ಕನ್ನಡಪ್ರಭ ವಾರ್ತೆ ಉಡುಪಿ
ಗಣೇಶೋತ್ಸವ ನಡೆಯುವ ಒಟ್ಟು 406 ಸಾಮಾನ್ಯ, 73 ಸೂಕ್ಷ್ಮ, 2 ಅತೀ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದೆ. ಗಣೇಶೋತ್ಸವ ಆಚರಣೆ, ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ 3 ಕೆಎಸ್ಆರ್ಪಿ ಮತ್ತು 8 ಡಿಎಆರ್ ಸೇರಿದಂತೆ ಸುಮಾರು 500ಕ್ಕೂ ಅಧಿಕ ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಯಾವುದೇ ಪೆಂಡಾಲ್‌ಗಳಲ್ಲಿ ರಾತ್ರಿ 10 ಗಂಟೆಯ ನಂತರ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ.
ಗಣೇಶೋತ್ಸವ ಆಚರಣೆಗೆ ಸಂಬಂಧಪಟ್ಟಂತೆ ಬಂಟಿಂಗ್ ಮತ್ತು ಬ್ಯಾನರ್‌ಗಳನ್ನು ಅಳವಡಿಸುವುದಕ್ಕೆ ಸ್ಥಳೀಯಾಡಳಿತ ಸಂಸ್ಥೆಗಳ ಪೂರ್ವಾನುಮತಿಯನ್ನು ಜಿಲ್ಲಾಡಳಿತ ಕಡ್ಡಾಯಗೊಳಿಸಿದೆ. ಜೊತೆಗೆ ಪರಿಸರಕ್ಕೆ ಹಾನಿಯಾಗುವಂತಹ ಬಣ್ಣಗಳಿಂದ ರಚಿಸಲಾದ ಗಣೇಶ ವಿಗ್ರಹಗಳನ್ನು ನಿಷೇಧಿಸಿದ್ದು, ಪರಿಸರಸ್ನೇಹಿ ಗಣಪತಿ ಪ್ರತಿಷ್ಠಾಪಿಸುವಂತೆ ಸೂಚಿಸಲಾಗಿದೆ.