ಉಡುಪಿ: ರಾಹುಲ್ ಗಾಂಧಿಯವರು ದೇಶದ ಭವಿಷ್ಯದ ನಾಯಕರಾಗಿದ್ದು, ಎಷ್ಟೇ ಟೀಕೆಗಳನ್ನು ಅನುಭವಿಸಿದರೂ ಕೂಡ ಎದೆಗುಂದದೆ ಸಾಮಾಜಿಕ ನ್ಯಾಯದ ಪರ ದನಿ ಎತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದರು.
ಸುಮಾರು 75 ಮಂದಿ ವಿಶೇಷ ಚೇತನರಿಗೆ ಸಹಾಯಕ ಸಾಧನಗಳಾದ ಶ್ರವಣ ಸಾಧನ, ಕಂಬೋಡ್ ವೀಲ್ ಚೇರ್, ವಾಟರ್ ಬೆಡ್, ವಾಕರ್, ವಾಕಿಂಗ್ ಸ್ಟಿಕ್, ಕಚ್ ಹಾಗೂ ಪೌಷ್ಟಿಕ ಆಹಾರ ಕಿಟ್ ಗಳನ್ನ ಹಸ್ತಾಂತರಿಸಲಾಯಿತು.
ಪಕ್ಷದ ಪ್ರಮುಖರಾದ ಕಿಶನ್ ಹೆಗ್ಡೆ ಕೊಳ್ಕೆಬೈಲು, ಜ್ಯೋತಿ ಹೆಬ್ಬಾರ್, ಹರಿಪ್ರಸಾದ್ ರೈ, ಹರೀಶ್ ಕಿಣಿ, ಕೀರ್ತಿ ಶೆಟ್ಟಿ, ಬಿ.ನರಸಿಂಹಮೂರ್ತಿ, ಕುಶಲ್ ಶೆಟ್ಟಿ ಇಂದ್ರಾಳಿ, ಕೇಶವ ಕೋಟ್ಯಾನ್, ಸುರೇಶ್ ಶೆಟ್ಟಿ ಬನ್ನಂಜೆ, ಪ್ರಖ್ಯಾತ್ ಶೆಟ್ಟಿ, ಮಹಾಬಲ ಕುಂದರ್, ಪ್ರಶಾಂತ್ ಜತ್ತನ್ನ, ಗಣೇಶ್ ನೆರ್ಗಿ, ಸದಾನಂದ ಕಾಂಚನ್, ಹಬೀಬ್ ಅಲಿ, ಸೌರಭ್ ಬಲ್ಲಾಳ್, ಮಮತಾ ಶೆಟ್ಟಿ ಮತ್ತಿತರರಿದ್ದರು.