ವಯೋವಂದನ ಯೋಜನೆಗೆ ಸಮಾಜ ಸಹಭಾಗಿತ್ವ ಅಗತ್ಯ: ಗುಜ್ಜಾಡಿ ಪ್ರಭಾಕರ್ ನಾಯಕ್

KannadaprabhaNewsNetwork |  
Published : Jul 01, 2026, 03:30 AM IST
ಅಗತ್ಯ | Kannada Prabha

ಸಾರಾಂಶ

ಜಿಎಸ್‌ಬಿ ಸಮಾಜ ಹಿತ ರಕ್ಷಣಾ ವೇದಿಕೆ ಉಡುಪಿ ಜಿಲ್ಲೆ ನೇತೃತ್ವದಲ್ಲಿ ಬ್ರಹ್ಮಾವರ ತಾಲೂಕು ಉಪ್ಪೂರಿನಲ್ಲಿ 1.11 ಎಕ್ರೆ ಜಾಗದಲ್ಲಿ ನಿರ್ಮಾಣಗೊಳ್ಳಲಿರುವ ವಯೋವಂದನ ಆತಿಥ್ಯ ಗೃಹ ಯೋಜನೆ ಹಿರಿಯರ ಬದುಕಿನ ಸಂಧ್ಯಾಕಾಲದ ಆಸರೆ ಆಗಲಿದೆ. ಈ ಯೋಜನೆಯ ನಿರ್ಮಾಣ ಕಾರ್ಯ ಮತ್ತು ಆ ಬಳಿಕದ ನಿರ್ವಹಣೆಗೆ ಸಮಾಜದ ಸಹಭಾಗಿತ್ವ ಅತಿ ಅಗತ್ಯ ಎಂದು ಉಡುಪಿ ಶ್ರೀ ಲಕ್ಷ್ಮಿ ವೆಂಕಟೇಶ ದೇವಸ್ಥಾನದ ನೂತನ ವಿಶ್ವಸ್ಥ ಗುಜ್ಜಾಡಿ ಪ್ರಭಾಕರ್ ನಾಯಕ್ ಹೇಳಿದರು.

ಉಡುಪಿ: ಜಿಎಸ್‌ಬಿ ಸಮಾಜ ಹಿತ ರಕ್ಷಣಾ ವೇದಿಕೆ ಉಡುಪಿ ಜಿಲ್ಲೆ ನೇತೃತ್ವದಲ್ಲಿ ಬ್ರಹ್ಮಾವರ ತಾಲೂಕು ಉಪ್ಪೂರಿನಲ್ಲಿ 1.11 ಎಕ್ರೆ ಜಾಗದಲ್ಲಿ ನಿರ್ಮಾಣಗೊಳ್ಳಲಿರುವ ವಯೋವಂದನ ಆತಿಥ್ಯ ಗೃಹ ಯೋಜನೆ ಹಿರಿಯರ ಬದುಕಿನ ಸಂಧ್ಯಾಕಾಲದ ಆಸರೆ ಆಗಲಿದೆ. ಈ ಯೋಜನೆಯ ನಿರ್ಮಾಣ ಕಾರ್ಯ ಮತ್ತು ಆ ಬಳಿಕದ ನಿರ್ವಹಣೆಗೆ ಸಮಾಜದ ಸಹಭಾಗಿತ್ವ ಅತಿ ಅಗತ್ಯ ಎಂದು ಉಡುಪಿ ಶ್ರೀ ಲಕ್ಷ್ಮಿ ವೆಂಕಟೇಶ ದೇವಸ್ಥಾನದ ನೂತನ ವಿಶ್ವಸ್ಥ ಗುಜ್ಜಾಡಿ ಪ್ರಭಾಕರ್ ನಾಯಕ್ ಹೇಳಿದರು. ಉಡುಪಿಯ ಶ್ರೀ ಪದ್ಮಾವತಿ ಸಭಾಭವನದಲ್ಲಿ ಭಾನುವಾರ, ನಿರ್ಮಾಣ ಯೋಜನೆಯ ವಿವಿಧ ಸಮಿತಿಗಳ ರಚನೆ ಮತ್ತು ಸಮಾಲೋಚನಾ ಸಭೆ ಉದ್ಘಾಟಿಸಿ ಮಾತನಾಡಿದರು. ಜಿಎಸ್‌ಬಿ ಸಮಾಜ ಹಿತ ರಕ್ಷಣಾ ವೇದಿಕೆ ಕಳೆದ 14 ವರ್ಷಗಳಿಂದ ಸಮಾಜ ಸಂಘಟನೆ ಮತ್ತು ಸಮಾಜಮುಖಿ ಕಾರ್ಯಗಳ ಮೂಲಕ ಸಮಾಜದ ಎಲ್ಲಾ ವರ್ಗದವರ ಪ್ರೀತಿ ವಿಶ್ವಾಸ ಗಳಿಸಿದ್ದು, ಎಲ್ಲಾ ಅಡೆತಡೆ ಸವಾಲುಗಳನ್ನು ಎದುರಿಸಿ ಸಮಾಜದ ಅವಶ್ಯಕತೆ ಇರುವ ಹಿರಿಯ ನಾಗರಿಕರಿಗೆ ನೆಮ್ಮದಿಯ ತಾಣದ ನಿರ್ಮಾಣ ಮತ್ತು ಯಶಸ್ವಿ ಕಾರ್ಯನಿರ್ವಹಣೆ ಸಾಧ್ಯವಾಗಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಯೋಜನೆಗೆ ವೈಯುಕ್ತಿಕ ಮತ್ತು ಉಡುಪಿ ಶ್ರೀ ಲಕ್ಷ್ಮಿ ವೆಂಕಟೇಶ ದೇವಸ್ಥಾನದ ವತಿಯಿಂದ ಸಂಪೂರ್ಣ ಸಹಕಾರ ಮತ್ತು ಸಹಭಾಗಿತ್ವ ನೀಡಲಾಗುವುದು ಎಂದು ಹೇಳಿದರು. ಉಡುಪಿಯ ತ್ರಿಶಾ ವಿದ್ಯಾ ಕಾಲೇಜಿನ ಸಂಸ್ಥಾಪಕ ಸಿಎ ಗೋಪಾಲಕೃಷ್ಣ ಭಟ್ ಮತ್ತು ಮೂಡುಬಿದಿರೆ ವಿಜಯ್ ಕುಮಾರ್ ಶೆಣೈ ಅವರು ವಯೋವಂದನ ಯೋಜನೆಯ ಕಟ್ಟಡ ನಿರ್ಮಾಣದ ಪೂರ್ವಭಾವಿ ಸಿದ್ಧತೆ, ಯೋಜನೆಯ ನಿರ್ವಹಣೆಯ ಖರ್ಚು ವೆಚ್ಚದ ವಿವರಗಳನ್ನು ದೃಶ್ಯ ಶ್ರಾವ್ಯ ಮಾಧ್ಯಮದ ಮೂಲಕ ವಿವರಿಸಿದರು. ಕಟ್ಟಡ ನಿರ್ಮಾಣ ಯೋಜನೆಯ ನಿರ್ಮಾಣ ಸಮಿತಿ ಅಧ್ಯಕ್ಷರಾಗಿ ಬೆಂಗಳೂರಿನ ಮಹಾಲಸಾ ಎಲೆಕ್ಟ್ರಿಕಲ್ ನ ಮಾಲಕರಾದ ಮೂಡಬಿದಿರೆ ವಿಜಯಕುಮಾರ್ ಶೆಣೈ, ಸಂಚಾಲಕರಾಗಿ ಕಾಪು ಹರೀಶ್ ನಾಯಕ್, ಕೆ.ಸಿ. ಕಾಮತ್, ಹಣಕಾಸು ಸಮಿತಿ ಮತ್ತು ಲೆಕ್ಕಪತ್ರ ಮೇಲ್ವಿಚಾರಣ ಸಮಿತಿಯ ಅಧ್ಯಕ್ಷರಾಗಿ ಸಿ ಗೋಪಾಲಕೃಷ್ಣ ಭಟ್, ಗೌರವ ಸಲಹೆಗಾರರಾಗಿ ಸಿಎ ಎಸ್ಎಸ್ ನಾಯಕ್ ಮಂಗಳೂರು, ಮತ್ತು ಸಂಚಾಲಕರಾಗಿ ನಾಗೇಶ್ ಕಾಮತ್ ಮತ್ತು ಮೋಹನದಾಸ ಶಾನುಭಾಗ್, ಕಟ್ಟಡ ನಿರ್ಮಾಣ ಸಾಮಗ್ರಿ ಸಂಗ್ರಹಣ ಮತ್ತು ಮೇಲ್ವಿಚಾರಣಾ ಸಮಿತಿ ಸಂಚಾಲಕರಾಗಿ ಬೆಳ್ಮಣ್ ವೆಂಕಟರಾಯ ಕಾಮತ್ ಮತ್ತು ಮೂಡಬಿದ್ರೆ ರಘುವೀರ್ ಶೆಣೈ ಅವರಿಗೆ ಜವಾಬ್ದಾರಿ ಹಂಚಿಕೆ ಮಾಡಲಾಯಿತು.ಕಟ್ಟಡ ನಿರ್ಮಾಣ ಕೆಲಸದ ಗುತ್ತಿಗೆಯನ್ನು ಬೆಳ್ಮಣ್ ಕಾಮಾಕ್ಷಿ ಕನ್ಸ್ಟ್ರಕ್ಷನ್ ನ ಸುಧೀರ್ ಕಾಮತ್ ಅವರಿಗೆ ನೀಡಲಾಯಿತು.

ಡಾ. ರಾಜ್ ಗೋಪಾಲ್ ಶೆಣೈ, ಉಡುಪಿ ಮತ್ತು ಮಂಗಳೂರಿನ ಲೆಕ್ಕ ಪರಿಶೋಧಕ ಸಿಎ ಎಸ್ಎಸ್ ನಾಯಕ್‌ ಮಾತನಾಡಿದರು.

ಉಡುಪಿಯ ಸರ್ಜನ್ ಡಾ. ಸುರೇಶ್ ಶೆಣೈ, ಕಲ್ಯಾಣಪುರ ಶ್ರೀ ವೆಂಕಟರಮಣ ದೇವಸ್ಥಾನದ ವಿಶ್ವಸ್ಥರಾದ ಕೆ.ರಾಮರಾಯ ಕಿಣಿ, ಉಡುಪಿ ಶ್ರೀ ಲಕ್ಷ್ಮಿ ವೆಂಕಟೇಶ ದೇವಸ್ಥಾನದ ವಿಶ್ವಸ್ಥರಾದ ಮಹೇಶ ಶೆಣೈ , ಯುವಕ ಮಂಡಳಿಯ ಅಧ್ಯಕ್ಷರಾದ ನಿತೇಶ್ ಶೆಣೈ, ಮತ್ತು ಕಲ್ಯಾಣಪುರ ಶ್ರೀ ವೆಂಕಟರಮಣ ದೇವಸ್ಥಾನದ ಮಹಿಳಾ ಮಂಡಳಿಯ ಅಧ್ಯಕ್ಷರಾದ ಸೀಮಾ. ಎಸ್. ಪೈ ಹಾಜರಿದ್ದರು.ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆಯ ಪರಿಕಲ್ಪನೆ ಮತ್ತು ಸಂಯೋಜನೆಯಲ್ಲಿ ಸಿದ್ಧಗೊಂಡಿರುವ ‘ಡಾ.ಪಿ. ದಯಾನಂದ ಪೈ ಸಾರ್ಥಕ ಬದುಕಿನ ಸಾಕ್ಷಾತ್ಕಾರ’ ಎನ್ನುವ ಪುಸ್ತಕದ ಸಂಪಾದಕಿ ಕಾರ್ಕಳದ ಲೇಖಕಿ ಪ್ರಜ್ವಲಾ ಶೆಣೈ ಅವರನ್ನು ಗೌರವಿಸಲಾಯಿತು.

ವೇದಮೂರ್ತಿ ಚೇಂಪಿ ರಾಮಚಂದ್ರ ಅನಂತ ಭಟ್ಟ ಅಧ್ಯಕ್ಷತೆ ವಹಿಸಿದ್ದರು. ಬಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಜಿ. ಸತೀಶ್ ಹೆಗಡೆ ಸ್ವಾಗತಿಸಿದರು. ವೇದಿಕೆಯ ಸಂಚಾಲಕ ಆರ್. ವಿವೇಕಾನಂದ ಶೆಣೈ ಪ್ರಾಸ್ತಾವಿಕ ಮಾತನಾಡಿದರು, ವೇದಿಕೆಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ನಿರೂಪಿಸಿದರು. ಕಾಪು ಹರೀಶ್ ನಾಯಕ್ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರಿ ಸಂಘಗಳಿಂದ ಜನರ ಆರ್ಥಿಕ ಪ್ರಗತಿ: ಡಾ.ಎಂಎನ್‌ಆರ್‌
ಇರುವೈಲು ಅನಂತ ಭಟ್ಟರ ಸಂಸ್ಮರಣೆ