ಕನ್ನಡಪ್ರಭ ವಾರ್ತೆ ಉಡುಪಿ
ಕಾಮಗಾರಿ ಪೂರ್ಣಗೊಳಿಸುವ ಟೆಂಡರ್ ಅವಧಿ ಮುಗಿದಿದ್ದರೂ ಉಡುಪಿಯ ಸಂತೆಕಟ್ಟೆ-ಕಲ್ಯಾಣಪುರದ ಸುರಂಗ ಮಾರ್ಗ, ಇಂದ್ರಾಳಿಯ ಮೇಲ್ಸೇತುವೆ, ಮಲ್ಪೆ ಭೂಸ್ವಾಧೀನದ ವಿಳಂಬ ಮತ್ತು ನನೆಗುದ್ದಿಗೆ ಬಿದ್ದಿರುವ ತನಿಕೋಡು ಗೇಟ್‌ನಿಂದ ಎಸ್. ಕೆ. ಬಾರ್ಡರ್ ವರೆಗಿನ ರಾಷ್ಟ್ರೀಯ ಹೆದ್ದಾರಿಯ ಸಮಸ್ಯೆಗಳನ್ನು ತುರ್ತು ಪರಿಹರಿಸಬೇಕೆಂದು ಸಚಿವ ಗಡ್ಕರಿ ಬಳಿ ಮನವಿಯಿತ್ತರು.
ಮನವಿ ಸ್ವೀಕರಿಸಿದ ಸಚಿವರು, ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳಿಗೆ ತುರ್ತು ಆದೇಶ ನೀಡಿ ಕಾಮಗಾರಿಗಳನ್ನು ವಿಳಂಬವಿಲ್ಲದೆ ಅತಿ ಶೀಘ್ರದಲ್ಲಿ ಮುಗಿಸುವಂತೆ ಸೂಚಿಸಿದರು. ಡಿಸೆಂಬರ್ ಒಳಗೆ ತಾನೇ ಎಲ್ಲಾ ಕಾಮಗಾರಿಗಳನ್ನು ಉದ್ಘಾಟಿಸುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದರು.ಈ ಸಂದರ್ಭ ಕೇಂದ್ರ ಸಚಿವ ವಿ.ಸೋಮಣ್ಣ, ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ, ಕಾರ್ಕಳ ಶಾಸಕ ಸುನಿಲ್ ವಿ. ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.