ಉಡುಪಿ ಗ್ಯಾಂಗ್ ವಾರ್ ಗೃಹ ಇಲಾಖೆಯ ವೈಫಲ್ಯಕ್ಕೆ ಸಾಕ್ಷಿ : ಯಶ್ಪಾಲ್ ಸುವರ್ಣ

KannadaprabhaNewsNetwork |  
Published : May 26, 2024, 01:37 AM IST
ಯಶ್25 | Kannada Prabha

ಸಾರಾಂಶ

ಗ್ಯಾಂಗ್ ವಾರ್

ಕನ್ನಡಪ್ರಭ ವಾರ್ತೆ ಉಡುಪಿ

ಸುಸಂಸ್ಕೃತ, ಬುದ್ಧಿವಂತರ ಜಿಲ್ಲೆ ಉಡುಪಿಯಲ್ಲಿ ನಡುರಾತ್ರಿ ಮುಖ್ಯರಸ್ತೆಯಲ್ಲಿ ರೌಡಿಗಳು ಮಾರಕಾಸ್ತ್ರ ಬಳಸಿ ಅಟ್ಟಹಾಸ ಮೆರೆದಿರುವ ಗ್ಯಾಂಗ್ ವಾರ್ ಘಟನೆ ರಾಜ್ಯದಲ್ಲಿ ಗೃಹ ಇಲಾಖೆಯ ವೈಫಲ್ಯಕ್ಕೆ ಸಾಕ್ಷಿಯಾಗಿದ್ದು, ಕಾಂಗ್ರೆಸ್ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂಬುದನ್ನು ಸಾಬೀತು ಮಾಡುತ್ತಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಘಟನೆ ಉಡುಪಿಯ ಪಾಲಿಗೆ ಕಪ್ಪುಚುಕ್ಕೆಯಾಗಿದ್ದು, ಶಾಂತಿಪ್ರಿಯ ಜನತೆ ಆತಂಕಕ್ಕೀಡಾಗಿದ್ದಾರೆ. ನಡುಬೀದಿಯಲ್ಲಿ ತಲವಾರು ಹಿಡಿದು ಗ್ಯಾಂಗ್ ವಾರ್ ನಡೆಸಿರುವ ರೌಡಿಗಳನ್ನು ಪೊಲೀಸ್ ಇಲಾಖೆ ತಕ್ಷಣ ಬಂಧಿಸಿ ಉನ್ನತ ಮಟ್ಟದ ತನಿಖೆ ನಡೆಸಬೇಕು.

ಪೋಲಿಸ್ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ರೌಡಿಗಳ ಹೆಡೆಮುರಿ ಕಟ್ಟಿ ಇಂತಹ ಪ್ರಕರಣ ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳಿಗೆ ಉತ್ತೇಜನ ನೀಡುತ್ತಿರುವ ಡ್ರಗ್ಸ್ ದಂಧೆಯನ್ನು ನಿಯಂತ್ರಿಸಬೇಕು ಎಂದವರು ಹೇಳಿದ್ದಾರೆ.ಶಿಕ್ಷಣ, ಆರೋಗ್ಯ, ಬ್ಯಾಂಕಿಂಗ್, ಧಾರ್ಮಿಕ ಕ್ಷೇತ್ರದಲ್ಲಿ ಜಗತ್ತಿನಲ್ಲಿ ಗುರುತಿಸಿಕೊಂಡಿರುವ ಉಡುಪಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ರಾಜ್ಯ ಕಾಂಗ್ರೆಸ್ ಸರ್ಕಾರ ವಿಫಲವಾಗಿದ್ದು, ತಕ್ಷಣ ಗೃಹ ಸಚಿವರು ಜಿಲ್ಲೆಗೆ ಭೇಟಿ ಪರಿಸ್ಥಿತಿ ಅವಲೋಕನ ಮಾಡುವಂತೆ ಯಶ್ಪಾಲ್ ಸುವರ್ಣ ಆಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಲ್‌ಪಿಜಿ ಪೂರೈಕೆ ಸುಧಾರಣೆ: ಸಪ್ಲೈ ಶೇ.20ರಷ್ಟು ಏರಿಕೆ
ಬಾಗಲಕೋಟೆ, ದಾವಣಗೆರೆ ಕ್ಷೇತ್ರಕ್ಕೆ ಏ.9ಕ್ಕೆ ಉಪಸಮರ