ಸಂಸದರ ಪ್ರದೇಶಾಭಿವೃದ್ಧಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸಂಸದ ಕೋಟ ಸೂಚನೆ

KannadaprabhaNewsNetwork |  
Published : Apr 09, 2026, 03:00 AM IST
08ಕೋಟ | Kannada Prabha

ಸಾರಾಂಶ

ಉಡುಪಿ ಜಿಲ್ಲೆಯಲ್ಲಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯ ಸಮರ್ಪಕ ಅನುಷ್ಠಾನಕ್ಕಾಗಿ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯ ಸಮರ್ಪಕ ಅನುಷ್ಠಾನಕ್ಕಾಗಿ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ೨೦೨೪-೨೫ ಹಾಗೂ ೨೦೨೫-೨೬ನೇ ಸಾಲಿನ ಸಂಸದ ಪ್ರದೇಶಾಭಿವೃದ್ಧಿ ನಿಧಿ ಅಡಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಕಾಮಗಾರಿಗಳ ಪ್ರಗತಿ ಕುರಿತು ಸಮಗ್ರವಾಗಿ ಪರಿಶೀಲನೆ ನಡೆಸಿದರು. ವಿವಿಧ ಇಲಾಖೆಗಳ ಮೂಲಕ ಕೈಗೊಳ್ಳಲಾಗಿರುವ ಕಾಮಗಾರಿಗಳ ಪ್ರಸ್ತುತ ಸ್ಥಿತಿ, ಬಾಕಿ ಇರುವ ಕಾಮಗಾರಿಗಳು ಹಾಗೂ ಎದುರಾಗುತ್ತಿರುವ ಅಡಚಣೆಗಳ ಬಗ್ಗೆ ಅಧಿಕಾರಿಗಳಿಂದ ವಿವರಗಳನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ಸಂಸದರು ಅಧಿಕಾರಿಗಳಿಗೆ ಕಾಮಗಾರಿಗಳನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸುವಂತೆ ಕ್ರಮಕೈಗೊಳ್ಳಲು ತಿಳಿಸಿದರು. ವಿಶೇಷವಾಗಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ಹಾಗೂ ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಬಾಕಿ ಇರುವ ಕಾಮಗಾರಿಗಳಿಗೆ ತಕ್ಷಣವೇ ತಾಂತ್ರಿಕ ಮತ್ತು ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಿ ಅನುಷ್ಠಾನ ಮಾಡುವಂತೆ ನಿರ್ದೇಶಿಸಿದರು. ಸಭೆಯಲ್ಲಿ ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳಾದ ಅಬೀದ್ ಗದ್ಯಾಳ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಅರುಣ್ ಕುಮಾರ್, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಶ್ರೀನಾಥ್ ಹಾಗೂ ವಿವಿಧ ಅನುಷ್ಠಾನ ಇಲಾಖೆಯ ಅಧಿಕಾರಿಗಳು, ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೂ. 23 ರಂದು ಕುಶಾಲನಗರದಲ್ಲಿ ಜಿಲ್ಲಾ ಪ್ರಥಮ ಸಾಹಿತ್ಯ ಸಮ್ಮೇಳನ
ನಾಪೋಕ್ಲು ಕೊಡವ ಸಮಾಜ ಸಮಾಜಮುಖಿ ಕಾರ್ಯ: ಮುಂಡಂಡ ನಾಣಯ್ಯ