ಕನ್ನಡಪ್ರಭ ವಾರ್ತೆ ಉಡುಪಿ
ಜಿಲ್ಲಾಡಳಿತ ಹಾಗೂ ರಾಮನಗರ ಜಿಲ್ಲಾ ತೆಂಗು ಮತ್ತು ಮಾವು ರೈತ ಉತ್ಪಾದಕರ ಸಂಸ್ಥೆ ರಾಮನಗರ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ರಾಮನಗರ ಜಿಲ್ಲೆ ರೈತರಿಂದ ನೈಸರ್ಗಿಕವಾಗಿ ಮಾಗಿಸಿರುವ ವಿವಿಧ 20ಕ್ಕೂ ಹೆಚ್ಚು ಮಾವಿನ ತಳಿಗಳ ಪ್ರದರ್ಶನ ಮತ್ತು ಮಾರಾಟ ಮೇಳ ಮೇ 16ರಂದು ಚಾಲನೆದೊರಕಿದ್ದು, 19ರ ವರೆಗೆ ನಡೆಯಲಿದೆ.
ಮೇಳದಲ್ಲಿ 20ಕ್ಕೂ ಅಧಿಕ ಮಳಿಗೆಯನ್ನು ತೆರೆಯಲಾಗಿದೆ. ರಾಮನಗರ ಜಿಲ್ಲೆಯ ಬಾದಾಮಿ, ರಸಪುರಿ, ಮಲಗೋವಾ, ತೋತಾಪುರಿ, ಸಿಂಧೂರ, ಸಕ್ಕರೆಗುತ್ತಿ (ಶುಗರ್‌ಬೇಬಿ), ಬೈಗಂಪಲ್ಲಿ, ರತ್ನಗಿರಿ, ಆಲ್ಪೋನ್ಸ್ ಸಹಿತ ವಿವಿಧ ತಳಿಯ ಒಟ್ಟು 45 ಟನ್‌ಗೂ ಹೆಚ್ಚು ಮಾವು ಮೇಳದಲ್ಲಿ ಲಭ್ಯವಿದೆ.ಮಾವು ಮೇಳದಲ್ಲಿ ಸಕ್ಕರೆಗುತ್ತಿ ಮಾವು ವಿಶೇಷ ಆಕರ್ಷಣೆಯಾಗಿದ್ದು, ಕೆಜಿಗೆ 300 ದರವಿದೆ. ತೋತಾಪುರಿ ಕೆ.ಜಿಗೆ 50 ರು. ಕನಿಷ್ಠ ದರದಾದ್ದರೆ, ಹಿಮಾಮ್ ಪಸಂದ್ ತಳಿಯು ಕೆಜಿಯೊಂದಕ್ಕೆ 400 ರು. ಇದ್ದು ಗರಿಷ್ಠ ತಳಿಯದ್ದಾಗಿದೆ.
ರೈತರು ತಾವು ಬೆಳೆದ ಮಾವನ್ನು ನೇರವಾಗಿ ಮಾರಾಟ ಮಾಡಲು ಮಾವು ಮೇಳವು ಒಂದು ಉತ್ತಮ ವೇದಿಕೆಯಾಗಿದೆ ಎಂದ ಅವರು, ರೈತರ ಉತ್ಪನ್ನಗಳಿಗೆ ಸೂಕ್ತ ಬೆಲೆ ದೊರಕಿಸುವ ನಿಟ್ಟಿನಲ್ಲಿ ಸರ್ಕಾರ ಫಾರ್ಮರ್ ಫ್ರೋಡ್ಯೂಸರ್ ಆರ್ಗನೈಸೆಷನ್ ಮೂಲಕ, ರೈತರಿಗೆ ಆಗುವಂತಹ ನಷ್ಟವನ್ನು ತಪ್ಪಿಸಿ ಸ್ವತಃ ಅವರೇ ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡಿ ಲಾಭ ಗಳಿಸುವ ಉದ್ದೇಶ ಇದೆ ಎಂದರು.