾದ ಉದಯಕುಮಾರ್ ಹೆಗ್ಡೆ ಕಾರ್ಕಳ, ಪ್ರಕಾಶ್ ಶೆಟ್ಟಿ ಬ್ರಹ್ಮಾವರ, ಸತ್ಯಾನಂದ ನಾಯಕ್ ಉಡುಪಿ, ದಯಾನಂದ ಕಾಪು, ಉಮೇಶ್ ಶೆಟ್ಟಿ ಕುಂದಾಪುರ, ಸುಧಾಕರ ಆಚಾರ್ಯ ಬೈಂದೂರು ಉಪಸ್ಥಿತರಿದ್ದರು.

ವೇದಿಕೆಯ ಜಿಲ್ಲಾ ಕಾರ್ಯದರ್ಶಿ ನಾಗರಾಜ್ ಶೆಟ್ಟಿ ಗತ ಸಭೆಯ ವರದಿ ವಾಚಿಸಿದರು. ಪ್ರಾದೇಶಿಕ ವಿಭಾಗದ ಜನ ಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ 2025-26ನೇ ಸಾಲಿನ ಕ್ರಿಯಾ ಯೋಜನೆಯ ಮಾಹಿತಿ ನೀಡಿದರು. ಜನ ಜಾಗೃತಿ ಉಡುಪಿ ತಾಲೂಕು ಕಾರ್ಯದರ್ಶಿ ಸುರೇಂದ್ರ ನಾಯ್ಕ್ ಸ್ವಾಗತಿಸಿದರು. ಹೆಬ್ರಿ ತಾಲೂಕು ಕಾರ್ಯದರ್ಶಿ ಲೀಲಾವತಿ ವಂದಿಸಿದರು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ