ಉಡುಪಿ: ರಾಜ್ಯದ ಪ್ರಥಮ ವಿಶೇಷ ಮಕ್ಕಳ ಪಾರ್ಕ್‌ಗೆ ಶಂಕುಸ್ಥಾಪನೆ

KannadaprabhaNewsNetwork |  
Published : May 17, 2026, 02:30 AM IST
15ವನ | Kannada Prabha

ಸಾರಾಂಶ

ವಿಕಲಚೇತನ ಮಕ್ಕಳ ಬೆಳವಣಿಗೆ, ಮನರಂಜನೆ ಹಾಗೂ ಅವರ ಸಾಮರ್ಥ್ಯ ವೃದ್ಧಿಸುವ ನಿಟ್ಟಿನಲ್ಲಿ ರಾಜ್ಯದಲ್ಲೇ ಮೊದಲ ವಿಶೇಷ ಮಕ್ಕಳಗಾಗಿ ಸಾಮರ್ಥ್ಯ ವನ ಪಾರ್ಕ್‌ ಗೆ ಶನಿವಾರ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಗರದ ಬನ್ನಂಜೆಯಲ್ಲಿ ಶಂಕುಸ್ಥಾಪನೆ ನೆರವೇರಿಸಿದರು.

ಉಡುಪಿ: ವಿಕಲಚೇತನ ಮಕ್ಕಳ ಬೆಳವಣಿಗೆ, ಮನರಂಜನೆ ಹಾಗೂ ಅವರ ಸಾಮರ್ಥ್ಯ ವೃದ್ಧಿಸುವ ನಿಟ್ಟಿನಲ್ಲಿ ರಾಜ್ಯದಲ್ಲೇ ಮೊದಲ ವಿಶೇಷ ಮಕ್ಕಳಗಾಗಿ ಸಾಮರ್ಥ್ಯ ವನ ಪಾರ್ಕ್‌ ಗೆ ಶನಿವಾರ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಗರದ ಬನ್ನಂಜೆಯಲ್ಲಿ ಶಂಕುಸ್ಥಾಪನೆ ನೆರವೇರಿಸಿದರು.

ನಂತರ ಮಾತನಾಡಿದ ಅವರು, ವಿಕಲಚೇತನರಿಗೆ ಸಮಗ್ರ ಪುನರ್ವಸತಿ, ಚಿಕಿತ್ಸಕ ಸೇವೆ, ಉದ್ಯೋಗವಕಾಶ ಮತ್ತು ಸ್ವತಂತ್ರ ಜೀವನಕ್ಕೆ ಸಾಮರ್ಥ್ಯ ವೃದ್ಧಿಸುವ ನಿಟ್ಟಿನಲ್ಲಿ ವಿಶಿಷ್ಟ ರೀತಿಯ ಪಾರ್ಕ್ ನಿರ್ಮಾಣಕ್ಕೆ ಉದ್ದೇಶಿಸಲಾಗಿದೆ. ಇದಕ್ಕಾಗಿ ಜಿಪಂ ಸಿಇಒ ಅಧ್ಯಕ್ಷತೆಯಲ್ಲಿ ಇತರ ಅಧಿಕಾರಿಗಳನ್ನು ಒಳಗೊಂಡ ಪ್ರತ್ಯೇಕ ಸಾಮರ್ಥ್ಯ ಟ್ರಸ್ಟ್ ರಚಿಸಲಾಗಿದೆ. 1.50 ಕೋಟಿ ರು. ಸರ್ಕಾರಿ ಅನುದಾನ ಮತ್ತು ಇತರ ಸಂಘ- ಸಂಸ್ಥೆಗಳ ನೆರವು ಸೇರಿ ಒಟ್ಟು 4.90 ಕೋಟಿ ರು. ವೆಚ್ಚದಲ್ಲಿ ವಿಶಿಷ್ಟ ರೀತಿಯ ಈ ಪಾರ್ಕ್ ನಿರ್ಮಾಣವಾಗಲಿದೆ ಎಂದರು.

ಉಡುಪಿ ಜಿಲ್ಲೆಯಲ್ಲಿ 15 ವರ್ಷ ಒಳಗಿನ 1228 ವಿಕಲ ಚೇತನ ಮಕ್ಕಳಿದ್ದು, ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯಲು ಪಾರ್ಕ್ ಅನುಕೂಲವಾಗಲಿದೆ. ಇದಲ್ಲದೆ, ಇದರಲ್ಲಿ ಥೆರಪಿ ಸ್ವಿಂಗ್ಸ್ ಗಳು, ಬ್ಯಾಲನ್ಸ್ ಬೀಮ್ಸ್ ಗಳು, ಸಂಗೀತ ವಾದ್ಯಗಳು, ಸ್ಪರ್ಶ ಸಂವೇದನಾ ಮಾರ್ಗಗಳು, ಮರಳು ಮತ್ತು ನೀರಿನ‌ ಆಟದ ವಲಯಗಳು ಇರಲಿದೆ. ಹೂಗಳ ಸುವಾಸನೆ ವೈವಿಧ್ಯ ಅರಿಯಲು ಸೆನ್ಸೇಶನ್ ಸೆನ್ಸರಿ ಪಾರ್ಕ್ ಕೂಡ ಬರಲಿದೆ ಎಂದರು.‌ ಇಡೀ ರಾಜ್ಯಕ್ಕೆ ಮಾದರಿ ಪಾರ್ಕ್‌: ಇಡೀ ರಾಜ್ಯ, ದೇಶಕ್ಕೆ ಮಾದರಿ ಆಗಬಲ್ಲ ಪಾರ್ಕ್ ಇದಾಗಲಿದ್ದು, ಇದನ್ನು 4 ವರ್ಷಗಳಲ್ಲಿ ಪೂರ್ಣಗೊಳಿಸುವ ಯೋಜನೆ ಇದೆ, ಆದರೆ ಇದನ್ನು ಎರಡೇ ವರ್ಷದಲ್ಲಿ ಕಾಮಗಾರಿ ಪೂರ್ತಿಗೊಳಿಸಿ ನಮ್ಮ ಅವಧಿಯಲ್ಲೇ ಉದ್ಘಾಟನೆ ಮಾಡುವಂತಾಗಬೇಕು. ಇಲಾಖೆಯಿಂದಲೂ ಶೀಘ್ರ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಪಂ ಸಿಇಒ ಪ್ರತೀಕ್ ಬಾಯಲ್, ಪೋಲಿಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಇಲಾಖಾಧಿಕಾರಿಗಳಾದ ರುದ್ರಣ್ಣ, ರತ್ನ, ಖ್ಯಾತ ಮನೋವೈದ್ಯ ಡಾ. ಪಿ.ವಿ. ಭಂಡಾರಿ, ರೆಡ್‌ಕ್ರಾಸ್ ರಾಜ್ಯ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಿರಿಜನ ಹಾಡಿಯಲ್ಲಿ ಅನಧಿಕೃತ ಚರ್ಚ್: ತಮಿಳುನಾಡು ಮೂಲದ ಮಂದಿ ವಶಕ್ಕೆ
ಕಾರಿಂಜ ಸಹಿತ ಎರಡು ದೇವಸ್ಥಾನಕ್ಕೆ ಸಿಡಿಲಾಘಾತ