ಉಪಚುನಾವಣಾ ಫಲಿತಾಂಶ ರಾಜ್ಯ ಸರ್ಕಾರದ ಜನಪ್ರಿಯತೆಗೆ ಸಾಕ್ಷಿ - ಗೀತಾ ವಾಗ್ಳೆ

KannadaprabhaNewsNetwork |  
Published : May 06, 2026, 02:45 AM IST
05ಗೀತಾ | Kannada Prabha

ಸಾರಾಂಶ

ಬಾಗಲಕೋಟೆ ಮತ್ತು ದಾವಣಗೆರೆ ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯ ಫಲಿತಾಂಶವು ರಾಜ್ಯದ ಸಿದ್ಧರಾಮಯ್ಯ ಅವರು ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪ್ರಿಯತೆಗೆ ಸಾಕ್ಷಿಯಾಗಿದೆ ಎಂದು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗೀತಾ ವಾಗ್ಳೆ ಅವರು ಹೇಳಿದ್ದಾರೆ.

ಉಡುಪಿ: ಬಾಗಲಕೋಟೆ ಮತ್ತು ದಾವಣಗೆರೆ ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯ ಫಲಿತಾಂಶವು ರಾಜ್ಯದ ಸಿದ್ಧರಾಮಯ್ಯ ಅವರು ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪ್ರಿಯತೆಗೆ ಸಾಕ್ಷಿಯಾಗಿದೆ ಎಂದು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗೀತಾ ವಾಗ್ಳೆ ಅವರು ಹೇಳಿದ್ದಾರೆ.ರಾಜ್ಯ ಸರ್ಕಾರವು ಮತದಾರರಿಗೆ ನೀಡುತ್ತಿರುವ ಪಂಚಗ್ಯಾರಂಟಿ ಯೋಜನೆಗಳು ಮತದಾರರ ಮನಗೆದ್ದಿವೆ. ನುಡಿದಂತೆ ನಡೆಯುತ್ತಿರುವ ಸಿದ್ಧರಾಮಯ್ಯ ನೇತೃತ್ವದ ಸರ್ಕಾರದ ಮೇಲೆ ವಿಶ್ವಾಸ ಮೂಡಿದೆ ಎನ್ನುವುದಕ್ಕೆ ಈ ಎರಡು ಫಲಿತಾಂಶಗಳೇ ಸಾಕ್ಷಿಯಾಗಿವೆ ಎಂದವರು ಹೇಳಿದ್ದಾರೆ. ದಾವಣಗೆರೆಯಲ್ಲಿ ಟಿಕೆಟ್ ವಿಚಾರದಲ್ಲಿ ಆರಂಭದಲ್ಲಿ ಉದ್ಭವಿಸಿದ್ದ ಸಣ್ಣ ಗೊಂದಲವನ್ನೇ ದೊಡ್ಡದಾಗಿಸಿಕೊಂಡು ಅದರ ಸಂಪೂರ್ಣ ಲಾಭ ಪಡೆಯಲು ಬಿಜೆಪಿ ಯತ್ನಿಸಿತ್ತು. ಒಡೆದು ಆಳುವ ನೀತಿಯನ್ನು ಅನುಸರಿಸುವ ಮೂಲಕ ಕಾಂಗ್ರೆಸ್ ಪಕ್ಷದ ವಿರುದ್ಧ ಸಾಕಷ್ಟು ಅಪಪ್ರಚಾರದಲ್ಲಿ ತೊಡಗುವುದರ ಮೂಲಕ ಇನ್ನೇನು ಗೆಲುವು ತಮ್ಮದೇ ಎಂಬಂತೆ ಬೀಗಿದವರಿಗೆ ಈ ಫಲಿತಾಂಶವು ಒಂದು ಪಾಠ ಕಲಿಸಿದೆ. ಈ ಚುನಾವಣೆಯಲ್ಲಿ ದಾವಣಗೆರೆ ಹಾಗೂ ಬಾಗಲಕೋಟೆಯ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಹಾಗೂ ರಾಜ್ಯದ ಬೇರೆ ಬೇರೆ ಕಡೆಗಳಿಂದ ಆಗಮಿಸಿದ್ದ ಪಕ್ಷದ ವಿವಿಧ ಸ್ತರಗಳ ನಾಯಕರು ಒಗ್ಗಟ್ಟಿನಿಂದ ಹಾಗೂ ಸಮಭಾವ ಸೌಹಾರ್ದತೆಯಿಂದ ದುಡಿದ ಪರಿಣಾಮವಾಗಿ ಈ ಫಲಿತಾಂಶ ಬರಲು ಸಾಧ್ಯವಾಯಿತು ಎಂದವರು ಹೇಳಿದ್ದಾರೆ. ಬಾಗಲಕೋಟೆಯ ನೂತನ ಶಾಸಕರಾಗಿ ಆಯ್ಕೆಯಾಗಿರುವ ಉಮೇಶ್ ಮೇಟಿ ಹಾಗೂ ದಾವಣಗೆರೆಯ ನೂತನ ಶಾಸಕರಾದ ಯುವ ನಾಯಕ ಸಮರ್ಥ್ ಶ್ಯಾಮನೂರು ಇಬ್ಬರಿಗೂ ಅಭಿನಂದನೆಗಳೊಂದಿಗೆ ಮುಂದಿನ ದಿನಗಳಲ್ಲಿ ಅವರಿಬ್ಬರೂ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಉತ್ತಮವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡುವಂತಾಗಲಿ ಎಂದು ಗೀತಾ ವಾಗ್ಳೆ ಆಶಯ ವ್ಯಕ್ತಪಡಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಂಟ್ವಾಳದಲ್ಲಿ ಬಿಜೆಪಿ ಸಂಭ್ರಮಾಚರಣೆ
ಪುತ್ತೂರು : ಅಕ್ಷಯ ಪದವಿ ಕಾಲೇಜ್‌ ತಸ್ತ್ರೀಯ ಫುಡ್ ಫೆಸ್ಟ್