ಮಹಿಳೆಯರು ಪುರುಷರಷ್ಟೇ ಸಮಾನರು: ಡಾ.ಆಮ್ನಾ ಹೆಗ್ಡೆ

KannadaprabhaNewsNetwork |  
Published : Mar 12, 2026, 01:45 AM IST
10ವಿಶ್ವಮಹಿಳೆ | Kannada Prabha

ಸಾರಾಂಶ

: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಸಾಂಕ್ರಮಿಕ ರೋಗಗಳ ಘಟಕ, ಜಿಲ್ಲಾ ಆಸ್ಪತ್ರೆಯ ಎನ್.ಸಿ.ಡಿ ವಿಭಾಗ ಹಾಗೂ ಶಿರೂರು ಮಠ ವಾಮನ ವಿಠ್ಠಲ ಟ್ರಸ್ಟ್‌ ಆಶ್ರಯದಲ್ಲಿ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ವಿಶ್ವ ಮಹಿಳಾ ದಿನಾಚರಣೆ ನಡೆಯಿತು.

ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಸಾಂಕ್ರಮಿಕ ರೋಗಗಳ ಘಟಕ, ಜಿಲ್ಲಾ ಆಸ್ಪತ್ರೆಯ ಎನ್.ಸಿ.ಡಿ ವಿಭಾಗ ಹಾಗೂ ಶಿರೂರು ಮಠ ವಾಮನ ವಿಠ್ಠಲ ಟ್ರಸ್ಟ್‌ ಆಶ್ರಯದಲ್ಲಿ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ವಿಶ್ವ ಮಹಿಳಾ ದಿನಾಚರಣೆ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಆಸ್ಪತ್ರೆಯ ರೇಡಿಯೋಲಾಜಿಸ್ಟ್ ಡಾ.ಆಮ್ನಾ ಹೆಗ್ಡೆ, ಹಿಂದೆ ಅಬಲೆಯೆಂದು ಕರೆಸಿಕೊಳ್ಳುತ್ತಿದ್ದ ಮಹಿಳೆಯರು ಇಂದು ಸಬಲೆಯರಾಗಿ, ಉತ್ತಮ ಶಿಕ್ಷಣವನ್ನು ಪಡೆದು ಉನ್ನತ ಹುದ್ದೆ, ಚಿತ್ರರಂಗ, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಪುರುಷರಷ್ಟೇ ಸರಿಸಮಾನರಾಗಿ ಸ್ಥಾನ ಪಡೆಯುತಿದ್ದಾರೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸರ್ಜನ್ ಡಾ.ಹೆಚ್ ಅಶೋಕ ಮಾತನಾಡಿ, ಮಹಿಳೆಯರ ಸಾಮಾಜಕ, ಆರ್ಥಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಸಾಧನೆಗಳನ್ನು ಗೌರವಿಸಲು ಹಾಗೂ ಲಿಂಗ ಸಮಾನತೆಗಾಗಿ ಜಾಗೃತಿ ಮೂಡಿಸಲು, ಮಹಿಳಾ ಸಬಲೀಕರಣ, ಹಕ್ಕುಗಳ ರಕ್ಷಣೆ, ತಾರತಮ್ಯದ ನಿರ್ಮೂಲನೆ ಮತ್ತು ಸಮಾಜದಲ್ಲಿ ಮಹಿಳೆಯರ ಕೊಡುಗೆಯನ್ನು ಸ್ಮರಿಸಲು ಈ ದಿನವನ್ನು ಆಚರಿಸಲಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸ್ತ್ರೀ ರೋಗ ತಜ್ಞರಾದ ಡಾ. ಉಷಾ ಹಾಗೂ ನರ್ಸಿಂಗ್ ಅಧಿಕಾರಿ ಅರುಣ ಮಹಿಳಾ ದಿನಾಚರಣೆಯ ಬಗ್ಗೆ ಮತಾನಾಡಿದರು. ವೈದ್ಯಕೀಯ ತಜ್ಞರಾದ ಡಾ. ದಯಮಣಿ, ಡಾ. ದಿವ್ಯ, ರಕ್ತನಿಧಿ ವೈದ್ಯಾಧಿಕಾರಿ ಡಾ. ವೀಣಾ ಕುಮಾರಿ, ಆಸ್ಪತ್ರೆಯ ನರ್ಸಿಂಗ್ ಅಧೀಕ್ಷಕಿ ರತ್ನವತಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಎನ್.ಸಿ.ಡಿ ಯ ಜಿಲ್ಲಾ ಸಮಾಲೋಚಕಿ ಡಾ. ಅಂಜಲಿ ಹಾಗೂ ಆಪ್ತ ಸಮಾಲೋಚಕ ಮನು. ಎಸ್. ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

14ರಂದು ದ.ಕ. ಜಿಲ್ಲಾದ್ಯಂತ ರಾಷ್ಟ್ರೀಯ ಲೋಕ ಅದಾಲತ್‌
ಎಲ್‌ಪಿಜಿ ಬೆಲೆ ಏರಿಕೆ: ಹೆದ್ದಾರಿ ಮಧ್ಯೆ ಚಹಾ ಮಾಡಿ ಕಾಂಗ್ರೆಸ್ ಪ್ರತಿಭಟನೆ