ಉಡುಪಿ‌ ಜಿಲ್ಲೆಯ ಸಾಧನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಶ್ಲಾಘನೆ

KannadaprabhaNewsNetwork |  
Published : Apr 25, 2026, 03:15 AM IST
ಲಕ್ಷ್ಮೀ ಹೆಬ್ಬಾಳ್ಕರ್ | Kannada Prabha

ಸಾರಾಂಶ

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ‌ ಶೇಕಡ 98.18 ರಷ್ಟು ಫಲಿತಾಂಶ ಪಡೆಯುವ ಮೂಲಕ ಕರ್ನಾಟಕಕ್ಕೆ ಎರಡನೇ ಸ್ಥಾನ ಪಡೆದ ಉಡುಪಿ ಜಿಲ್ಲೆಯ ಸಾಧನೆಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ‌ ಶೇಕಡ 98.18 ರಷ್ಟು ಫಲಿತಾಂಶ ಪಡೆಯುವ ಮೂಲಕ ಕರ್ನಾಟಕಕ್ಕೆ ಎರಡನೇ ಸ್ಥಾನ ಪಡೆದ ಉಡುಪಿ ಜಿಲ್ಲೆಯ ಸಾಧನೆಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಕರಾವಳಿ ಜಿಲ್ಲೆ ಉಡುಪಿ ಶೈಕ್ಷಣಿಕವಾಗಿ ಮುಂದಿರುವ ಜಿಲ್ಲೆ, ಜಿಲ್ಲೆಯ ಹೊರಭಾಗಗಳಿಂದಲೂ ಬಂದು ಇಲ್ಲಿ ವ್ಯಾಸಂಗ ಮಾಡುತ್ತಾರೆ. ಉಡುಪಿ‌ ಜಿಲ್ಲೆಯ ಸಾಧನೆ ನಿಜಕ್ಕೂ ಮೆಚ್ಚುವಂಥದ್ದು ಎಂದು ಸಚಿವರು ತಿಳಿಸಿದ್ದಾರೆ. ಜಿಲ್ಲೆ ಎರಡನೇ ಸ್ಥಾನ ಪಡೆಯಲು ಕಾರಣಿಭೂತರಾದ ಶಿಕ್ಷಣ ಇಲಾಖೆಯ ಸಿಬ್ಬಂದಿ ವರ್ಗದವರಿಗೆ, ಎಲ್ಲಾ‌ ಕಾಲೇಜುಗಳಿಗೆ, ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ವಿದ್ಯಾರ್ಥಿಗಳ ಜೀವನ ಉಜ್ವಲವಾಗಿರಲಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರೀತಮ್‌ಗೆ ಅಭಿನಂದನೆ: ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕುಂದಾಪುರದ ಶಂಕರನಾರಾಯಣ ಮದರ್ ಥೆರೇಸಾ ಮೆಮೋರಿಯಲ್ ಸ್ಕೂಲ್‌ನ ಪ್ರೀತಮ್ ಜಿ. ಪೂಜಾರಿ ಅವರನ್ನು ಸಚಿವರು ಅಭಿನಂದಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉಡುಪಿ ಜಿಲ್ಲೆ: ಫಲಿತಾಂಶ ಹೆಚ್ಚಳ, 2ನೇ ಸ್ಥಾನ
ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್‌ - ಶೇ 100 ಸಾಧನೆ