ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಲು ರಾಜ್ಯಪಾಲರಿಗೆ ಉಡುಪಿ ಜೆಡಿಎಸ್‌ ಮನವಿ

KannadaprabhaNewsNetwork |  
Published : Jul 02, 2025, 12:25 AM IST
30ಜೆಡಿಎಸ್ | Kannada Prabha

ಸಾರಾಂಶ

ಹಲವು ಸಮಸ್ಯೆಗಳಿಂದ ತುಂಬಿರುವ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು ಸೂಕ್ತ ರೀತಿಯಲ್ಲಿ ಸಂವಿಧಾನಬದ್ಧವಾಗಿ ಆಡಳಿತ ನಡೆಸಲು ನಿರ್ದೇಶನ ನೀಡಬೇಕು ಎಂದು ಉಡುಪಿ ಜಿಲ್ಲಾ ಜೆಡಿಎಸ್ ವತಿಯಿಂದ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ರಾಜ್ಯ ಕಾಂಗ್ರೆಸ್ ಸರ್ಕಾರವು ಕಳೆದ 2 ವರ್ಷಗಳಿಂದ ಜನರಿಗೆ ಉತ್ತಮ ಮತ್ತು ಕ್ರಿಯಾಶೀಲ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಎಲ್ಲಾ ಇಲಾಖೆಗಳಲ್ಲಿ ಲಂಚಗುಳಿತನ, ಭ್ರಷ್ಟಾಚಾರವು ಹೆಚ್ಚುತ್ತಿದ್ದು, ಸ್ವಜನಪಕ್ಷಪಾತ ತುಂಬಿ ತುಳುಕುತ್ತಿದೆ. ಈ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು ಸೂಕ್ತ ರೀತಿಯಲ್ಲಿ ಸಂವಿಧಾನಬದ್ಧವಾಗಿ ಆಡಳಿತ ನಡೆಸಲು ನಿರ್ದೇಶನ ನೀಡಬೇಕು ಎಂದು ಉಡುಪಿ ಜಿಲ್ಲಾ ಜೆಡಿಎಸ್ ವತಿಯಿಂದ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.ರಾಜ್ಯದ ಜನತೆಗೆ ಮೂಲಭೂತ ಸೌಕರ್ಯಗಳಾದ ರಸ್ತೆ, ಸೇತುವೆ, ಕೆರೆಗಳ ಪುನಶ್ಚೇತನ, ಒಳಚರಂಡಿ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಒದಗಿಸುವಲ್ಲಿ ಸರ್ಕಾರ ಸಂಪೂರ್ಣವ ವಿಫಲವಾಗಿದೆ. ಸರ್ಕಾರದ ಕೆಲಸ ಮಾಡಿದ ಗುತ್ತಿಗೆದಾರರಿಗೆ ಸರ್ಕಾರ ಹಣ ಪಾವತಿ ಮಾಡುತ್ತಿಲ್ಲ. ಪರಿಶಿಷ್ಟರಿಗೆ ಮೀಸಲಿಟ್ಟ ಹಣ ದುರುಪಯೋಗವಾಗುತ್ತಿದೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.

ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರು ವಸತಿ ಇಲಾಖೆಯಲ್ಲಿ ಲಂಚ ನೀಡುವವರಿಗೆ ಮಾತ್ರ ಮನೆಗಳನ್ನು ನೀಡುತ್ತಿರುವ ಬಗ್ಗೆ ಬಹಿರಂಗವಾಗಿ ಆರೋಪಿಸಿದ್ದಾರೆ, ಈ ಭ್ರಷ್ಟಾಚಾರದ ಆರೋಪ ಹೊತ್ತಿರುವ ಸಚಿವ ಜಮೀರ್ ಅಹಮದ್‌ರನ್ನು ಸಚಿವ ಸಂಪುಟದಿಂದ ತಕ್ಷಣ ವಜಾಗೊಳಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ಸಂದರ್ಭ ಪಕ್ಷದ ಜಿಲ್ಲಾ ಕಾರ್ಯಧ್ಯಕ್ಷ ವಾಸುದೇವ ರಾವ್, ರಾಜ್ಯ ಕಾರ್ಯದರ್ಶಿ ಸುಧಾಕರ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ ಆಚಾರ್ಯ, ರಾಜ್ಯ ಕಾರ್ಯದರ್ಶಿ ಗಂಗಾಧರ ಬಿರ್ತಿ, ಬ್ಲಾಕ್ ಅಧ್ಯಕ್ಷರಾದ ಸಂದೇಶ್ ಭಟ್, ಶ್ರೀಕಾಂತ್ ಹೆಬ್ರಿ, ದೇವರಾಜ್ ತೊಟ್ಟಂ, ಯುವ ಜನತಾದಳ ಅಧ್ಯಕ್ಷ ಸಂಜಯ್ ಕುಮಾರ್, ನಾಯಕರಾದ ಚಂದ್ರಹಾಸ ಏರ್ಮಾಳ್, ಭರತ್ ಶೆಟ್ಟಿ, ರಮೇಶ್ ಕುಂದಾಪುರ, ಮನ್ಸೂರ್ ಇಬ್ರಾಹಿಂ, ಹುಸೇನ್ ಹೈಕಾಡಿ, ಸುರೇಶ್ ದೇವಾಡಿಗ, ರಾಮ ರಾವ್, ವೆಂಕಟೇಶ್ ಪಡುಬಿದ್ರಿ, ಬಿ.ಕೆ. ಮೊಹಮ್ಮದ್, ವಿನ್ಸೆಂಟ್ ಸುನಿಲ್, ರಂಗ ಕೋಟ್ಯಾನ್, ಆಶ್ರಫ್ ಪಡುಬಿದ್ರಿ, ಗುರುರಾಜ್ ಶೆಟ್ಟಿ, ಉಮಾನಾಥ ಶೆಟ್ಟಿ, ಶಂಶುದ್ದಿನ್ ಮಜೂರು, ಮಧುಕರ್ ಅಂಬಲಪಾಡಿ, ಸುರೇಶ್ ಉಡುಪಿ, ಪ್ರವೀಣ್ ಎರ್ಮಾಳ್, ಪ್ರಸಾದ್ ಪೂಜಾರಿ, ಉಮೇಶ್ ಶೆಟ್ಟಿ ಹಾಗೂ ಪಕ್ಷದ ಕಾರ್ಯಕರ್ತರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಾಳಿಪಟ ದಾರ ಕುತ್ತಿಗೆ ಸೀಳಿ ಮಗಳನ್ನು ಹಾಸ್ಟೆಲ್‌ನಿಂದ ಕರೆತರಲು ಹೊರಟಿದ್ದ ಅಪ್ಪ ದಾರುಣ ಸಾವು
ಪೌರಾಯುಕ್ತೆಗೆ ಬೆಂಕಿ: ಕಾಂಗ್ರೆಸ್ಸಿಗನಿಂದ ಧಮ್ಕಿ