ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಜು. 11ರಂದು ಉಡುಪಿ, ಕುಂದಾಪುರ, ಕಾರ್ಕಳ ಹಾಗೂ ಬೈಂದೂರು ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತನ್ನು ಆಯೋಜಿಸಿದೆ. ಈ ಲೋಕ ಅದಾಲತ್‌ನಲ್ಲಿ 2,000 ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ನಿತಿನ್ ರಾವ್ ತಿಳಿಸಿದ್ದಾರೆ.
ಉಡುಪಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಜು. 11ರಂದು ಉಡುಪಿ, ಕುಂದಾಪುರ, ಕಾರ್ಕಳ ಹಾಗೂ ಬೈಂದೂರು ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತನ್ನು ಆಯೋಜಿಸಿದೆ. ಈ ಲೋಕ ಅದಾಲತ್‌ನಲ್ಲಿ 2,000 ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ನಿತಿನ್ ರಾವ್ ತಿಳಿಸಿದ್ದಾರೆ.
ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಒಟ್ಟು 34,856 ಪ್ರಕರಣಗಳು ವಿಚಾರಣೆಗೆ ಬಾಕಿ ಇದ್ದು, ಅವುಗಳಲ್ಲಿ ಸಂಧಾನ ಹಾಗೂ ಪರಸ್ಪರ ಮಾತುಕತೆಯ ಮೂಲಕ ಇತ್ಯರ್ಥಗೊಳಿಸಬಹುದಾದ 3,544 ಪ್ರಕರಣಗಳನ್ನು ಗುರುತಿಸಲಾಗಿದೆ ಎಂದರು.ಈಗಾಗಲೇ 505 ಪ್ರಕರಣಗಳಲ್ಲಿ ಮಾತುಕತೆ ನಡೆದು ರಾಜಿಗೆ ಒಪ್ಪಿಗೆ ದೊರೆತಿದೆ. ಉಳಿದ ಪ್ರಕರಣಗಳಲ್ಲಿಯೂ ಸಂಧಾನದ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಇತ್ಯರ್ಥ ಸಾಧಿಸಲು ಪ್ರಯತ್ನಿಸಲಾಗುತ್ತಿದ್ದು, ಲೋಕ ಅದಾಲತ್‌ನಲ್ಲಿ ಕನಿಷ್ಠ 2,000 ಪ್ರಕರಣ ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ಪಡೆದುಕೊಳ್ಳಲು ಇದೊಂದು ಸದವಕಾಶವಾಗಿದೆ. ಈ ಅದಾಲತ್‌ನಲ್ಲಿ ಚೆಕ್ ಅಮಾನ್ಯ ಪ್ರಕರಣ, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು ಹಾಗೂ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾದ ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಕಾರ್ಮಿಕ ವಿವಾದ, ವೈವಾಹಿಕ ಪ್ರಕರಣಗಳು, ಭೂ ಸ್ವಾಧೀನ ಪ್ರಕರಣಗಳನ್ನು ಇತ್ಯರ್ಥ ಮಾಡಿಕೊಳ್ಳಬಹುದು. ಆಸಕ್ತರು ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಬಹುದು ಎಂದರು.ಸುದ್ದಿಗೋಷ್ಠಿಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕಿರಣ್ ಎಸ್.ಗಂಗಣ್ಣವರ್ ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.