ಉಡುಪಿ: ನಲ್ ಜಲ್ ಮಿತ್ರ ಬಹು ಕೌಶಲ್ಯ ತರಬೇತಿ ಉದ್ಘಾಟನೆ

KannadaprabhaNewsNetwork | Published : Dec 17, 2024 1:00 AM

ಸಾರಾಂಶ

ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಕೌಶಲಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ನಲ್ ಜಲ್ ಮಿತ್ರ - ಬಹು ಕೌಶಲ್ಯ ತರಬೇತಿ ಕಾರ್ಯಕ್ರಮ ಇಲ್ಲಿನ ಅಲೆವೂರು ಪ್ರಗತಿ ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಕೌಶಲಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ನಲ್ ಜಲ್ ಮಿತ್ರ - ಬಹು ಕೌಶಲ್ಯ ತರಬೇತಿ ಕಾರ್ಯಕ್ರಮ ಇಲ್ಲಿನ ಅಲೆವೂರು ಪ್ರಗತಿ ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆಯಿತು.

ಜಿ.ಪಂ. ಯೋಜನಾ ನಿರ್ದೇಶಕ ಶ್ರೀನಿವಾಸ್ ರಾವ್ ಕಾರ್ಯಕ್ರಮ ಉದ್ಘಾಟಿಸಿ, ಜಿಲ್ಲೆಯಲ್ಲಿ ಜಲ್ ಜೀವನ್ ಮಿಷನ್ ಯೋಜನೆಯಡಿ ಮನೆಮನೆಗೆ ನಳ್ಳಿ ನೀರಿನ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ. ಈ ಜಲ ಜೀವನ್ ಮಿಷನ್ ಅಡಿಯಲ್ಲಿ ನಲ್ ಜಲ್ ಮಿತ್ರ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲು ಪ್ರತಿ ಗ್ರಾ.ಪಂ.ನಿಂದ 2 ಸಂಜೀವಿನಿ ಸ್ವಸಹಾಯ ಗುಂಪಿನ ಮಹಿಳೆಯರನ್ನು ಆಯ್ಕೆ ಮಾಡಲಾಗಿದೆ. ಈ ಸದ್ಯಸರಿಗೆ 17 ದಿನದ ಬಹು ಕೌಶಲ್ಯ ತರಬೇತಿಯನ್ನು ನೀಡಿ ಗ್ರಾಪಂ ನಿಯೋಜನೆ ಮಾಡಲಾಗುವುದು ಎಂದರು.ಉಡುಪಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ವಿಜಯ ಮಾತನಾಡಿ, ಸಂಜೀವಿನಿ ಯೋಜನೆಯಡಿ ವಿನೂತನ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಪ್ರಸ್ತುತ ಸಂಜೀವಿನಿ ಸ್ವಸಹಾಯ ಸಂಘದ ಮಹಿಳೆಯರು ವಿವಿಧ ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇಂದು ನಲ್ ಜಲ್ ಮಿತ್ರ ಕಾರ್ಯಕ್ರಮದಡಿ ಸಂಜೀವಿನಿ ಗುಂಪಿನ ಮಹಿಳೆಯರಿಗೆ ಬಹು ಕೌಶಲ್ಯ ತರಬೇತಿ ನೀಡಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಜಲ್ ಜೀವನ್ ಮಿಷನನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲಾಗುವುದು ಎಂದು ಹೇಳಿದರು.ತರಬೇತಿ ಕಾರ್ಯಕ್ರಮದಲ್ಲಿ ಉಡುಪಿ ತಾಪಂ ಸಹಾಯಕ ನಿರ್ದೇಶಕ ಫರ್ಝಾನ, ಜಲ್ ಜೀವನ್ ಮಿಷನ್ ಇದರ ರಾಜ್ಯ ಸಂಪನ್ಮೂಲ ವ್ಯಕ್ತಿ ಜೋಸೆಫ್ ರೆಬ್ಬೆಲೋ, ನಲ್ ಜಲ್ ಮಿತ್ರ ತರಬೇತಿಯ ತರಬೇತಿದಾರರಾದ ಗಣಪತಿ ಭಟ್, ಜಿಲ್ಲಾ ಕೌಶಲ್ಯ ಮತ್ತು ಉದ್ಯಮಶೀಲತಾ ಇಲಾಖೆಯ ಸಹಾಯಕ ನಿರ್ದೇಶಕ ಅರುಣ್ ಪಿ., ಸಂಜೀವಿನಿ ಯೋಜನೆಯ ಜಿಲ್ಲಾ ವ್ಯವಸ್ಥಾಪಕ ಅವಿನಾಶ್ ಮತ್ತು ಸಂಜೀವಿನಿ ಯೋಜನೆಯ ಹಾಗೂ ಕೌಶಲ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

Share this article