ಕನ್ನಡ ಭಾಷಿಕ ಗುರುತು ನಮ್ಮ ಹೆಮ್ಮೆ: ಪ್ರೊ. ಬಿ. ಶಿವರಾಮ ಶೆಟ್ಟಿ

KannadaprabhaNewsNetwork |  
Published : Sep 25, 2026, 02:45 AM IST
23ಕನ್ನಡ | Kannada Prabha

ಸಾರಾಂಶ

ಅಜ್ಜರಕಾಡಿನ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕನ್ನಡ ವಿಭಾಗ ಮತ್ತು ಐ.ಕ್ಯೂ.ಎ.ಸಿ., ಗಿಳಿವಿಂಡು ಹಾಗೂ ಮಂಗಳೂರು ವಿಶ್ವವಿದ್ಯಾಲಯದ ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿದ್ದ ನಮ್ಮ ಕನ್ನಡ–ನಮ್ಮ ಗುರುತು ವಿಶೇಷ ಉಪನ್ಯಾಸ ಕಾರ್ಯಕ್ರಮ

ಉಡುಪಿ: ಮನುಷ್ಯನನ್ನು ಹಲವು ಪಾತ್ರಗಳು ಹಾಗೂ ಗುರುತುಗಳ ಮೂಲಕ ಗುರುತಿಸಲಾಗುತ್ತದೆಯಾದರೂ, ಕನ್ನಡ ಭಾಷಿಕ ಗುರುತು ನಮ್ಮ ಹೆಮ್ಮೆ ಎಂದು ಮಂಗಳೂರು ವಿಶ್ವವಿದ್ಯಾಲಯದ ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆಯ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಬಿ. ಶಿವರಾಮ ಶೆಟ್ಟಿ ಹೇಳಿದರು. ಅಜ್ಜರಕಾಡಿನ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕನ್ನಡ ವಿಭಾಗ ಮತ್ತು ಐ.ಕ್ಯೂ.ಎ.ಸಿ., ಗಿಳಿವಿಂಡು ಹಾಗೂ ಮಂಗಳೂರು ವಿಶ್ವವಿದ್ಯಾಲಯದ ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿದ್ದ ನಮ್ಮ ಕನ್ನಡ–ನಮ್ಮ ಗುರುತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಪ್ರೊ. ನಿಕೇತನ ಮಾತನಾಡಿ, ಕನ್ನಡ ಸ್ವಾಭಿಮಾನದ ಭಾಷೆ. ಶಿಕ್ಷಣವು ಕೇವಲ ಅಂಕಗಳನ್ನು ಗಳಿಸುವ ಸಾಧನವಾಗದೆ, ನೈತಿಕತೆ ಹಾಗೂ ಸಚ್ಚಾರಿತ್ರ್ಯ ರೂಪಿಸುವಂತಾಗಬೇಕು ಎಂದು ಆಶಿಸಿದರು.

ಗೋವಿಂದದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಕೃಷ್ಣಮೂರ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ. ಪಿ.ಬಿ. ಪ್ರಸನ್ನ ಸ್ವಾಗತಿಸಿದರು. ವಿದ್ಯಾರ್ಥಿನಿ ಸಮೀಕ್ಷಾ, ಭವ್ಯಶ್ರೀ ಪ್ರಾರ್ಥಿಸಿದರು. ಉಪನ್ಯಾಸಕಿ ತ್ರಿವೇಣಿ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ಚಂದ್ರ ಪಾಟೀಲ್ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಾಟರ್ ಮೆಟ್ರೋ ಯೋಜನೆಗೆ ವೇಗ: ೧೧ ನಿಲ್ದಾಣಗಳು ಅಂತಿಮ
ಕಿಲ್ಲೆ ಮೈದಾನ ಸಾರ್ವಜನಿಕ ಗಣೇಶೋತ್ಸವ ಶೋಭಾಯಾತ್ರೆ