ಉಡುಪಿ: ಪತ್ರಕರ್ತರ ವಾಹನಗಳಿಗೆ ಕ್ಯೂಆರ್ ಕೋಡೆಡ್ ಸ್ಟಿಕ್ಕರ್

KannadaprabhaNewsNetwork |  
Published : Dec 13, 2023, 01:00 AM IST
ಎಸ್ಪಿ ಡಾ.ಅರುಣ್ ಕ್ಯೂಆರ್ ಕೊಡೆಡ್ ಸ್ಟಿಕರ್ ಬಿಡುಗಡೆ ಮಾಡಿದರು | Kannada Prabha

ಸಾರಾಂಶ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ರಜತ ಮಹೋತ್ಸವದ ಪ್ರಯುಕ್ತ ಮಂಗಳವಾರ ಉಡುಪಿ ಪತ್ರಿಕಾ ಭವನದಲ್ಲಿ ಸಂಘದ ಸದಸ್ಯರ ವಾಹನಗಳಿಗೆ ಕ್ಯೂಆರ್ ಕೋಡೆಡ್ ಮೀಡಿಯಾ ಸ್ಟಿಕ್ಕರ್ ಹಸ್ತಾಂತರ

ಕನ್ನಡಪ್ರಭ ವಾರ್ತೆ ಉಡುಪಿ

ಪ್ರಜಾಪ್ರಭುತ್ವದ ಮೂರು ಅಂಗಗಳಾದ ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗ ಯಾವ ರೀತಿ ಕೆಲಸ ಮಾಡುತ್ತದೆ ಎಂಬ ವಿಮರ್ಶೆ ಮಾಡುವ ಕೆಲಸವನ್ನು ನಾಲ್ಕನೇ ಅಂಗವಾಗಿರುವ ಮಾಧ್ಯಮ ರಂಗ ಮಾಡಬೇಕಾಗಿದೆ. ಹೀಗೆ ಪ್ರಜಾಪ್ರಭುತ್ವವನ್ನು ಕಾಪಾಡುವ ಬಹಳ ದೊಡ್ಡ ಜವಾಬ್ದಾರಿ ಮಾಧ್ಯಮಗಳ ಮೇಲಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ಹೇಳಿದರು.

ಅವರು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ರಜತ ಮಹೋತ್ಸವದ ಪ್ರಯುಕ್ತ ಮಂಗಳವಾರ ಉಡುಪಿ ಪತ್ರಿಕಾ ಭವನದಲ್ಲಿ ಸಂಘದ ಸದಸ್ಯರ ವಾಹನಗಳಿಗೆ ಕ್ಯೂಆರ್ ಕೋಡೆಡ್ ಮೀಡಿಯಾ ಸ್ಟಿಕ್ಕರ್ ಹಸ್ತಾಂತರಿಸಿ ಮಾತನಾಡಿದರು.

ಪತ್ರಕರ್ತರ ಹೆಸರಿನಲ್ಲಿ ಕಾರ್ಯಚರಿಸುವ ಕೆಲವು ನಕಲಿ ಪತ್ರಕರ್ತರು ಪೊಲೀಸರಿಗೆ ದೊಡ್ಡ ತಲೆನೋವಾಗಿದ್ದಾರೆ. ಇದೀಗ ಪತ್ರಕರ್ತರ ಸಂಘವು ಆಧುನಿಕ ತಂತ್ರಜ್ಞಾನ ಬಳಸಿ ವಾಹನಗಳ ಮಾಧ್ಯಮ ಸ್ಟಿಕ್ಕರ್‌ನಲ್ಲಿ ಕ್ಯೂಆರ್ ಕೋಡ್ ವ್ಯವಸ್ಥೆ ಮಾಡಿರುವುದು ಉತ್ತಮ ಬೆಳವಣಿಗೆಯಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಈ ರೀತಿ ವ್ಯವಸ್ಥೆ ಮಾಡಿದರೆ ಪೊಲೀಸರಿಗೆ ಬಹಳ ಅನುಕೂಲವಾಗುತ್ತದೆ ಎಂದರು.

ಅಧ್ಯಕ್ಷತೆಯನ್ನು ಸಂಘ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಿದ್ದರು. ರಜತ ಮಹೋತ್ಸವ ಸಮಿತಿಯ ಸಂಚಾಲಕ ಮುಹಮ್ಮದ್ ಶರೀಫ್, ಸಂಘದ ರಾಷ್ಟ್ರೀಯ ಸಮಿತಿ ಸದಸ್ಯ ಅರುಣ್ ಕುಮಾರ್ ಶಿರೂರು, ಉಡುಪಿ ಪತ್ರಿಕಾ ಭವನದ ಸಂಚಾಲಕ ಅಜಿತ್ ಆರಾಡಿ, ರಜತ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಕರ ಸುವರ್ಣ ಉಪಸ್ಥಿತರಿದ್ದರು.

ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ವಂದಿಸಿದರು. ರಜತ ಮಹೋತ್ಸವ ಸಮಿತಿಯ ಜತೆ ಕಾರ್ಯದರ್ಶಿ ದೀಪಕ್ ಜೈನ್ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಾರ್ಥಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಲು ಇಷ್ಟವಿಲ್ಲ: ಡಿಸಿಎಂ
ಒಪಿಎಸ್‌ ಜಾರಿಗೆ ಸರ್ಕಾರಕ್ಕೆ ಒತ್ತಾಯಿಸುವೆ-ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಒತ್ತಾಯ