2026-27 ಸಾಲಿನ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಪ್ರಥಮ ಕಾರ್ಯಕಾರಿ ಸಮಿತಿ ಸಭೆಯು ಬ್ರಹ್ಮಾವರದ ಹೋಟೆಲ್ ಆಶ್ರಯದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಮಟ್ಟಾರ್ ವಸಂತ್ ಕಿಣಿ ಅವರ ನೇತೃತ್ವದಲ್ಲಿ ಸಂಘದ ವಿಷಯಗಳನ್ನು ಚರ್ಚಿಸಿ ಬಳಿಕ ಸಂಘದ ಮಾಜಿ ಅಧ್ಯಕ್ಷ ಹರೀಶ್ ಕುಂದರ್ ಅವರ ಸಾಧನೆಯನ್ನು ಗೌರವಿಸಿ ಸನ್ಮಾನಿಸಲಾಯಿತು.
ಉಡುಪಿ: 2026-27 ಸಾಲಿನ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಪ್ರಥಮ ಕಾರ್ಯಕಾರಿ ಸಮಿತಿ ಸಭೆಯು ಬ್ರಹ್ಮಾವರದ ಹೋಟೆಲ್ ಆಶ್ರಯದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಮಟ್ಟಾರ್ ವಸಂತ್ ಕಿಣಿ ಅವರ ನೇತೃತ್ವದಲ್ಲಿ ಸಂಘದ ವಿಷಯಗಳನ್ನು ಚರ್ಚಿಸಿ ಬಳಿಕ ಸಂಘದ ಮಾಜಿ ಅಧ್ಯಕ್ಷ ಹರೀಶ್ ಕುಂದರ್ ಅವರ ಸಾಧನೆಯನ್ನು ಗೌರವಿಸಿ ಸನ್ಮಾನಿಸಲಾಯಿತು.
ಅಲ್ಲದೇ 35 ವರ್ಷದಿಂದ ಸೇವೆ ಸಲ್ಲಿಸಿದ ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಸೀತಾರಾಮ್ ಶೆಟ್ಟಿ ಅವರನ್ನೂ ಕೂಡ ಗೌರವಿಸಿ ಸನ್ಮಾನಿಸಲಾಯಿತು. ಸಭೆಯಲ್ಲಿ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಮಾಜಿ ಅಧ್ಯಕ್ಷ ವಿಶ್ವನಾಥ ಭಟ್, ಪ್ರಮುಖರಾದ ಚಿತ್ತರಂಜನ್ ಭಟ್, ಪ್ರಶಾಂತ್ ಬಾಳಿಗಾ, ಗಣೇಶ್ ಕಿಣಿ, ಜಾನ್ ಆರ್. ಡಿ. ಸಿಲ್ವ, ಹರೀಶ್ ಕುಂದರ್, ವಲ್ಲಭ ಭಟ್, ಹೃಷಿಕೇಶ್ ಹೆಗ್ಡೆ, ಕೃಷ್ಣಪ್ರಸಾದ್ ಶೆಟ್ಟಿ, ಕಾರ್ಯದರ್ಶಿ ರಂಜನ್ ಕಲ್ಕೂರ ಹಾಗೂ ಸಂಘದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.