ಉಡುಪಿ: ಪತ್ರಿಕಾ ಭವನದಲ್ಲಿ ಗ್ರಂಥಾಲಯ ಉದ್ಘಾಟನೆ

KannadaprabhaNewsNetwork | Published : Aug 19, 2024 12:48 AM

ಸಾರಾಂಶ

ಮನೆಯೇ ಗ್ರಂಥಾಲಯ ಕಾರ್ಯಕ್ರಮದಡಿ ಉಡುಪಿ ಪತ್ರಿಕಾ ಭವನದಲ್ಲಿ ಸ್ಥಾಪಿಸಲಾದ ಗ್ರಂಥಾಲಯವನ್ನು ಉಡುಪಿ ಇಂಚರ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ವೈ.ಸುದರ್ಶನ್ ರಾವ್ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಉಡುಪಿ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಮನೆಯೇ ಗ್ರಂಥಾಲಯ ಕಾರ್ಯಕ್ರಮದಡಿ ಉಡುಪಿ ಪತ್ರಿಕಾ ಭವನದಲ್ಲಿ ಸ್ಥಾಪಿಸಲಾದ ಗ್ರಂಥಾಲಯವನ್ನು ಉಡುಪಿ ಇಂಚರ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ವೈ.ಸುದರ್ಶನ್ ರಾವ್ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು, ಕಂಪ್ಯೂಟರ್, ಮೊಬೈಲ್‌ಗಳ ಪರಿಣಾಮವಾಗಿ ಮನುಷ್ಯ ತನ್ನ ಮೆದುಳಿನ ಶಕ್ತಿಯನ್ನು ಕಳೆದುಕೊಳ್ಳುತ್ತಿದ್ದಾನೆ. ಹಾಗಾಗಿ ಓದುವ ಹವ್ಯಾಸ ಬೆಳೆಸಿಕೊಳ್ಳುವುದು ಅತೀ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಂದು ಮನೆಯಲ್ಲಿ ಪುಸ್ತಕಾಲಯವನ್ನು ಸ್ಥಾಪಿಸಬೇಕು ಎಂದು ಅಭಿಪ್ರಾಯಪಟ್ಟರು. ಪತ್ರಕರ್ತರ ಸಂಘ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಅವರಿಗೆ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಗ್ರಂಥಾಲಯಕ್ಕೆ ಪುಸ್ತಕಗಳನ್ನು ಹಸ್ತಾಂತರಿಸಿದರು. ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷ ಬಸ್ರೂರು ರಾಜೀವ ಶೆಟ್ಟಿ, ಕಾರ್ಯದರ್ಶಿ ಡಾ.ಗಣನಾಥ್ ಎಕ್ಕಾರ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್, ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ವಿಶ್ವನಾಥ್ ಶೆಣೈ ಮಾತನಾಡಿದರು.ಕಸಾಪ ಉಡುಪಿ ತಾಲೂಕು ಗೌರವ ಕಾರ್ಯದರ್ಶಿಗಳಾದ ಜನಾರ್ದನ್ ಕೊಡವೂರು, ರಂಜನಿ ವಸಂತ್, ಸದಸ್ಯರಾದ ಸಿದ್ದಬಸಯ್ಯಸ್ವಾಮಿ ಚಿಕ್ಕಮಠ, ವಸಂತ್, ಕಸಾಪ ಜಿಲ್ಲಾ ಸಹ ಕಾರ್ಯದರ್ಶಿ ಮೋಹನ್ ಉಡುಪ ಹಂದಾಡಿ, ಪತ್ರಕರ್ತರ ಸಂಘದ ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ಉಡುಪಿ ಪತ್ರಿಕಾ ಭವನ ಸಮಿತಿ ಸಂಚಾಲಕ ಅಜಿತ್ ಆರಾಡಿ ಉಪಸ್ಥಿತರಿದ್ದರು.ಕಸಾಪ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ಮನೆಯೇ ಗ್ರಂಥಾಲಯದ ಸಂಚಾಲಕ ರಾಘವೇಂದ್ರ ಪ್ರಭು ಕರ್ವಾಲು ವಂದಿಸಿದರು. ಪತ್ರಕರ್ತ ರಹೀಂ ಉಜಿರೆ ಕಾರ್ಯಕ್ರಮ ನಿರೂಪಿಸಿದರು.

Share this article