ಉಡುಪಿ ಜಿಲ್ಲೆ ಶಿಕ್ಷಣದಲ್ಲಿ ಪ್ರಥಮ ಸ್ಥಾನ ಪಡೆಯಬೇಕು: ಯಶ್ಪಾಲ್ ಸುವರ್ಣ

KannadaprabhaNewsNetwork |  
Published : Feb 09, 2024, 01:45 AM ISTUpdated : Feb 09, 2024, 03:55 PM IST
ಯಶಪಾಲ್ ಸಭೆ | Kannada Prabha

ಸಾರಾಂಶ

ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಉಡುಪಿ ಇದರ ಸಭಾಂಗಣದಲ್ಲಿ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಹಾಗೂ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಪರೀಕ್ಷಾ ಪೂರ್ವ ತಯಾರಿ ಸಭೆ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಜಿಲ್ಲೆಯ ಸರ್ಕಾರಿ ಶಾಲೆಯ ಶಿಕ್ಷಕರು ಹಲವು ಸಮಸ್ಯೆ ಸವಾಲುಗಳ ನಡುವೆಯೂ ತಮ್ಮ ವಿದ್ಯಾರ್ಥಿಗಳ ಶಿಕ್ಷಣಕ್ಕೆ ವಿಶೇಷ ಮುತುವರ್ಜಿವಹಿಸಿ ಕಾರ್ಯೋನ್ಮುಖವಾಗಿ ಸೇವೆ ಸಲ್ಲಿಸುತ್ತಿದ್ದು, ಈ ಬಾರಿ ಮತ್ತೊಮ್ಮೆ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸುವ ಮೂಲಕ ಉಡುಪಿ ಜಿಲ್ಲೆಯನ್ನು ರಾಜ್ಯದಲ್ಲಿಯೇ ಪ್ರಥಮ ಸ್ಥಾನಿಯಾಗಿಸುವ ಪಣತೊಡುವಂತೆ ಉಡುಪಿ ಶಾಸಕ ಯಶ್ಪಾಲ್‌ ಸುವರ್ಣ ಕರೆ ನೀಡಿದರು.

ಅವರು ಗುರುವಾರ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಉಡುಪಿ ಇದರ ಸಭಾಂಗಣದಲ್ಲಿ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಹಾಗೂ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಪರೀಕ್ಷಾ ಪೂರ್ವ ತಯಾರಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಸಮಾರಂಭದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ಮಾತನಾಡಿ, ಜಿಲ್ಲೆಯ ಸರ್ಕಾರಿ ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಅಡಿಪಾಯವಾಗಿರುವ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶಕ್ಕಾಗಿ ಸಂಕಲ್ಪ ಮಾಡಿದ್ದು, ಪೋಷಕರು ಹಾಗೂ ವಿದ್ಯಾರ್ಥಿಗಳ ಜೊತೆ ಸಮನ್ವಯ ಸಾಧಿಸುವ ಮೂಲಕ ಸರಕಾರಿ ಶಾಲೆಯಲ್ಲಿ ಉತ್ತಮ ಫಲಿತಾಂಶಕ್ಕೆ ಒತ್ತು ನೀಡುವಂತೆ ಶಿಕ್ಷಕರಿಗೆ ಪ್ರೇರಣೆಯ ಮಾತುಗಳನ್ನಾಡಿದರು.

ಸಮಾರಂಭದಲ್ಲಿ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಾರುತಿ, ಗಣಪತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಡಾ. ಯಲ್ಲಮ್ಮ, ಶಬನಾ ಅಂಜುಮ್, ಪ್ರಾಂಶುಪಾಲರ ಸಂಘ ಅಧ್ಯಕ್ಷ ವರ್ಗೀಸ್, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ನಿರುಪಮಾ ಪ್ರಸಾದ್ ಶೆಟ್ಟಿ, ಹೈಸ್ಕೂಲ್ ವಿಭಾಗದ ಮುಖ್ಯೋಪಾಧ್ಯಾಯಿನಿ ಇಂದಿರಾ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಚಾರ್ಯೆ ಸುಮಾ ಎಸ್. ಸ್ವಾಗತಿಸಿದರು. ಉಪನ್ಯಾಸಕ ದಯಾನಂದ ಡಿ. ನಿರೂಪಿಸಿ ವಂದಿಸಿದರು.

PREV

Recommended Stories

ವಿಶ್ವಾದ್ಯಂತ ಒಂದೇ ದಿನ ಕಾಂತಾರ ಚಾಪ್ಟರ್ 1 ಬಿಡುಗಡೆ
ಈರುಳ್ಳಿ, ಹೂ, ಪಚ್ಚ ಬಾಳೆ ಬೆಲೆ ಧರೆಗೆ!