ಉಡುಪಿ: ಸಮಾಜವು ಅಭಿವೃದ್ದಿ ಹೊಂದಬೇಕಾದರೆ ಅಪರಾಧ ಮುಕ್ತ ವಾತಾವರಣ ನಿರ್ಮಾಣವಾಗಬೇಕು. ಅಂತಹ ಸೌಹಾರ್ದಮಯ, ಅಪರಾಧರಹಿತ, ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಪೊಲೀಸರು ಪಾತ್ರ ಬಹುಮುಖ್ಯವಾದುದು, ದಿನವಿಡೀ ಬಿಡುವಿಲ್ಲದೆ ಕರ್ತವ್ಯ ನಿರ್ವಹಿಸುವ ಪೊಲೀಸರು ಅತೀಹೆಚ್ಚು ಒತ್ತಡ ಅನುಭವಿಸುತ್ತಿರುತ್ತಾರೆ. ಈ ಒತ್ತಡಪೂರ್ಣ ಜೀವನಶೈಲಿಯಿಂದ ಬಿಡುಗಡೆ ಹೊಂದಲು ಕ್ರೀಡೆಯಂತಹ ಚಟುವಟಿಕೆಗಳು ಸಹಕಾರಿಯಾಗುತ್ತವೆ ಎಂದು ಜಿಪಂ ಸಿಇಒ ಪ್ರತೀಕ್ ಬಾಯಲ್ ಅಭಿಪ್ರಾಯಪಟ್ಟರು.
ಎಪಿಸಿ ಜೀವನ್ ನಾಯ್ಕ ಅವರು ಕ್ರೀಡಾ ಜ್ಯೋತಿಯೊಂದಿಗೆ ವೇದಿಕೆಗೆ ಆಗಮಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಆರ್‌ಎಸ್ಐ ಚಂದ್ರ ಎಂ. ಪ್ರಮಾಣ ವಚನ ಬೋಧಿಸಿದರು.ಇದೇ ಸಂದರ್ಭದಲ್ಲಿ ರಾಷ್ಟ್ರಮಟ್ಟದಲ್ಲಿ 100 ಮತ್ತು 200 ಮೀಟರ್ ಓಟದ ಸ್ಪರ್ಧೆಯಲ್ಲಿ ಮಿಂಚುತ್ತಿರುವ, ರಾಜ್ಯ ದಾಖಲೆ ಮಾಡಿರುವ ಜಿಲ್ಲೆಯ ಕ್ರೀಡಾಪಟು, ಅರ್ಜುನ ಪ್ರಶಸ್ತಿ ಪುರಸ್ಕೃತೆ ಸ್ತುತಿ ಪಿ.ಶೆಟ್ಟಿ ಅವರಿಗೆ ನಗದು ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.
ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಸ್ವಾಗತಿಸಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯ್ಕ್ ವಂದಿಸಿ, ಎಪಿಸಿ ಯೋಗೀಶ್ ನಾಯ್ಕ ನಿರೂಪಿಸಿದರು.