ಉಡುಪಿ: ರೆಡ್‌ಕ್ರಾಸ್‌ನಿಂದ ವನಮಹೋತ್ಸವ, ಸ್ವಚ್ಛತಾ ಕಾರ್ಯಕ್ರಮ

KannadaprabhaNewsNetwork |  
Published : Oct 06, 2024, 01:20 AM IST
ರೆಡ್‌ಕ್ರಾಸ್5 | Kannada Prabha

ಸಾರಾಂಶ

ವನಮಹೋತ್ಸವ ಮತ್ತು ಸ್ವಚ್ಛತಾ ಕಾರ್ಯಕ್ರಮ ಶನಿವಾರ ಉಡುಪಿ ನಗರದ ಬ್ರಹ್ಮಗಿರಿಯ ರೆಡ್‌ಕ್ರಾಸ್ ಭವನದ ಪರಿಸರದಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಉಡುಪಿ ಸಂಯುಕ್ತ ಆಶ್ರಯದಲ್ಲಿ ವನಮಹೋತ್ಸವ ಮತ್ತು ಸ್ವಚ್ಛತಾ ಕಾರ್ಯಕ್ರಮ ಶನಿವಾರ ನಗರದ ಬ್ರಹ್ಮಗಿರಿಯ ರೆಡ್‌ಕ್ರಾಸ್ ಭವನದ ಪರಿಸರದಲ್ಲಿ ನಡೆಯಿತು.ಜಿಲ್ಲಾ ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲ್ಯಾಣಾಧಿಕಾರಿ ರತ್ನಾ, ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮಕ್ಕಳಿಗೆ ಬಾಲ್ಯದಿಂದಲೇ ಸ್ವಚ್ಛತೆ ಮತ್ತು ಪರಿಸರದ ಬಗ್ಗೆ ಅರಿವು ಮೂಡಿಸಬೇಕು. ಆಗ ಅದು ಅವರ ವ್ಯಕ್ತಿತ್ವದಲ್ಲಿ ರೂಢಿಗತವಾಗುತ್ತದೆ ಎಂದರು.ಈ ಸಂದರ್ಭ ವಿದ್ಯಾರ್ಥಿಗಳಿಗೆ ಸ್ವಚ್ಛತಾ ಪ್ರತಿಜ್ಞೆಯನ್ನು ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ರೆಡ್‌ಕ್ರಾಸ್ ಕಾರ್ಯದರ್ಶಿ ಡಾ.ಗಣನಾಥ ಎಕ್ಕಾರು, ನಿಕಟ ಪೂರ್ವ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಕೆ., ಆಡಳಿತ ಮಂಡಳಿಯ ಸದಸ್ಯ ಟಿ. ಚಂದ್ರಶೇಖರ್, ಖಜಾಂಚಿ ರಮಾದೇವಿ, ಲಯನ್ಸ್ ವಲಯಾಧ್ಯಕ್ಷ ಅನಂತ ಶೆಟ್ಟಿ, ರೇಖಾ ಎ. ಶೆಟ್ಟಿ, ನೋಡಲ್ ಅಧಿಕಾರಿ ಜಯಶ್ರೀ, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳು ಮತ್ತು ರೆಡ್‌ಕ್ರಾಸ್ ವಿಕಲ ಚೇತನರ ಪುನರ್ವಸತಿ ಕೇಂದ್ರದ ಸಿಬ್ಬಂದಿಯಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣದ ಜೊತೆಗೆ ವೃತ್ತಿಪರ ಕೌಶಲ್ಯ ಅಗತ್ಯ
ಪಂ.ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನದ ಯೋಜನಾ ಸಭೆ