: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯು ಶಾಲಾ ಶಿಕ್ಷಣ ವಿಭಾಗದಲ್ಲಿ ಅತ್ಯುತ್ತಮವಾದ ಸಾಧನೆಯನ್ನು ದಾಖಲಿಸುತ್ತಾ ಬಂದಿದೆ. ಪ್ರಮಾಣ, ಗುಣಮಟ್ಟ ಎರಡೂ ವಿಭಾಗಗಳಲ್ಲಿ ವಿದ್ಯಾರ್ಥಿಗಳಿಗೆ ಸಾಧನೆಗೆ ಮುಖ್ಯ ಶಿಕ್ಷಕರು ಮತ್ತು ಇಲಾಖೆಯು ನೀಡುತ್ತಿರುವ ಮಾರ್ಗದರ್ಶನ ಸ್ತುತ್ಯರ್ಹ ಎಂದು ಮಣಿಪಾಲ ಮಾಹೆಯ ಸಹಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳ್ ಹೇಳಿದರು.
ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯು ಶಾಲಾ ಶಿಕ್ಷಣ ವಿಭಾಗದಲ್ಲಿ ಅತ್ಯುತ್ತಮವಾದ ಸಾಧನೆಯನ್ನು ದಾಖಲಿಸುತ್ತಾ ಬಂದಿದೆ. ಪ್ರಮಾಣ, ಗುಣಮಟ್ಟ ಎರಡೂ ವಿಭಾಗಗಳಲ್ಲಿ ವಿದ್ಯಾರ್ಥಿಗಳಿಗೆ ಸಾಧನೆಗೆ ಮುಖ್ಯ ಶಿಕ್ಷಕರು ಮತ್ತು ಇಲಾಖೆಯು ನೀಡುತ್ತಿರುವ ಮಾರ್ಗದರ್ಶನ ಸ್ತುತ್ಯರ್ಹ ಎಂದು ಮಣಿಪಾಲ ಮಾಹೆಯ ಸಹಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳ್ ಹೇಳಿದರು.
ಅವರು ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಮಾಹೆ, ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಹಾಗೂ ಜಿಲ್ಲಾ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಸಹಯೋಗದಲ್ಲಿ ಮಣಿಪಾಲದ ಎಂಐಟಿ ಗ್ರಂಥಾಲಯ ಸಭಾಭವನದಲ್ಲಿ ಆಯೋಜಿಸಿದ ಉಡುಪಿ ಜಿಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರ ಶೈಕ್ಷಣಿಕ ಕಾರ್ಯಾಗಾರ ಮತ್ತು 2025 - 26ನೇ ಸಾಲಿನಲ್ಲಿ ಶೇ 100 ಫಲಿತಾಂಶ ಪಡೆದ ಜಿಲ್ಲೆಯ ಪ್ರೌಢಶಾಲೆಗಳ ಅಭಿನಂದನಾ ಸಭೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು.ತುಮಕೂರಿನ ರಾಮಕೃಷ್ಣ ಆಶ್ರಮದ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ ಅವರು ಉದ್ಘಾಟಕರಾಗಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ಕುತೂಹಲವನ್ನು ಕೆರಳಿಸುವುದು, ಅವರ ಅಭಿವ್ಯಕ್ತಿಯನ್ನು ಉತ್ತಮಪಡಿಸಲು ನಿರಂತರ ಶ್ರಮದ ಅಗತ್ಯವನ್ನು ಒತ್ತಿ ಹೇಳಿದರು. ಶಿಕ್ಷಕರು ಬದ್ಧತೆ ಮತ್ತು ಪ್ರೀತಿಯಿಂದ ತೊಡಗಿಕೊಂಡಾಗಿ ಶ್ರೇಷ್ಠ ಫಲಿತಾಂಶವನ್ನು ದಾಖಲಿಸುವುದು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಅತ್ಯುತ್ತಮ ಅಂಕಗಳನ್ನು ದಾಖಲಿಸಿದ 10 ವಿದ್ಯಾರ್ಥಿಗಳಿಗೆ ಹಾಗೂ ಶೇ 100 ಫಲಿತಾಂಶ ದಾಖಲಿಸಿದ 197 ಶಾಲೆಗಳ ಮುಖ್ಯಶಿಕ್ಷಕರಿಗೆ ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.
ಸಭಾಧ್ಯಕ್ಷತೆ ವಹಿಸಿದ್ದ ಉಡುಪಿ ಜಿಪಂ ಸಿಇಓ ಪ್ರತೀಕ್ ಬಾಯಲ್, ಪ್ರೌಢಶಾಲಾ ಹಂತದಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣದ ಅಗತ್ಯವನ್ನು ಒತ್ತಿ ಹೇಳಿದರು. ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಆಡಳಿತಾಧಿಕಾರಿ ಡಾ. ಶ್ರೀಧರ ಆರ್. ಪೈ, ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಕಿರಣ್ ಹೆಗ್ಡೆ, ಜಿಲ್ಲಾ ವಿದ್ಯಾಂಗ ಉಪನಿರ್ದೇಶಕ ಲೋಕೇಶ ಸಿ. ಸ್ವಾಗತಿಸಿ, ಡಯಟ್ ಪ್ರಾಂಶುಪಾಲ ಡಾ. ಅಶೋಕ ಕಾಮತ್ ಪ್ರಾಸ್ತಾವಿಕ ಮಾತುಗಳನ್ನಾಡಿದರು, ಡಯಟ್‌ನ ಉಪನ್ಯಾಸಕ ಡಾ. ಕಿಶೋರ ಕುಮಾರ ಶೆಟ್ಟಿ ವಂದಿಸಿದರು. ರಾಜೇಂದ್ರ ಭಟ್ ಕಾರ್ಯಕ್ರಮವನ್ನು ನಿರೂಪಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.