ಉಡುಪಿ ಕಿಸಾನ್ ಕಾಂಗ್ರೆಸ್‌ನಿಂದ ಸಾಧಕ ಕೃಷಿ ಕಾರ್ಮಿಕರಿಗೆ ಸನ್ಮಾನ

KannadaprabhaNewsNetwork |  
Published : Oct 04, 2024, 01:11 AM IST
ಕಿಸಾನ್3 | Kannada Prabha

ಸಾರಾಂಶ

ಉಡುಪಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ವತಿಯಿಂದ ಲಾಲ್ ಬಹದ್ದೂರ್ ಶಾಸ್ತ್ರಿ ಹಾಗೂ ಗಾಂಧಿ ಜಯಂತಿ ಆಚರಣೆ ಪ್ರಯುಕ್ತ ಕೃಷಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಬುಧವಾರ ಉಡುಪಿ ಕಾಂಗ್ರೆಸ್ ಭವನದಲ್ಲಿ ಆಯೋಜಿಸಲಾಗಿತ್ತು.

ಕನ್ನಡಪ್ರಭ ವಾರ್ತೆ ಉಡುಪಿ

ಉಡುಪಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ವತಿಯಿಂದ ಲಾಲ್ ಬಹದ್ದೂರ್ ಶಾಸ್ತ್ರಿ ಹಾಗೂ ಗಾಂಧಿ ಜಯಂತಿ ಆಚರಣೆ ಪ್ರಯುಕ್ತ ಕೃಷಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಬುಧವಾರ ಉಡುಪಿ ಕಾಂಗ್ರೆಸ್ ಭವನದಲ್ಲಿ ಆಯೋಜಿಸಲಾಗಿತ್ತು.ಈ ಸಂದರ್ಭದಲ್ಲಿ ಅಡಕೆಗೆ ಮದ್ದು ಸಿಂಪಡಿಸುವ ಕೃಷಿ ಕಾರ್ಮಿಕ ಹೆಬ್ರಿ ಕುಚ್ಚೂರಿನ ಕೃಷ್ಣ ನಾಯ್ಕ ಹಾಗೂ ತೆಂಗಿನ ಕಾಯಿ ಕೋಯ್ಯುವ ಕೃಷಿ ಕಾರ್ಮಿಕ ಎಲ್ಲೂರು ಗ್ರಾಮದ ಅಶೋಕ್ ಪೂಜಾರಿ ಉಳ್ಳೂರು ಅವರನ್ನು ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಸನ್ಮಾನಿಸಿದರು.ವೇದಿಕೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್, ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಮುಖಂಡರಾದ ಗೀತಾ ವಾಗ್ಳೆ, ಚಂದ್ರಿಕಾ ಶೆಟ್ಟಿ, ಕಿಸಾನ್ ರಾಜ್ಯ ಕಾರ್ಯದರ್ಶಿಗಳಾದ ಉದಯ ಶೆಟ್ಟಿ, ರಾಯ್ಸಿ ಮಾರ್ವಿನ್ ಫರ್ನಾಂಡಿಸ್, ದಿನೇಶ್ ಶಂಕರಪುರ, ಜಿಲ್ಲಾ ಕಾರ್ಯದರ್ಶಿ ಉದಯ ಹೇರೂರ, ಬ್ರಹ್ಮಾವರ ಬ್ಲಾಕ್ ಅಧ್ಯಕ್ಷ ಹರೀಶ್ ಶೆಟ್ಟಿ ಕೀಳಿಂಜೆ, ಕುಂದಾಪುರ ಬ್ಲಾಕ್ ಅಧ್ಯಕ್ಷ ರತ್ನಾಕರ ಶೆಟ್ಟಿ ಕಾಳವಾರ, ಕೋಟ ಅಧ್ಯಕ್ಷ ರವೀಂದ್ರ ಐತಾಳ್, ಹೆಬ್ರಿ ಅಧ್ಯಕ್ಷ ಸುಂದರ್ ಶೆಟ್ಟಿಗಾರ್, ಕುರ್ಕಾಲು ಗ್ರಾಮ ಅಧ್ಯಕ್ಷ ಸೋಮಯ್ಯ ಕಾಂಚನ್, ಹರೀಶ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. ವಂಡ್ಸೆ ಕಿಸಾನ್ ಅಧ್ಯಕ್ಷ ಗೋವರ್ಧನ್ ಜೋಗಿ ಗಾಂಧಿ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಶಿಧರ ಶೆಟ್ಟಿ ಎಲ್ಲೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಾಧ್ಯಕ್ಷ ಶೇಖರ್ ಕೋಟ್ಯಾನ್ ವಂದಿಸಿದರು. ಜ್ಯೋತಿ ಹೆಬ್ಬಾರ್ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು : ನಗರದ ವಿವಿಧೆಡೆ ನಾಳೆ ವಿದ್ಯುತ್ ವ್ಯತ್ಯಯ-ಎಲ್ಲೆಲ್ಲಿ ?
ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌