ಉಡುಪಿ ಬಿಜೆಪಿ ಮಹಿಳಾ ಮೋರ್ಚಾದಿಂದ ‘ನಟ್ಟಿ’ ಕಾರ್ಯಕ್ರಮ

KannadaprabhaNewsNetwork |  
Published : Jul 16, 2026, 03:30 AM IST
ಬಿಜೆಪಿ ಮಹಿಳಾ ಮೋರ್ಚಾದಿಂದ ಹಿರಿಯ ಮಹಿಳಾ ರೈತರನ್ನು ಗೌರವಿಸಲಾಯಿತು | Kannada Prabha

ಸಾರಾಂಶ

ಗ್ರಾಮೀಣ ಪ್ರದೇಶಗಳ ಆಚಾರವಿಚಾರಗಳನ್ನು ಇಂದಿನ ಹೊಸ ಪೀಳಿಗೆಗೆ ತಿಳಿಸಿಕೊಟ್ಟು, ಅವರು ಅದನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಹೇಳಿದರು.

ಉಡುಪಿ: ಗ್ರಾಮೀಣ ಪ್ರದೇಶಗಳ ಆಚಾರವಿಚಾರಗಳನ್ನು ಇಂದಿನ ಹೊಸ ಪೀಳಿಗೆಗೆ ತಿಳಿಸಿಕೊಟ್ಟು, ಅವರು ಅದನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಹೇಳಿದರು.

ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾದ ವತಿಯಿಂದ ಅಧ್ಯಕ್ಷೆ ನೀತಾ ಪ್ರಭು ನೇತೃತ್ವದಲ್ಲಿ ಅಂಬಲಪಾಡಿ ಬಂಕೇರ್ಕಟ್ಟ ಗದ್ದೆಯಲ್ಲಿ ನಡೆದ ಸಾಮೂಹಿಕ ನೇಜಿ ನೆಡುವ ‘ನಟ್ಟಿ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ‘ಏಕ್ ಪೇಡ್ ಮಾ ಕೇ ನಾಮ್’ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಕರೆಯಂತೆ ಎಲ್ಲರೂ ‘ತಾಯಿಯ ಹೆಸರಲ್ಲಿ ಒಂದೊಂದು ಗಿಡ’ ನೆಡುವ ಮೂಲಕ ಪರಿಸರ ಸಂರಕ್ಷಣೆಗೂ ಕೊಡುಗೆ ನೀಡುವಂತಾಗಬೇಕು ಎಂದ ಶಾಸಕರು,. ಕಾಂಗ್ರೆಸ್ ಪಕ್ಷ ನಿರಂತರ ಜನತೆಯ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ, ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಸದಾ ಜಾಗೃತರಾಗಿದ್ದು ರಾಷ್ಟ್ರೀಯ ಚಿಂತನೆಯೊಂದಿಗೆ ಸಮಾಜಮುಖಿ ಸೇವೆಯ ಜೊತೆಗೆ ಸದೃಢ ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂದು ಕರೆ ನೀಡಿದರು.ಹಿರಿಯ ಪ್ರಗತಿಪರ ಕೃಷಿಕರಾದ ಸರೋಜಿನಿ ಪೂಜಾರ್ತಿ, ಜಾನಕಿ ಪೂಜಾರ್ತಿ, ಭವಾನಿ ಪೂಜಾರ್ತಿ, ಸಂಜೀವಿನಿ ಒಕ್ಕೂಟದ ಕೃಷಿ ಸಖಿ ಸವಿತಾ ಸಂತೋಷ್ ಹಾಗೂ ಕಾರ್ಯಕ್ರಮಕ್ಕೆ ಸಹಕಾರವನಿತ್ತ ವಾಣಿ ಪ್ರಭಾಕರ್ ಅವರನ್ನು ಸನ್ಮಾನಿಸಲಾಯಿತು.ಎಸ್ಐಆರ್ ಮಂಗಳೂರು ವಿಭಾಗ ಸಂಚಾಲಕ ಕೆ.ಉದಯಕುಮಾರ್ ಶೆಟ್ಟಿ, ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಉಡುಪಿ ನಗರಸಭೆಯ ನಿಕಟಪೂರ್ವ ಅಧ್ಯಕ್ಷ ಪ್ರಭಾಕರ ಪೂಜಾರಿ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಬಿಜೆಪಿ ವಕ್ತಾರ ಮಧುಕರ ಮುದ್ರಾಡಿ, ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ, ನಗರ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ತ್ರಿವೇಣಿ ಅಮೀನ್, ನಗರ ಎಸ್.ಟಿ. ಮೋರ್ಚಾ ಅಧ್ಯಕ್ಷೆ ಸುಮಾ ನಾಯ್ಕ್, ಬಿಜೆಪಿ ಅಂಬಲಪಾಡಿ ಗ್ರಾಮಾಂತರ ಅಧ್ಯಕ್ಷ ಗಿರೀಶ್ ಅಮೀನ್, ಅಂಬಲಪಾಡಿ ಗ್ರಾಪಂ ನಿಕಟಪೂರ್ವ ಅಧ್ಯಕ್ಷೆ ಸುಜಾತ ಶೆಟ್ಟಿ, ಮಾಜಿ ಅಧ್ಯಕ್ಷೆ ಭಾರತಿ ಭಾಸ್ಕರ್ ಮತ್ತಿತರರು ಇದ್ದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ನಿರೂಪಿಸಿದರು.ಗದ್ದೆಗೆ ಹಾಲೆರೆಯುವ ಮೂಲಕ ಸಾಮೂಹಿಕ ನೇಜಿ ನೆಡುವ ‘ನಟ್ಟಿ’ ಕಾರ್ಯಕ್ರಮ ಚಾಲನೆಗೊಂಡಿತು. ವಾಣಿ ಪ್ರಭಾಕರ್ ಅವರ ನಿವಾಸದಲ್ಲಿ ಸಾಮೂಹಿಕ ಸಹ ಭೋಜನದೊಂದಿಗೆ ‘ನಟ್ಟಿ’ ಕಾರ್ಯಕ್ರಮವು ಸಮಾಪನಗೊಂಡಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಕ್ಕಿ-ಪಿಕ್ಕಿ ಸಮುದಾಯದ ಸಮಗ್ರ ಅಭಿವೃದ್ಧಿಗೆ ಕ್ರಮ
ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆ