2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಆದರೆ ಯಾವ ಪಕ್ಷದಿಂದ ಸ್ಪರ್ಧಿಸಬೇಕು ಎಂಬುದನ್ನು ಇನ್ನೂ ನಿರ್ಧರಿಸಿಲ್ಲ ಎಂದು ಉಡುಪಿಯ ಮಾಜಿ ಶಾಸಕ ಕೆ. ರಘುಪತಿ ಭಟ್ ತಿಳಿಸಿದ್ದಾರೆ.
ಉಡುಪಿ: 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಆದರೆ ಯಾವ ಪಕ್ಷದಿಂದ ಸ್ಪರ್ಧಿಸಬೇಕು ಎಂಬುದನ್ನು ಇನ್ನೂ ನಿರ್ಧರಿಸಿಲ್ಲ ಎಂದು ಉಡುಪಿಯ ಮಾಜಿ ಶಾಸಕ ಕೆ. ರಘುಪತಿ ಭಟ್ ತಿಳಿಸಿದ್ದಾರೆ.ಗುರುವಾರ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸೇರ್ಪಡೆಯ ಬಗ್ಗೆಯೂ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ನನ್ನ ಅಭಿಮಾನಿಗಳು ಹಾಗೂ ಕಾರ್ಯಕರ್ತರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದರು.
ಬಿಜೆಪಿಗೆ ನನ್ನನ್ನು ಆಹ್ವಾನಿಸಿದರೆ ಸಂತೋಷದಿಂದ ಹೋಗುತ್ತೇನೆ, ಆಗ ಯಾರ ಅಭಿಪ್ರಾಯವನ್ನೂ ಕೇಳುವ ಅಗತ್ಯವಿಲ್ಲ. ಅಲ್ಲಿರುವವರೆಲ್ಲರೂ ನಮ್ಮವರೇ ಎಂದ ಅವರು, ಹಿಂದೆ ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತನನ್ನು ಕಣಕ್ಕಿಳಿಸಿದರೂ ಗೆಲ್ಲುವಂತೆ ಪಕ್ಷವನ್ನು ಸಂಘಟಿಸಿದ್ದೇನೆ. ಆದರೆ ಬಿಜೆಪಿಯಲ್ಲಿ ನನಗೆ ಟಿಕೆಟ್ ತಪ್ಪಿಸಲಾಯಿತು, ಹೋಗಲಿ ಪಕ್ಷದಲ್ಲಿಯಾದರೂ ನನಗೆ ಯಾವುದೇ ಸ್ಥಾನ ನೀಡಲಿಲ್ಲ, ಕನಿಷ್ಟ ಪಕ್ಷದ ರಾಜ್ಯ ಕಾರ್ಯಕಾರಿ ಸದಸ್ಯನನ್ನಾಗಿಯೂ ಮಾಡಲಿಲ್ಲ, ಈಗ ಬಿಜೆಪಿಯಲ್ಲಿ ನನ್ನನ್ನು ಯಾರೂ ಕರೆದು ಮಾತನಾಡಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ನಾನು ಎಲ್ಲಿಯೂ ಬಿಜೆಪಿಯನ್ನು ಟೀಕಿಸಿಲ್ಲ. ನನ್ನ ಮೇಲೆ ಬಿಜೆಪಿಯ ಋಣವಿದೆ. ಆದರೆ ಚುನಾವಣೆಯಲ್ಲಿ ಟಿಕೆಟ್ ಸಿಗದವರು ಬೇರೆ ಪಕ್ಷಗಳಿಗೆ ಹೋಗಿರುವ ಉದಾಹರಣೆಗಳಿವೆ. ಮುಖ್ಯಮಂತ್ರಿಗಳಾಗಿದ್ದವರೇ ಪಕ್ಷ ಬದಲಾಯಿಸಿಲ್ಲವೇ ಎಂದು ಪ್ರಶ್ನಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.