ಕರ್ತವ್ಯದಲ್ಲಿದ್ದಾಗ ರಸ್ತೆ ಅಪಘಾತದಲ್ಲಿ ಮೃತಪಟ್ಟ ಪೊಲೀಸ್ ಸಿಬ್ಬಂದಿ ಅರ್ಜುನ ಶಂಕರ ನೆಲ್ಲೂರ ಕುಟುಂಬಕ್ಕೆ ಎಸ್.ಬಿ.ಐ. ಪೊಲೀಸ್ ಸ್ಯಾಲರಿ ಪ್ಯಾಕೇಜ್ ಯೋಜನೆಯಡಿ 1,45,00,000 ರು. ಮೊತ್ತದ ವಿಮಾ ಚೆಕ್ ಹಸ್ತಾಂತರಿಸಲಾಯಿತು.
ಉಡುಪಿ: ಕರ್ತವ್ಯದಲ್ಲಿದ್ದಾಗ ರಸ್ತೆ ಅಪಘಾತದಲ್ಲಿ ಮೃತಪಟ್ಟ ಪೊಲೀಸ್ ಸಿಬ್ಬಂದಿ ಅರ್ಜುನ ಶಂಕರ ನೆಲ್ಲೂರ ಕುಟುಂಬಕ್ಕೆ ಎಸ್.ಬಿ.ಐ. ಪೊಲೀಸ್ ಸ್ಯಾಲರಿ ಪ್ಯಾಕೇಜ್ ಯೋಜನೆಯಡಿ 1,45,00,000 ರು. ಮೊತ್ತದ ವಿಮಾ ಚೆಕ್ ಹಸ್ತಾಂತರಿಸಲಾಯಿತು.
2023-24ನೇ ಸಾಲಿನಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಸಿ.ಎಸ್.ಪಿ. ಜಿಲ್ಲಾ ನಿಯಂತ್ರಣ ಕೊಠಡಿಯಲ್ಲಿ ಕಾರ್ಯನಿರ್ವಹಿಸುತ್ತಿದ ಅರ್ಜುನ ನೆಲ್ಲೂರ ಹಾವೇರಿಯಲ್ಲಿ ಕರ್ತವ್ಯದಲ್ಲಿದ್ದಾಗ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದರು.ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಪ್ರಾದೇಶಿಕ ಪ್ರಬಂಧಕರಾದ ಬಿ. ಪ್ರಕಾಶ್ ಅಡಿಗ ಅವರು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಉಪಸ್ಥಿತಿಯಲ್ಲಿ ಈ ವೈಯಕ್ತಿಕ ಅಪಘಾತ ವಿಮೆಯ ಚೆಕ್ ಹಸ್ತಾಂತರಿಸಿದರು.ಪೊಲೀಸ್ ಇಲಾಖೆ ಮತ್ತು ಎಸ್.ಬಿ.ಐ. ನಡುವಿನ ಒಪ್ಪಂದದಂತೆ ಕರ್ತವ್ಯದ ವೇಳೆ ಮೃತಪಟ್ಟ ಸಿಬ್ಬಂದಿಯವರ ಕುಟುಂಬಕ್ಕೆ ಈ ವಿಮಾ ಸೌಲಭ್ಯ ನೀಡಲಾಗುತ್ತದೆ. ಇಂಥ ವಿಮಾ ಯೋಜನೆಗಳು ಎಲ್ಲ ಎಸ್.ಬಿ.ಐ. ಶಾಖೆಗಳಲ್ಲಿ ಲಭ್ಯವಿದ್ದು ಇದರ ಸದುಪಯೋಗವನ್ನು ಪೊಲೀಸ್ ಇಲಾಖೆಯ ಸಿಬ್ಬಂದಿ ಪಡೆದುಕೊಳ್ಳಬೇಕು ಎಂದು ಪ್ರಕಾಶ ಅಡಿಗ ವಿನಂತಿಸಿದರು.ಬ್ಯಾಂಕಿನ ಮುಖ್ಯ ವ್ಯವಸ್ಥಾಪಕ ಕೀಳಂಜೆ ಶ್ರೀಕೃಷ್ಣರಾಜ ಭಟ್, ಮಲ್ಪೆ ಶಾಖೆ ವ್ಯವಸ್ಥಾಪಕ ರಾಜೇಶ್ ಗಂಗೊಳ್ಳಿ ಮತ್ತು ಇತರ ಅಧಿಕಾರಿಗಳಾದ ಶ್ರೀನಿವಾಸ್, ಪ್ರಣವ್ ಪೈ, ತನ್ಮಯ್, ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಮೃತ ಪೇದೆ ಕುಟುಂಬಸ್ಥರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.