ಮಾಧ್ಯಮಗಳು ಸತ್ಯನಿಷ್ಠವಾಗಿರಲಿ: ಡಾ.ಶುಭಾ ಎಚ್‌.ಎಸ್‌.

KannadaprabhaNewsNetwork |  
Published : Jul 02, 2026, 02:45 AM IST
ಆಗಬೇಕು | Kannada Prabha

ಸಾರಾಂಶ

ಸಮಾಜದ ಸಮಸ್ಯೆಗಳನ್ನು ಮುನ್ನೆಲೆಗೆ ತರುವುದು ಪತ್ರಕರ್ತರ ಕರ್ತವ್ಯ. ವ್ಯವಸ್ಥೆಯ ಲೋಪದೋಷಗಳನ್ನು ಸಮಾಜದ ಮುಂದೆ ಇಡುವುದು ಪತ್ರಿಕೋದ್ಯಮದ ಪ್ರಮುಖ ಕೆಲಸವಾಗಿದೆ. ಸಾಮಾಜಿಕ ಜಾಲತಾಣಗಳ ಅಬ್ಬರದ ನಡುವೆಯೂ ಮಾಧ್ಯಮಗಳು ಸತ್ಯವನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕು ಎಂದು ಮಣಿಪಾಲ ಇನ್ಸಿಟ್ಯೂಟ್‌ ಆಫ್‌ ಕಮ್ಯುನಿಕೇಶನ್‌ನ ನಿರ್ದೇಶಕಿ ಡಾ.ಶುಭಾ ಎಚ್‌.ಎಸ್‌. ಹೇಳಿದ್ದಾರೆ.

ಉಡುಪಿ: ಸಮಾಜದ ಸಮಸ್ಯೆಗಳನ್ನು ಮುನ್ನೆಲೆಗೆ ತರುವುದು ಪತ್ರಕರ್ತರ ಕರ್ತವ್ಯ. ವ್ಯವಸ್ಥೆಯ ಲೋಪದೋಷಗಳನ್ನು ಸಮಾಜದ ಮುಂದೆ ಇಡುವುದು ಪತ್ರಿಕೋದ್ಯಮದ ಪ್ರಮುಖ ಕೆಲಸವಾಗಿದೆ. ಸಾಮಾಜಿಕ ಜಾಲತಾಣಗಳ ಅಬ್ಬರದ ನಡುವೆಯೂ ಮಾಧ್ಯಮಗಳು ಸತ್ಯವನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕು ಎಂದು ಮಣಿಪಾಲ ಇನ್ಸಿಟ್ಯೂಟ್‌ ಆಫ್‌ ಕಮ್ಯುನಿಕೇಶನ್‌ನ ನಿರ್ದೇಶಕಿ ಡಾ.ಶುಭಾ ಎಚ್‌.ಎಸ್‌. ಹೇಳಿದ್ದಾರೆ.ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪ್ರತಿಕಾ ಭವನ ಸಮಿತಿ ಹಾಗೂ ಉಡುಪಿ ಲೋಂಬಾರ್ಡ್‌ ಮೆಮೋರಿಯಲ್‌(ಮಿಷನ್‌) ಆಸ್ಪತ್ರೆಯ ಇವುಗಳ ಸಹಯೋಗದೊಂದಿಗೆ ಉಡುಪಿ ಐಎಂಎ ಭವನದಲ್ಲಿ ಆಯೋಜಿಸಲಾದ ಪತ್ರಿಕಾ ದಿನಾಚರಣೆ ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ ಅಧ್ಯಕ್ಷತೆ ವಹಿಸಿದ್ದರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಉಡುಪಿ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕಿ ಬಿ.ಮಂಜುನಾಥ್‌ ಮಾತನಾಡಿದರು.ಹಿರಿಯ ವ್ಯಂಗ್ಯಚಿತ್ರಕಾರ ಜೇಮ್ಸ್‌ ವಾಝ್‌ ಅವರಿಗೆ ಪತ್ರಿಕಾ ದಿನದ ಗೌರವ ಪ್ರದಾನ ಮಾಡಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಬೆಂಗಳೂರು ಡಾ.ಬಿ.ಆರ್‌.ಅಂಬೇಡ್ಕರ್‌ ತಂತ್ರಜ್ಞಾನ ಸಂಸ್ಥೆಯ ಆಡಳಿತಾಧಿಕಾರಿ ಎಸ್‌.ಎಚ್‌.ಸಂತೋಷ್‌ ಕುಮಾರ್‌ ಪತ್ರಕರ್ತರ ಒತ್ತಡ ನಿರ್ವಹಣೆ ಮತ್ತು ವ್ಯಕ್ತಿತ್ವ ವಿಕಸನ ಕುರಿತು ಮಾತನಾಡಿದರು.ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ರಾಜ್ಯ ಸರ್ಕಾರದ ಗ್ರಾಮೀಣ ಪತ್ರಕರ್ತರ ಬಸ್‌ಪಾಸ್‌ ಯೋಜನೆಯ ಫಲಾನುಭವಿ ಯೋಗೀಶ್‌ ಕುಂಭಾಶಿಗೆ ಕಾರ್ಡ್‌ ವಿತರಿಸಲಾಯಿತು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಆಸ್ಟ್ರೋ ಮೋಹನ್‌, ರಾಷ್ಟ್ರೀಯ ಸಮಿತಿ ಸದಸ್ಯ ಅರುಣ್‌ ಕುಮಾರ್‌ ಶಿರೂರು, ಉಡುಪಿ ಪತ್ರಿಕಾ ಭವನ ಸಮಿತಿಯ ಸಹಸಂಚಾಲಕ ಅಂಕಿತ್‌ ಶೆಟ್ಟಿ, ಜಿಲ್ಲಾ ಸಂಘದ ಕೋಶಾಧಿಕಾರಿ ಹರೀಶ್‌ ಕುಂದರ್‌ ಇದ್ದರು.

ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್‌ ಪೊಲ್ಯ ಸ್ವಾಗತಿಸಿದರು. ಕಾರ್ಯದರ್ಶಿ ಉಮೇಶ್‌ ಮಾರ್ಪಳ್ಳಿ ಸಂಪನ್ಮೂಲ ವ್ಯಕ್ತಿಯ ಪರಿಚಯ ಮಾಡಿದರು. ಜಿಲ್ಲಾ ಸಮಿತಿ ಸದಸ್ಯ ಅಜಿತ್‌ ಆರಾಡಿ ಪ್ರತಿಭಾ ಪುರಸ್ಕಾರದ ಪಟ್ಟಿ ವಾಟಿಸಿದರು. ಸನ್ಮಾನ ಪತ್ರವನ್ನು ಉಡುಪಿ ಪ್ರತಿಕಾ ಭವನ ಸಮಿತಿಯ ಸದಸ್ಯ ಮೈಕಲ್‌ ರೋಡ್ರಿಗಸ್‌ ವಾಚಿಸಿದರು. ಜಿಲ್ಲಾ ಸಂಘದ ಉಪಾಧ್ಯಕ್ಷ ಉದಯ ಕುಮಾರ್‌ ಮುಂಡ್ಕೂರು ವಂದಿಸಿದರು. ಪತ್ರಕರ್ತೆ ಅಕ್ಷತಾ ಗಿರೀಶ್‌ ಐತಾಳ್‌ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೇಶವ ಅಮೈಗೆ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪ್ರದಾನ
ಮನೆ ಗ್ರಂಥಾಲಯ ಓದುವ ಸಂಸ್ಕೃತಿಗೆ ಪ್ರೇರಣೆ: ಗದ್ಯಾಳ