ಉಡುಪಿ: ಕುತ್ಪಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನ ವಾರ್ಷಿಕೋತ್ಸವವು ಭಾವಪ್ರಕಾಶ ಸಭಾಂಗಣದಲ್ಲಿ ನೆರವೇರಿತು.
ವಿದ್ಯಾರ್ಥಿಗಳು ಕೂಡಾ ಆಯುರ್ವೇದ ಕ್ಷೇತ್ರದಲ್ಲಿ ಮುನ್ನಡೆಯಲು ಇದೇ ರೀತಿ ಪೂರ್ಣ ಪ್ರಯತ್ನವನ್ನು ಮಾಡಿ ಎಂದು ಕರೆ ನೀಡಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಮಮತಾ ಕೆ.ವಿ., ಪ್ರತಿಕೂಲ ಪರಿಸ್ಥಿತಿಯ ಮಧ್ಯೆಯೂ ಚಲನ ಚಿತ್ರರಂಗ ಕ್ಷೇತ್ರದಲ್ಲಿ ಸಾಧನೆ ಮಾಡಲು ಜೆ.ಪಿ. ತೂಮಿನಾಡ್ ಪಟ್ಟ ಪರಿಶ್ರಮ ಎಲ್ಲರಿಗೂ ಮಾದರಿ. ರೋಗಿಗಳಿಗೆ ಚಿಕಿತ್ಸೆ ನೀಡುವುದಷ್ಟೇ ಅಲ್ಲ, ಎಲ್ಲಾ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಜೀವನವನ್ನು ವರ್ಣರಂಜಿತವಾಗಿಸಿಕೊಳ್ಳಿ ಎಂದು ತಿಳಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವಲಿಂಗಪ್ಪ ಸ್ವಾಗತಿಸಿದರು. ಆಡಳಿತ ವಿಭಾಗ ಮುಖ್ಯಸ್ಥ ಡಾ. ಪ್ರಶಾಂತ್ ಕೆ. ವಾರ್ಷಿಕ ವರದಿ ವಾಚನ ಮಾಡಿದರು. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ನಾಗರಾಜ್ ಎಸ್., ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥ ಡಾ. ರಮಾದೇವಿ ಜಿ., ಸ್ನಾತಕೋತ್ತರ ವಿಭಾಗದ ಡೀನ್ ಡಾ. ಶ್ರೀಕಾಂತ್ ಪಿ., ಸ್ನಾತಕೋತ್ತರ ವಿದ್ಯಾರ್ಥಿ ಪ್ರತಿನಿಧಿ ಡಾ. ಯಜ್ನೇಶ್ ದರ್ಬಾರ್ ಉಪಸ್ಥಿತರಿದ್ದರು. ಸ್ನಾತಕ ವಿಭಾಗದ ಡೀನ್ ಡಾ. ಪ್ರಥ್ವಿರಾಜ್ ಪುರಾಣಿಕ್ ಶೈಕ್ಷಣಿಕ ಕ್ಷೇತ್ರದಲ್ಲಿ ಪ್ರಶಸ್ತಿಗಳನ್ನು ಪಡೆದ ವಿದ್ಯಾರ್ಥಿಗಳನ್ನು ಪರಿಚಯಿಸಿದರು. ಆಟೋಟ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳನ್ನು ಸಹಪ್ರಾಧ್ಯಾಪಕರಾದ ಡಾ. ಸಹನಾ ಶಂಕರಿ, ಸಹಾಯಕ ಪ್ರಾಧ್ಯಾಪಕರಾದ ಡಾ. ಸುಷ್ಮಾ ಹಾಗೂ ಡಾ. ಕೊಚ್ಚುತೆರೇಸಿಯಾ ಜೋಸೆ ವಾಚಿಸಿದರು. ವಾರ್ಷಿಕೋತ್ಸವದ ಪ್ರಯುಕ್ತ ಬಂದ ಶುಭ ಸಂದೇಶ ವಾಚನವನ್ನು ಸ್ನಾತಕೋತ್ತರ ವಿದ್ಯಾರ್ಥಿ ಉಪಪ್ರತಿನಿಧಿ ಡಾ. ದೀಕ್ಷಾ ಜೋಗಿ ವಾಚಿಸಿದರು. ವಿದ್ಯಾರ್ಥಿ ಸಂಘದ ಕಾರ್ಯದರ್ಶಿಯಾದ ಧನ್ಯತಾ ಎನ್. ವಂದಿಸಿದರು. ವಿದ್ಯಾರ್ಥಿಗಳಾದ ಇಶಾ ಹಾಗೂ ಪ್ರವೀಣ್ ನಿರೂಪಿಸಿದರು. ಆನಂತರ ‘ಕಲಾ ಸೌರಭ - ೨೦೨೫’ ಎಂಬ ಶೀರ್ಷಿಕೆಯಡಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.