ಸಮಾನತೆಯ ಸಂದೇಶ ಸಾರಿದ ಸಂತ ರವಿದಾಸರು: ಸುಕನ್ಯಾ ಮಾರ್ಟಿಸ್

KannadaprabhaNewsNetwork |  
Published : Jul 17, 2026, 02:45 AM IST
ಸಂತರವಿದಾಸರ ಜನ್ಮದಿನಾಚರಣೆ ಅಂಗವಾಗಿ ಉಪನ್ಯಾಸ ಮಾಲಿಕೆ ಕಾರ್ಯಕ್ರಮ ನಡೆಯಿತು | Kannada Prabha

ಸಾರಾಂಶ

ಜಾತಿ ಪದ್ಧತಿ ಮತ್ತು ಅಸ್ಪ್ರಶ್ಯತೆಯನ್ನು ವಿರೋಧಿಸಿ ಮಾನವೀಯತೆ ಹಾಗೂ ಸಮಾನತೆಯ ಸಂದೇಶ ಸಾರಿದ ಸಂತ ರವಿದಾಸರು ಶತಮಾನದ ಹಿಂದೆ ಉತ್ತರ ಭಾರತದಲ್ಲಿ ಭಕ್ತಿ ಪಂಥಕ್ಕೆ ಭದ್ರಬುನಾದಿ ಹಾಕಿದ ಮಹಾನ್ ಕವಿ. ಸಮಾಜ ಸುಧಾರಣೆಯ ಹರಿಕಾರರಾಗಿ ಸಂತ ರವಿದಾಸರು ಇಂದಿಗೂ ಜನಮಾನಸದಲ್ಲಿ ನೆಲೆಸಿದ್ದಾರೆ ಎಂದು ಉಡುಪಿ ಪೂರ್ಣಪ್ರಜ್ಞಾ ಸಂಧ್ಯಾ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಪ್ರೊ.ಸುಕನ್ಯಾ ಮಾರ್ಟಿಸ್ ಹೇಳಿದರು.

ಮಂಗಳೂರು: ಜಾತಿ ಪದ್ಧತಿ ಮತ್ತು ಅಸ್ಪ್ರಶ್ಯತೆಯನ್ನು ವಿರೋಧಿಸಿ ಮಾನವೀಯತೆ ಹಾಗೂ ಸಮಾನತೆಯ ಸಂದೇಶ ಸಾರಿದ ಸಂತ ರವಿದಾಸರು ಶತಮಾನದ ಹಿಂದೆ ಉತ್ತರ ಭಾರತದಲ್ಲಿ ಭಕ್ತಿ ಪಂಥಕ್ಕೆ ಭದ್ರಬುನಾದಿ ಹಾಕಿದ ಮಹಾನ್ ಕವಿ. ಸಮಾಜ ಸುಧಾರಣೆಯ ಹರಿಕಾರರಾಗಿ ಸಂತ ರವಿದಾಸರು ಇಂದಿಗೂ ಜನಮಾನಸದಲ್ಲಿ ನೆಲೆಸಿದ್ದಾರೆ ಎಂದು ಉಡುಪಿ ಪೂರ್ಣಪ್ರಜ್ಞಾ ಸಂಧ್ಯಾ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಪ್ರೊ.ಸುಕನ್ಯಾ ಮಾರ್ಟಿಸ್ ಹೇಳಿದರು.ಕರ್ನಾಟಕ ರಾಜ್ಯ ಮಹಾ ವಿದ್ಯಾಲಯ ಶಿಕ್ಷಕ ಸಂಘದ ಮಂಗಳೂರು ವಿಭಾಗ ಮತ್ತು ಸೈಂಟ್ ಆಗ್ನೆಸ್ ಕಾಲೇಜಿನ (ಸ್ವಾಯತ್ತ) ಹಿಂದಿ ವಿಭಾಗದ ವತಿಯಿಂದ ಸಂತ ರವಿದಾಸರ ೬೫೦ನೇ ಜನ್ಮ ವರ್ಷಾಚರಣೆ ಅಂಗವಾಗಿ ಬುಧವಾರ ನಗರದ ಸೈಂಟ್ ಆಗ್ನೆಸ್ ಕಾಲೇಜಿನ ಸಭಾಂಗಣದಲ್ಲಿ ನಡೆದ ಭಾರತೀಯ ಸಂತ ಪರಂಪರೆ ಉಪನ್ಯಾಸ ಮಾಲಿಕೆ ಕಾರ್ಯಕ್ರಮದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಸಂತ ರವಿದಾಸರ ಆಧ್ಯಾತ್ಮಿಕ ಚಿಂತನೆ, ಜೀವನ , ಬೋಧನೆಗಳ ಬಗ್ಗೆ ಯುವ ಸಮುದಾಯದಲ್ಲಿ ಅರಿವು ಮೂಡಿಸಬೇಕು. ಇದರಿಂದ ಆದರ್ಶ ಹಾಗೂ ಸಮಾನತೆಯ ಸಮಾಜ ನಿರ್ಮಾಣಕ್ಕೆ ಪ್ರೇರಣೆ ಸಿಗಲಿದೆ ಎಂದರು.ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಕಾರ್ಯಕ್ರಮ ಉದ್ಘಾಟಿಸಿದರು. ಸೈಂಟ್ ಆಗ್ನೆಸ್ ಕಾಲೇಜಿನ ಪ್ರಾಂಶುಪಾಲೆ ಡಾ.ಎಂ.ವೆನಿಸ್ಸಾ ಅಧ್ಯಕ್ಷತೆ ವಹಿಸಿದ್ದರು. ಮಹಾ ವಿದ್ಯಾಲಯ ಶಿಕ್ಷಕ ಸಂಘದ ರಾಜ್ಯ ಜಂಟಿ ಕಾರ್ಯದರ್ಶಿ ಡಾ.ಮಾಧವ ಎಂ.ಕೆ., ಸದಸ್ಯೆ ಡಾ. ನಾಗರತ್ನ ರಾವ್ ಇದ್ದರು.

ಕಾರ್ಯಕ್ರಮ ಸಂಯೋಜಕ ಡಾ.ಉದಯ ಕುಮಾರ್ ಬಿ. ಸ್ವಾಗತಿಸಿದರು. ಡಾ.ಆರ್.ನಾಗೇಶ್ ವಂದಿಸಿದರು. ವಿದ್ಯಾರ್ಥಿನಿ ಸಾಂಡ್ರಾ ಪೀಟರ್ ನಿರೂಪಿಸಿದರು.

----

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೆಮಿಕಲ್‌ ಮಿಶ್ರಿತ ಹಾಲು ಪೂರೈಕೆ ತಡೆಯಲು ಆಗ್ರಹಿಸಿ ಡಿಸಿಗೆ ಮನವಿ
ಹಾವುಗಳ ಬಗೆಗಿನ ಮೂಢನಂಬಿಕೆ ಬಿಟ್ಟು ರಕ್ಷಣೆ ಮಾಡಿ: ಎಸ್ಪಿ ಲಕ್ಷ್ಮಣ ನಿಂಬರಗಿ