ಉಡುಪಿ ವಿಧಾನಸಭಾ ಕ್ಷೇತ್ರದ ಬ್ರಹ್ಮಾವರ ಹೆಬ್ರಿ ರಾಜ್ಯ ಹೆದ್ದಾರಿಯ ಕುರ್ಪಾಡಿಯಿಂದ ಕಳ್ತೂರು ಸಂತೆಕಟ್ಟೆವರೆಗಿನ ಸುಮಾರು 5 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿಗೊಂಡ ಮುಖ್ಯ ರಸ್ತೆಯನ್ನು ಶಾಸಕ ಯಶ್‌ಪಾಲ್ ಸುವರ್ಣ ಉದ್ಘಾಟಿಸಿದರು.
ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಬ್ರಹ್ಮಾವರ ಹೆಬ್ರಿ ರಾಜ್ಯ ಹೆದ್ದಾರಿಯ ಕುರ್ಪಾಡಿಯಿಂದ ಕಳ್ತೂರು ಸಂತೆಕಟ್ಟೆವರೆಗಿನ ಸುಮಾರು 5 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿಗೊಂಡ ಮುಖ್ಯ ರಸ್ತೆಯನ್ನು ಶಾಸಕ ಯಶ್‌ಪಾಲ್ ಸುವರ್ಣ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಇಂತಹ ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ವಿಶೇಷ ವೇಗ ಸಿಗುತ್ತದೆ. ಅದರಂತೆ ಈಗಾಗಲೇ ಬ್ರಹ್ಮಾವರ ಹೆಬ್ರಿ ಮುಖ್ಯ ರಸ್ತೆಯ ಸುಮಾರು ಶೇ 80 ರಸ್ತೆ ದ್ವಿಪಥವಾಗಿ ಅಭಿವೃದ್ಧಿ ಪಡಿಸಲಾಗಿದ್ದು, ಕರ್ಜೆಯಿಂದ ಕುರ್ಪಾಡಿವರೆಗಿನ ರಸ್ತೆಯನ್ನು ಅತೀ ಶೀಘ್ರದಲ್ಲಿ ಅಭಿವೃದ್ಧಿ ಪಡಿಸಲು ವಿಶೇಷ ಆದ್ಯತೆ ನೀಡುವುದಾಗಿ ಹೇಳಿದರು. ಸುಮಾರು 5 ಕೋಟಿ ರು. ಅನುದಾನ ಒದಗಿಸಿ ರಸ್ತೆಯ ಅಭಿವೃದ್ಧಿಗೆ ವಿಶೇಷ ಮುತುವರ್ಜಿ ವಹಿಸಿದ ಶಾಸಕ ಯಶ್ ಪಾಲ್ ಸುವರ್ಣ ರವರಿಗೆ ಗ್ರಾಮಸ್ಥರ ಪರವಾಗಿ ನಾಗರಾಜ ಸೂಡಾ ಹಾಗೂ ಸತೀಶ್ ಪೈ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಉಡುಪಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ರಾಜೀವ್ ಕುಲಾಲ್, ಮಾಜಿ ಜಿಪಂ ಸದಸ್ಯ ಪ್ರತಾಪ್ ಹೆಗ್ಡೆ ಮಾರಾಳಿ, ಪಕ್ಷದ ಪ್ರಮುಖರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ, ಕಮಲಾಕ್ಷ ಹೆಬ್ಬಾರ್, ಹರೀಶ್ ಶೆಟ್ಟಿ ಚೇರ್ಕಾಡಿ, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮನೋಜ್ ಶೆಟ್ಟಿ, ಗುತ್ತಿಗೆದಾರರಾದ ತಡಾಲ್ ಸುರೇಶ್ ಶೆಟ್ಟಿ, ಕೆಂಜೂರು ಕಳ್ತೂರು ಗ್ರಾಪಂ ಸದಸ್ಯರು, ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.