ಕನ್ನಡಪ್ರಭ ವಾರ್ತೆ ಉಡುಪಿ
ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಭಾನುವಾರ ಸಂಜೆ 4 ಗಂಟೆಗೆ ಉಡುಪಿಯ ಮಿಷನ್ ಕಂಪೌಂಡ್ ಮೈದಾನದಲ್ಲಿ ಗಾಂಧಿ ಭಾರತ ಸಮಾವೇಶವನ್ನು ಜಿಲ್ಲಾ ಕಾಂಗ್ರೆಸ್ ಮಾರ್ಗದರ್ಶನದಲ್ಲಿ ಆಯೋಜಿಸಲಾಗಿದೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ಪ್ರಸಾದ್‌ರಾಜ್ ಕಾಂಚನ್ ಮಾತನಾಡಿ, ದೇಶಕ್ಕೆ ಗಾಂಧೀಜಿ ನೀಡಿದ ಕೊಡುಗೆ ಹಾಗು ಸಂವಿಧಾನದ ಬಗ್ಗೆ ಮಾಹಿತಿ ನೀಡುವ ಸಲುವಾಗಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು. ಸಂಜೆ 3.30ಕ್ಕೆ ನಗರದ ನಿತ್ಯಾನಂದ ಮಂದಿರದ ಬಳಿಯಿಂದ ಆರಂಭವಾಗುವ ಮೆರವಣಿಗೆ, ತ್ರಿವೇಣಿ ವೃತ್ತ ತಿರುವು ಪಡೆದು ಕೋರ್ಟ್ ರಸ್ತೆ ಮೂಲಕ ಮೈದಾನ ತಲುಪಲಿದೆ. ಕಾರ್ಯಕ್ರಮದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದರು. ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಪ್ರಶಾಂತ್ ಜತ್ತನ್ನ ಮೊದಲಾದವರು ಇದ್ದರು...........ರಕ್ತದಾನ ಶಿಬಿರಕನ್ನಡಪ್ರಭ ವಾರ್ತೆ ಉಡುಪಿಒಬ್ಬ ವ್ಯಕ್ತಿ ಮಾಡುವ ರಕ್ತದಾನ ಮೂರು ಜನರ ಜೀವ ಉಳಿಸಬಲ್ಲದು ಎಂದು ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ರಕ್ತ ನಿಧಿ ಘಟಕದ ಮುಖ್ಯಸ್ಥೆ ಡಾ. ಶಮಿ ಶಾಸ್ತ್ರಿ ತಿಳಿಸಿದ್ದಾರೆ.
ಇಲ್ಲಿನ ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ಎನ್.ಎಸ್.ಎಸ್ ಘಟಕ, ಯುವ ರೆಡ್ ಕ್ರಾಸ್ ಘಟಕ ಹಾಗೂ ರೆಡ್‌ರಿಬ್ಬನ್ ಕ್ಲಬ್ ಆಯೋಜಿಸಿದ್ದ ಅಂತಾರಾಷ್ಟ್ರೀಯ ರಕ್ತದಾನ ಮತ್ತು ಅದರ ಅರಿವು ಹಾಗೂ ಮಹತ್ವ ಎಂಬ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಿಲ್ಲಾ ಏಡ್ಸ್ ತಡೆಗಟ್ಟುವ ವಿಭಾಗದ ಸಂಯೋಜಕ ಮಹಾಭಲೇಶ್ವರ್ ಮಾತನಾಡಿ, ಉಡುಪಿಯು ರಾಜ್ಯದಲ್ಲೇ ಅತಿ ಹೆಚ್ಚು ರಕ್ತದಾನ ಮಾಡುವ ಜಿಲ್ಲೆ ಎಂದು ಪ್ರಸಿದ್ಧಿ ಪಡೆದಿದೆ. ಇದಕ್ಕೆ ಮುಖ್ಯ ಕಾರಣ ಸ್ವಯಂಪ್ರೇರಣೆಯಿಂದ ರಕ್ತದಾನ ಮಾಡುವ ನಮ್ಮ ಯುವ ಪೀಳಿಗೆ ಎಂದು ಶ್ಲಾಘಿಸಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ನಿರ್ದೇಶಕಿ ಪ್ರೊ.(ಡಾ.) ನಿರ್ಮಲ ಕುಮಾರಿ ಕೆ. ಉಪಸ್ಥಿತರಿದ್ದರು. ಪ್ರಾಂಶುಪಾಲ ಪ್ರೊ.(ಡಾ.) ರಘುನಾಥ್ ಕೆ.ಎಸ್ ಅಧ್ಯಕ್ಷತೆ ವಹಿಸಿದ್ದರು.ಹೆಚ್ಚು ಬಾರಿ ರಕ್ತದಾನ ಮಾಡಿದ ವಿದ್ಯಾಥಿ೯ಗಳಾದ ಶಶಾಂಕ್ ಮತ್ತು ನಮನ್ ಹರೀಶ್ ಅವರನ್ನು ಸನ್ಮಾನಿಸಲಾಯಿತು.ರಾಷ್ಟ್ರೀಯ ಸೇವಾ ಯೋಜನಾ ಅಧಿಕಾರಿಗಳಾದ ಡಾ.ಸಿ.ಬಿ. ನವೀನ್ ಚಂದ್ರ ಹಾಗೂ ಅಮೋಘ್ ಗಾಡ್ಕರ್ ಮತ್ತು ಯುವ ರೆಡ್ ಕ್ರಾಸ್ ಘಟಕ ಪ್ರೊ. ಈರಪ್ಪ ಎಸ್. ಮೇದಾರ್ ಕಾಯ೯ಕ್ರಮ ಆಯೋಜಿಸಿದರು.
ಮಾನವಿಕ ವಿಭಾಗದ ಮುಖ್ಯಸ್ಥ ಪ್ರೊ. ರೋಹಿತ್ ಎಸ್. ಅಮಿನ್, ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಪ್ರೊ. ಸುರೇಖ ಕೆ., ಐಕ್ಯುಎಸಿಯ ಸಂಯೋಜನ ಅಧಿಕಾರಿ ಡಾ. ಜಯಮೋಲ್ ಪಿ.ಎಸ್. ಉಪಸ್ಥಿತರಿದ್ದರು. ವಿದ್ಯಾರ್ಥಿ ಕಾರ್ಯದರ್ಶಿಗಳಾದ ನಂದನ್ ರೈಮಂಡ್ ಮಚಾಡೊ ಹಾಗೂ ಬಸವರಾಜ್ ಹಾಜರಿದ್ದರು.ರವಿಚಂದ್ರ ಸ್ವಾಗತಿಸಿದರು, ಮಂಜುನಾಥ್ ವಂದಿಸಿದರು, ಚಂದ್ರಿಕಾ ನಿರೂಪಿಸಿದರು.