ರೈತರು ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ

KannadaprabhaNewsNetwork |  
Published : Sep 04, 2026, 03:15 AM IST
ಸಾಂದರ್ಭಿಕ ಚಿತ್ರ. | Kannada Prabha

ಸಾರಾಂಶ

ಪಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸಾನ್) ಯೋಜನೆಯಡಿ ಕೇಂದ್ರ ಸರ್ಕಾರದಿಂದ ನೀಡಲಾಗುವ ಆರ್ಥಿಕ ನೆರವು ಪಡೆಯಲು ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ರೈತ ಫಲಾನುಭವಿಗಳಿಗೆ ಯೋಜನೆಯ ಮುಂದಿನ ಕಂತಿನ ಆರ್ಥಿಕ ನೆರವು ಬಿಡುಗಡೆಯಾಗುವುದಿಲ್ಲ ಎಂದು ಉಡುಪಿ ಜಿಲ್ಲಾ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಉಡುಪಿ: ಪಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸಾನ್) ಯೋಜನೆಯಡಿ ಕೇಂದ್ರ ಸರ್ಕಾರದಿಂದ ನೀಡಲಾಗುವ ಆರ್ಥಿಕ ನೆರವು ಪಡೆಯಲು ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ರೈತ ಫಲಾನುಭವಿಗಳಿಗೆ ಯೋಜನೆಯ ಮುಂದಿನ ಕಂತಿನ ಆರ್ಥಿಕ ನೆರವು ಬಿಡುಗಡೆಯಾಗುವುದಿಲ್ಲ ಎಂದು ಉಡುಪಿ ಜಿಲ್ಲಾ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಈಗಾಗಲೇ ಈ ರೈತರಿಗೆ ಇ-ಕೆವೈಸಿ ಪೂರ್ಣಗೊಳಿಸುವಂತೆ ಕೃಷಿ ಇಲಾಖೆಯಿಂದ ಮಾಹಿತಿ ಹಾಗೂ ಸೂಚನೆ ನೀಡಲಾಗಿದ್ದು, ಆದಾಗ್ಯೂ ಇನ್ನೂ ಕೆಲವು ರೈತರು ಇ-ಕೆವೈಸಿ ಮಾಡಿಸಿಕೊಂಡಿಲ್ಲ. ಆದ್ದರಿಂದ, ಇ-ಕೆವೈಸಿ ಮಾಡಿಸಿಕೊಳ್ಳಲು ಇದೇ ಕೊನೆಯ ಅವಕಾಶವಾಗಿದ್ದು, ಇ-ಕೆವೈಸಿ ಬಾಕಿ ಇರುವ ರೈತ ಫಲಾನುಭವಿಗಳು ವಿಳಂಬ ಮಾಡದೆ ತಮ್ಮ ಆಧಾರ್‌ ಕಾರ್ಡ್ ಹಾಗೂ ಆಧಾರ್‌ಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆಯೊಂದಿಗೆ ಸಮೀಪದ ರೈತ ಸಂಪರ್ಕ ಕೇಂದ್ರ, ಗ್ರಾಮ ಒನ್ ಕೇಂದ್ರ ಅಥವಾ ಸಾಮಾನ್ಯ ಸೇವಾ ಕೇಂದ್ರ ಕ್ಕೆ ಭೇಟಿ ನೀಡಿ ಇ-ಕೆವೈಸಿ ಪೂರ್ಣಗೊಳಿಸಿಕೊಳ್ಳಬೇಕು ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು ಕೃಷ್ಣಾರತಿಗೆ ರೈತರಿಂದ ಸಕಲ ಸಿದ್ಧತೆ
ರೈತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಎಂಗೆ ಇಂದು ಮನವಿ