ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯ ಕುರಿತು ಉಚಿತ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭ ಅಜ್ಜರಕಾಡು ನಗರ ಕೇಂದ್ರ ಗ್ರಂಥಾಲಯದಲ್ಲಿ ನಡೆಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಉಡುಪಿ ಜಿಲ್ಲಾ ಸಾರ್ವಜನಿಕ ಗ್ರಂಥಾಲಯ ಇಲಾಖೆ, ಉಡುಪಿ ನಗರ ಕೇಂದ್ರ ಗ್ರಂಥಾಲಯ ಹಾಗೂ ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತರ ಅಧ್ಯಯನ ಕೇಂದ್ರದ ರಾಜ್ಯ ಶಾಸ್ತ್ರ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ಪ್ರೇರಣಾ - ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯ ಕುರಿತು ಉಚಿತ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭ ಭಾನುವಾರ ಅಜ್ಜರಕಾಡು ನಗರ ಕೇಂದ್ರ ಗ್ರಂಥಾಲಯದಲ್ಲಿ ನಡೆಯಿತು.
ಈ ಸಂದರ್ಭ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಮಾತನಾಡಿ, ಜೀವನದಲ್ಲಿ ಯಶಸ್ಸು ಪಡೆಯಲು ಶೃದ್ಧೆ, ಕಠಿಣ ಪರಿಶ್ರಮ, ಸಾಧಿಸುವ ಛಲ ಅಗತ್ಯ. ಇವುಗಳನ್ನು ಜೀವನದಲ್ಲಿ ರೂಢಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದು ಸಲಹೆ ನೀಡಿದರು.
ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ವಿಷ್ಣುಮೂರ್ತಿ ಪ್ರಭು ಮಾತನಾಡಿ, ಪ್ರತಿದಿನದ ಸಣ್ಣ ಸಣ್ಣ ಪ್ರಯತ್ನಗಳ ಪ್ರತಿಫಲಗಳಿಂದ ಬದುಕಿನಲ್ಲಿ ಯಶಸ್ಸು ದೊರೆಯುತ್ತದೆ. ಯಶಸ್ಸಿನೆಡೆಗೆ ತಮ್ಮ ಪ್ರಯತ್ನವನ್ನು ನಿಲ್ಲಿಸಬೇಡಿ ಎಂದರು. ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಗ್ರಂಥಪಾಲಕಿ ರಂಜಿತ ಸಿ. ನಿರೂಪಿಸಿದರು. ರಾಜಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರಶಾಂತ್ ನೀಲಾವರ್ ವಂದಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.