ಸಚಿವ ಬಸವಂತಪ್ಪಗೆ ಶಾಸಕ ಗುರುರಾಜ್ ಗಂಟಿಹೊಳೆ ಮನವಿ

KannadaprabhaNewsNetwork |  
Published : Nov 08, 2026, 02:45 AM IST
ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಸಚಿವ ಬಸವಂತಪ್ಪಗೆ ಮನವಿ ಸಲ್ಲಿಸಿದರು  | Kannada Prabha

ಸಾರಾಂಶ

ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಮುಜರಾಯಿ ಸಚಿವ ಬಸವಂತಪ್ಪ ಅವರನ್ನು ವಿಧಾನಸೌಧದಲ್ಲಿ ಭೇಟಿಯಾದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಮೀನುಗಾರರು ಹಾಗೂ ಸಾರ್ವಜನಿಕರ ವಿವಿಧ ಬೇಡಿಕೆಗಳು ಮತ್ತು ಸಮಸ್ಯೆಗಳ ಕುರಿತು ಸುದೀರ್ಘವಾಗಿ ಚರ್ಚಿಸಿ ಮನವಿ ಸಲ್ಲಿಸಿದರು.

ಉಡುಪಿ: ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಮುಜರಾಯಿ ಸಚಿವ ಬಸವಂತಪ್ಪ ಅವರನ್ನು ವಿಧಾನಸೌಧದಲ್ಲಿ ಭೇಟಿಯಾದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಮೀನುಗಾರರು ಹಾಗೂ ಸಾರ್ವಜನಿಕರ ವಿವಿಧ ಬೇಡಿಕೆಗಳು ಮತ್ತು ಸಮಸ್ಯೆಗಳ ಕುರಿತು ಸುದೀರ್ಘವಾಗಿ ಚರ್ಚಿಸಿ ಮನವಿ ಸಲ್ಲಿಸಿದರು.

ಪ್ರಮುಖವಾಗಿ ಮೃತ ಮೀನುಗಾರರ ಕುಟುಂಬಗಳಿಗೆ ಪರಿಹಾರ ನಿಧಿ, ಮೀನುಗಾರಿಕಾ ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ಅನುದಾನ, ಕ್ಷೇತ್ರದ ವಿವಿಧ ದೇವಸ್ಥಾನಗಳ ಅಭಿವೃದ್ಧಿ ಹಾಗೂ ನಾಡದೋಣಿ ಮೀನುಗಾರರಿಗೆ ಸೀಮೆಎಣ್ಣೆ ಸಬ್ಸಿಡಿ ಮತ್ತು ಸಮರ್ಪಕ ಹಂಚಿಕೆ ಮಾಡುವ ಕುರಿತು ಶಾಸಕರು ಸಚಿವರ ಗಮನ ಸೆಳೆದರು.

ಅಲ್ಲದೆ ಬೈಂದೂರು ಕ್ಷೇತ್ರದ ಮೀನುಗಾರರ ಬದುಕು, ಅವರ ಆರ್ಥಿಕ ಭದ್ರತೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡುವಂತೆ ಶಾಸಕರು ಸಚಿವರಲ್ಲಿ ಮನವಿ ಮಾಡಿದರು.

ಶಾಸಕರು ಮುಂದಿಟ್ಟ ಎಲ್ಲಾ ಬೇಡಿಕೆಗಳನ್ನು ಸಹಾನುಭೂತಿಯಿಂದ ಆಲಿಸಿದ ಸಚಿವರು, ಸಂಬಂಧಪಟ್ಟ ವಿಚಾರಗಳ ಕುರಿತು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಸಚಿವರಿಗೆ ಶಾಸಕರ ಬೇಡಿಕೆಗಳು: ಮನವಿಯಲ್ಲಿ ಕ್ಷೇತ್ರದ ಕೊಡೇರಿ ಬಂದರಿನ ಬ್ರೇಕ್‌ವಾಟರ್ ವಿಸ್ತರಣೆ ಹಾಗೂ ಅಗತ್ಯ ಮೂಲಸೌಕರ್ಯಗಳ ಅಭಿವೃದ್ಧಿ, ಶಿರೂರು ಅಳ್ವೆಗದ್ದೆ ಬಂದರಿನ ಸಮಗ್ರ ಅಭಿವೃದ್ಧಿ, ಉಪ್ಪುಂದ ಮಡಿಕಲ್ ಬಳಿ ಮೀನುಗಾರರಿಗೆ ಅನುಕೂಲವಾಗುವಂತೆ ಬ್ರೇಕ್‌ವಾಟರ್ ನಿರ್ಮಾಣ, ಮರವಂತೆ ಹೊರಬಂದರು ಹಾಗೂ ಗಂಗೊಳ್ಳಿ ಬಂದರಿನ ಮೂಲಸೌಕರ್ಯ ಕಾಮಗಾರಿಗಳಿಗೆ ಹೆಚ್ಚುವರಿ ಅನುದಾನ ಬಿಡುಗಡೆ, ಅರ್ಹ ಫಲಾನುಭವಿಗಳಿಗೆ ಮತ್ಸ್ಯಾಶ್ರಯ ಯೋಜನೆಯಡಿ ಮೀನುಗಾರಿಕೆ ಮನೆಗಳ ಮಂಜೂರಾತಿ, ಕ್ಷೇತ್ರದ ವಿವಿಧ ಭಾಗಗಳಲ್ಲಿ ತೀವ್ರವಾಗಿರುವ ಕಡಲ್ಕೊರೆತ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಅಗತ್ಯ ಕ್ರಮಕ್ಕೆ ಒತ್ತಾಯಿಸಲಾಗಿದೆ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕವಿ ಹೃದಯದ ಡಾ.ಚೆನ್ನಬಸವ ಶ್ರೀಗಳು: ತೋಂಟದಾರ್ಯ ಶ್ರೀ
ಶಿರಗುಪ್ಪಿ ಕಾರ್ಖಾನೆಯಿಂದ ₹4,000 ದರ ಘೋಷಣೆ