ಉಪವಲಯ ಅರಣ್ಯಾಧಿಕಾರಿಗಳ ಸಂಘ ಹಾಗೂ ಗಸ್ತು ಅರಣ್ಯ ಪಾಲಕರ ಸಂಘಗಳ ಆಶ್ರಯದಲ್ಲಿ ಅರಣ್ಯ ಹುತಾತ್ಮರ ದಿನದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ನಗರದ ಐಎಂಎ ಭವನದಲ್ಲಿ ನಡೆಯಿತು.
ಉಡುಪಿ : ಉಪವಲಯ ಅರಣ್ಯಾಧಿಕಾರಿಗಳ ಸಂಘ ಹಾಗೂ ಗಸ್ತು ಅರಣ್ಯ ಪಾಲಕರ ಸಂಘಗಳ ಆಶ್ರಯದಲ್ಲಿ ಅರಣ್ಯ ಹುತಾತ್ಮರ ದಿನದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ನಗರದ ಐಎಂಎ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕುಂದಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರುಥ್ರೆನ್ ಉದ್ಘಾಟಿಸಿದರು. ಉಪ ವಲಯ ಅರಣ್ಯ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ನಾಗೇಶ್ ಬಿಲ್ಲವ ಅಧ್ಯಕ್ಷತೆ ವಹಿಸಿದ್ದರು. ಸಾಯಿರಾಧಾ ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ಮನೋಹರ್ ಎಸ್. ಶೆಟ್ಟಿ, ಬೆಂಗಳೂರು ವಲಯ ಅರಣ್ಯಾಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಕಿರಣ್ ಕುಮಾರ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮ ರಾವ್, ಐಎಂಎ ಉಡುಪಿ ಅಧ್ಯಕ್ಷ ಡಾ. ಅಶೋಕ್ ಕಾಮತ್, ಸರ್ಕಾರಿ ನೌಕರರ ಸಂಘದ ಉಡುಪಿ ಜಿಲ್ಲಾಧ್ಯಕ್ಷ ದಿನಕರ್ ಶೆಟ್ಟಿ ಅಂಪಾರು, ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ವೀಣಾ ಕುಮಾರಿ ಅತಿಥಿಗಳಾಗಿ ಭಾಗವಹಿಸಿದ್ದರು.
ಗಸ್ತು ಅರಣ್ಯ ಪಾಲಕರ ಮತ್ತು ವೀಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕೇಶವ ಪೂಜಾರಿ ಮತ್ತು, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಕುಮಾರ್ ಡಿ.ಎನ್., ಸಿದ್ದಾಪುರಆ ವನ್ಯಜೀವಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ಡಿ. ದಿನೇಶ್ ಮತ್ತು ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಅರಣ್ಯ ರಕ್ಷಣೆಯಲ್ಲಿ ಮಡಿದ ಹುತಾತ್ಮರಿಗೆ ಗೌರವ ನಮನ ಸಲ್ಲಿಸಲಾಯಿತು. ಒಟ್ಟು 175ಕ್ಕೂ ಹೆಚ್ಚು ಯೂನಿಟ್ ರಕ್ತ ಸಂಗ್ರಹಿಸಿ ಜಿಲ್ಲಾ ರಕ್ತನಿಧಿ ಕೇಂದ್ರಕ್ಕೆ ಹಸ್ತಾಂತರಿಸಲಾಯಿತು. ಶಿಬಿರದಲ್ಲಿ ನೂರಕ್ಕೂ ಹೆಚ್ಚು ಸಿಬ್ಬಂದಿ ಆಗಮಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.