ಉಡುಪಿ ರೆಡ್‌ಕ್ರಾಸ್‌ನಿಂದ ವಿಶ್ವ ಪರಿಸರ ದಿನಾಚರಣೆ

KannadaprabhaNewsNetwork |  
Published : Jun 07, 2026, 02:45 AM IST
06ರೆಡ್‌ಕ್ರಾಸ್ | Kannada Prabha

ಸಾರಾಂಶ

ಯುವಜನತೆಗೆ ಪರಿಸರ ಶಿಕ್ಷಣ ನೀಡುವುದು ಅಗತ್ಯವಾಗಿದೆ ಎಂದು ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲ್ಯಾಣಾಧಿಕಾರಿ ರತ್ನಾ ಸುವರ್ಣ ಹೇಳಿದರು.

ಉಡುಪಿ: ಯುವಜನತೆಗೆ ಪರಿಸರ ಶಿಕ್ಷಣ ನೀಡುವುದು ಅಗತ್ಯವಾಗಿದೆ ಎಂದು ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲ್ಯಾಣಾಧಿಕಾರಿ ರತ್ನಾ ಸುವರ್ಣ ಹೇಳಿದರು. ಅವರು ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲೆ ಮತ್ತು ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಪರಿಸರ ದಿನಾಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಮಾತಾನಾಡುತ್ತಿದ್ದರು.

ಜಿಲ್ಲಾ ರೆಡ್ ಕ್ರಾಸ್ ಉಪಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ. ಅವರು ಗಿಡ ನೆಡುವ ಮೂಲಕ ಚಾಲನೆ ನೀಡಿದರು. ಮನುಷ್ಯನ ದೇಹ ಮತ್ತು ಪ್ರಕೃತಿಗಿರುವ ನಿಕಟ ಸಂಬಂಧವನ್ನು ಅವರು ವಿವರಿಸಿದರು.

ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ನಿಕೇತನ, ರೆಡ್ ಕ್ರಾಸ್ ಖಜಾಂಚಿ ರಮಾದೇವಿ, ಡಾ. ಎ. ಬಿ. ಬಾಳಿಗಾ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಕಾವ್ಯ ಮತ್ತು ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ನೋಡಲ್ ಅಧಿಕಾರಿ ಜಯಶ್ರೀ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಜಿಲ್ಲಾ ರೆಡ್ ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು ಪ್ರಸ್ತಾವಿಕವಾಗಿ ಮಾತಾನಾಡಿ ಸ್ವಾಗತಿಸಿದರು. ಜಿಲ್ಲೆಯ ವಿವಿಧ ಕಾಲೇಜುಗಳ ರೆಡ್ ಕ್ರಾಸ್ ಸ್ವಯಂ ಸೇವಕರು ಮತ್ತು ಉಪನ್ಯಾಸಕರು, ರೆಡ್ ಕ್ರಾಸ್, ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರ ಮತ್ತು ಜಿಲ್ಲಾ ವಾರ್ತಾ ಇಲಾಖೆಯ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನ ಪೈಪ್‌ಲೈನ್‌ ಸಂಪರ್ಕ ಮುಂದಿನ ವರ್ಷ ಪೂರ್ಣ
ಎನ್‌ಎಂಪಿಎಯಲ್ಲಿ ವಿಶ್ವ ಪರಿಸರ ದಿನಾಚರಣೆ