ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ, ಯುವಜನರಲ್ಲಿ ಆರೋಗ್ಯದ ಬಗ್ಗೆ ಅರಿವು ಬೆಳೆಸುವ ಹಾಗೂ ಹೆಚ್‌ಐವಿ ಸೋಂಕಿತರ ಬಗೆಗಿನ ತಾರತಮ್ಯ ಮತ್ತು ಕಳಂಕವನ್ನು ನಿವಾರಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಸೊಸೈಟಿ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ ಉಡುಪಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಅಮೇಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಸಹಯೋಗದೊಂದಿಗೆ ಶುಕ್ತವಾರ ಜಿಲ್ಲಾ ಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್ ನಡೆಯಿತು.
ಕನ್ನಡಪ್ರಭ ವಾರ್ತೆ ಉಡುಪಿ

ಜಿಲ್ಲಾ ಮಹತ್ಮಾಗಾಂಧಿ ಕ್ರೀಡಾಂಗಣದ ಮುಂಭಾಗದಲ್ಲಿ ಅಪರ ಜಿಲ್ಲಾಧಿಕಾರಿ ಅಬಿದ್ ಗದ್ಯಾಳ್ ಈ ಮ್ಯಾರಥಾನ್‌ಗೆ ಚಾಲನೆ ನೀಡಿ, ಕೊನೆಯಲ್ಲಿ ಬಹುಮಾನಗಳನ್ನು ವಿತರಿಸಿದರು.
ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಚಿದಾನಂದ ಸಂಜು ಎಸ್.ವಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ ಜಿ. ಹುಬ್ಬಳ್ಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಷನ್ ಕುಮಾರ್ ಶೆಟ್ಟಿ, ಅಮೇಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಹರಿಪ್ರಸಾದ ರೈ, ಕಾರ್ಯದರ್ಶಿ ದಿನೇಶ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾ ಮಟ್ಟದ ಈ 5 ಕಿಮೀ ಮ್ಯಾರಥಾನ್ ಕಾರ್ಯಕ್ರಮದಲ್ಲಿ ಸುಮಾರು 200 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪುರುಷರ ವಿಭಾಗದಲ್ಲಿ ಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಚೆನ್ನಬಸವ ಪ್ರಥಮ, ಮಂಜುನಾಥ ದ್ವಿತೀಯ
ಹಾಗೂ ಚಂದ್ರಶೇಖರ್ ತೃತೀಯ ಹಾಗೂ ಮಹಿಳೆಯರ ವಿಭಾಗದಲ್ಲಿ ನಿಟ್ಟೆಯ ಡಾ. ಎನ್.ಎಸ್.ಎ.ಎಂ. ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರಾದ ನಂದಿನಿ ಪ್ರಥಮ, ದೀಕ್ಷಿತಾ ಜಿ. ದ್ವೀತಿಯ ಹಾಗೂ ಸಾಕ್ಷಿ ತೃತೀಯ ಸ್ಥಾನ ಪಡೆದಿದ್ದು, ವಿಜೇತರಿಗೆ ನಗದು ಬಹುಮಾನ ಮತ್ತು ಪದಕ ನೀಡಿ ಗೌರವಿಸಲಾಯಿತು.
ಜಿಲ್ಲಾ ಮಟ್ಟದ ವಿಜೇತರು ರಾಜ್ಯ ಮಟ್ಟದಲ್ಲಿ ನಡೆಯುವ ಮ್ಯಾರಥಾನ್ ಸ್ಪರ್ಧೆಯಲ್ಲಿ ಭಾಗವಹಿಸಲು ಅಯ್ಕೆಯಾಗಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.