ಉಡುಪಿ: ಪೌರ ಕಾರ್ಮಿಕರ ಪ್ರತಿಭಟನೆ, ಬೇಡಿಕೆ ಆಲಿಸಿದ ಜಯಪ್ರಕಾಶ ಹೆಗ್ಡೆ

KannadaprabhaNewsNetwork |  
Published : May 29, 2025, 12:40 AM ISTUpdated : May 29, 2025, 12:41 AM IST
28ಪೌರ | Kannada Prabha

ಸಾರಾಂಶ

ಕರ್ನಾಟಕ ರಾಜ್ಯ ಪೌರ ನೌಕರರ ಸಂಘವು ಸರ್ಕಾರದ ಮುಂದೆ ತಮ್ಮ ಬೇಡಿಕೆಗಳನ್ನಿಟ್ಟು ರಾಜ್ಯಾದಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಹೂಡಿದ್ದು, ಅದರಂತೆ ಉಡುಪಿ ನಗರಸಭೆಯ ಪೌರ ನೌಕರರು ಹಾಗೂ ಪೌರ ಕಾರ್ಮಿಕರು ನಗರಸಭೆಯ ಮುಂಭಾಗ ಬುಧವಾರ ಮುಷ್ಕರ ಆರಂಭಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿ

ಕರ್ನಾಟಕ ರಾಜ್ಯ ಪೌರ ನೌಕರರ ಸಂಘವು ಸರ್ಕಾರದ ಮುಂದೆ ತಮ್ಮ ಬೇಡಿಕೆಗಳನ್ನಿಟ್ಟು ರಾಜ್ಯಾದಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಹೂಡಿದ್ದು, ಅದರಂತೆ ಉಡುಪಿ ನಗರಸಭೆಯ ಪೌರ ನೌಕರರು ಹಾಗೂ ಪೌರ ಕಾರ್ಮಿಕರು ನಗರಸಭೆಯ ಮುಂಭಾಗ ಬುಧವಾರ ಮುಷ್ಕರ ಆರಂಭಿಸಿದ್ದಾರೆ.ಪ್ರತಿಭಟನಾ ಸ್ಥಳಕ್ಕೆ ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಅವರು ಆಗಮಿಸಿ, ಸ್ಥಳದಿಂದಲೇ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಪೌರ ನೌಕರರ ಸಂಘದ ಪ್ರಮುಖ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರುವಂತೆ ತಿಳಿಸಿದರು. ಶೀಘ್ರದಲ್ಲೇ ತಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಖತಃ ಭೇಟಿಯಾಗಿ ಪೌರ ನೌಕರರ ಪ್ರಮುಖ ಬೇಡಿಕೆಗಳನ್ನು ಮನವರಿಕೆ ಮಾಡುವುದಾಗಿ ಹೇಳಿದರು.

ಪೌರ ನೌಕರರಿಂದ ಮನವಿ ಸ್ವೀಕರಿಸಿ, ಪ್ರತಿಭಟನಾನಿರತ ಪೌರ ನೌಕರರನ್ನು ಉದ್ದೇಶಿಸಿ ಮಾತನಾಡಿ, ತಾವು ಸ್ವೀಕರಿಸಿದ ಮನವಿಯನ್ನು ಮುಖ್ಯಮಂತ್ರಿ ಗಮನಕ್ಕೆ ತಂದು ಈಡೇರಿಸುವ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.ಉಡುಪಿ ನಗರಸಭೆಯ ವಿಪಕ್ಷ ನಾಯಕ ರಮೇಶ್ ಕಾಂಚನ್ ಮಾತನಾಡಿ, ಸ್ಥಳೀಯಾಡಳಿತಕ್ಕೆ ಉತ್ತಮ ಹೆಸರು ಪಡೆಯಬೇಕೆಂದರೆ ಪೌರಕಾರ್ಮಿಕರು ಹಾಗೂ ಪೌರ ನೌಕರರು ಉತ್ತಮ ಕೆಲಸ ಮಾಡಿದರೆ ಮಾತ್ರ ಸಾಧ್ಯ. ಪೌರ ನೌಕರರ‌ ಹಾಗೂ ಪೌರಕಾರ್ಮಿಕರ ನ್ಯಾಯಯುತ ಬೇಡಿಕೆ ಈಡೇರಿವಲ್ಲಿ ನಾವು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದರು.ಉಡುಪಿ ನಗರಸಭೆ ಸದಸ್ಯರಾದ ಅಮೃತಾ ಕೃಷ್ಣಮೂರ್ತಿ ಆಚಾರ್ಯ, ವಿಜಯ್ ಪೂಜಾರಿ, ನಗರಸಭಾ ಮಾಜಿ ಉಪಾಧ್ಯಕ್ಷ ಸಂಧ್ಯಾ ತಿಲಕ್‌ರಾಜ್, ಸತೀಶ್ ಕೊಡವೂರು, ಕೃಷ್ಣಮೂರ್ತಿ ಆಚಾರ್ಯ‌, ಸಂಜಯ್ ಆಚಾರ್ಯ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ : ಇಕ್ಬಾಲ್
ಜನ ನಂಗೆ ಇನ್ನೊಂದು ಅವಕಾಶ ಕೊಡಲಿ : ಎಚ್ಡಿಕೆ