ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸ್ವಸ್ಥ ವೃತ್ತ ಮತ್ತು ಯೋಗ ಸ್ನಾತಕೋತ್ತರ ಅಧ್ಯಯನ ವಿಭಾಗವು ಮೈಸೂರಿನ ಸರ್ಕಾರಿ ಆಯುರ್ವೇದ ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ನಿಕ್ಷಯಾ ಅಭಿಯಾನ- ೨೦೨೫ ಸಮ್ಮೇಳನವನ್ನು ಯಶಸ್ವಿಯಾಗಿ ಆಯೋಜಿಸಿತು.
ಕನ್ನಡಪ್ರಭ ವಾರ್ತೆ ಉಡುಪಿ
ಇಲ್ಲಿನ ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸ್ವಸ್ಥ ವೃತ್ತ ಮತ್ತು ಯೋಗ ಸ್ನಾತಕೋತ್ತರ ಅಧ್ಯಯನ ವಿಭಾಗವು ಮೈಸೂರಿನ ಸರ್ಕಾರಿ ಆಯುರ್ವೇದ ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ನಿಕ್ಷಯಾ ಅಭಿಯಾನ- ೨೦೨೫ ಸಮ್ಮೇಳನವನ್ನು ಯಶಸ್ವಿಯಾಗಿ ಆಯೋಜಿಸಿತು.ಸಮ್ಮೇಳನದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಮೈಸೂರಿನ ಸರ್ಕಾರಿ ಆಯುರ್ವೇದ ಸಂಶೋಧನಾ ಕೇಂದ್ರದ ಸಹಾಯಕ ನಿರ್ದೇಶಕ ಡಾ.ಲಕ್ಷ್ಮೀನಾರಾಯಣ ಶೆಣೈ, ಉಡುಪಿ ಜಿಲ್ಲಾ ಟಿಬಿ ಅಧಿಕಾರಿ ಡಾ. ಚಿದಾನಂದ ಸಂಜು, ಮೈಸೂರಿನ ಜೆಎಸ್‌ಎಸ್ ಆಯುರ್ವೇದ ಕಾಲೇಜಿನ ಮಾಜಿ ಪ್ರಾಧ್ಯಾಪಕ ಡಾ. ಸದಾನಂದ ಪರಗೋಂಡೆ ಆಗಮಿಸಿದ್ದರು.ಕಾಲೇಜಿನ ಪ್ರಾಂಶುಪಾಲೆ ಡಾ. ಮಮತಾ ಕೆ.ವಿ. ಸಮಾರಂಭದ ಅಧ್ಯಕ್ಷತೆ ವಹಿಸಿದ್ದು, ಆಯುರ್ವೇದ ಚಿಕಿತ್ಸೆ ಹಾಗೂ ಸಂಶೋಧನೆಯು ಕ್ಷಯ ರೋಗ ನಿರ್ಮೂಲನೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ ಎಂದು ಪ್ರತಿಪಾದಿಸಿದರು.ಕಾಲೇಜಿನ ಮುಖ್ಯಸ್ಥ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ, ವೀಡಿಯೋ ಸಂದೇಶ ನೀಡಿ ಟಿಬಿ ನಿರ್ಮೂಲನೆಯ ಮಹತ್ವವನ್ನು ಒತ್ತಿ ಹೇಳಿದರು.
ನಿಕ್ಷಯಾ ಅಭಿಯಾನದ ಮುಖ್ಯ ಆಯೋಜನಾ ಕಾರ್ಯದರ್ಶಿ ಡಾ. ವಿಜಯ್ ಬಿ. ನೆಗಳೂರ್ ಸ್ವಾಗತಿಸಿದರು. ಡಾ. ಶ್ರೀನಿಧಿ ಧನ್ಯಾ ಬಿ.ಎಸ್. ವಂದಿಸಿದರು.ಸಮ್ಮೇಳನದ ವೈಜ್ಞಾನಿಕ ಅಧಿವೇಶನಗಳಲ್ಲಿ ಡಾ. ಚಿದಾನಂದ್ ಸಂಜು, ಡಾ. ಜೋಸ್ ಜೋಮ್ ಥೋಮಸ್, ಡಾ. ವೃಂದಾ ಮಾರಿಯಾ, ಡಾ. ನಾಗರಾಜ್ ಎಸ್. ಹಾಗೂ ಡಾ. ಬಿ. ಗುರುಬಾಸವರಾಜ್ ಭಾಗವಹಿಸಿದ್ದರು. ಆಯುರ್ವೇದ ಹಾಗೂ ಆಧುನಿಕ ವೈದ್ಯಕೀಯ ಪದ್ದತಿಗಳನ್ನು ಟಿಬಿ ನಿರ್ವಹಣೆಯಲ್ಲಿ ಹೇಗೆ ಸಂಯೋಜಿಸಬಹುದು ಎಂಬುದರ ಕುರಿತು ಆಳವಾದ ಚರ್ಚೆಗಳು ನಡೆಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.