ಉಡುಪಿ: ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

KannadaprabhaNewsNetwork |  
Published : Oct 23, 2024, 12:48 AM IST
ಚೈನ್22 | Kannada Prabha

ಸಾರಾಂಶ

ಮಕ್ಕಳ ಸುಧಾರಿತ ಪೌಷ್ಠಿಕತೆಗಾಗಿ ಆರೋಗ್ಯ ಪ್ರಕ್ರಿಯೆ ಕುರಿತು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ಜಿಲ್ಲಾಮಟ್ಟದ ತರಬೇತಿ ಕಾರ್ಯಾಗಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯ ಶ್ರೀ ಕೃಷ್ಣ ಸಭಾಂಗಣದಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಜಿಲ್ಲಾಡಳಿತ ಆಶ್ರಯದಲ್ಲಿ ‘ಚೈನ್’ ಮಕ್ಕಳ ಸುಧಾರಿತ ಪೌಷ್ಠಿಕತೆಗಾಗಿ ಆರೋಗ್ಯ ಪ್ರಕ್ರಿಯೆ ಕುರಿತು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ಜಿಲ್ಲಾಮಟ್ಟದ ತರಬೇತಿ ಕಾರ್ಯಾಗಾರ ಸೋಮವಾರ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯ ಶ್ರೀ ಕೃಷ್ಣ ಸಭಾಂಗಣದಲ್ಲಿ ನಡೆಯಿತು.

ಕಾರ್ಯಾಗಾರವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಐ.ಪಿ. ಗಡಾದ್ ಉದ್ಘಾಟಿಸಿ, ಮಕ್ಕಳಲ್ಲಿನ ಅಪೌಷ್ಠಿಕತೆ ಮತ್ತು ರಕ್ತಹೀನತೆಯನ್ನು ಶೀಘ್ರ ಪತ್ತೆ ಹಚ್ಚಿ ಅವುಗಳನ್ನು ಸಮುದಾಯದಲ್ಲಿ ನಿಯಂತ್ರಿಸುವ ಉದ್ದೇಶದಿಂದ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ಈ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದರು.6 ವರ್ಷದೊಳಗಿನ ಮಕ್ಕಳಿಗೆ ಸಾಂಸ್ಥಿಕ ಹಾಗೂ ಸಮುದಾಯ ಮಟ್ಟದಲ್ಲಿ ಅಪೌಷ್ಠಿಕತೆ ನಿವಾರಣೆಗಾಗಿ ಆರೈಕೆ ಮತ್ತು ಚಿಕಿತ್ಸೆ, ಪೌಷ್ಠಿಕ ಪುನಶ್ಚೇತನ ಹಾಗೂ ಸಾರ್ವಜನಿಕ ಆರೋಗ್ಯ ಸೇವೆ ಮುಂತಾದ ಸೇವೆಗಳು ಸಮುದಾಯದ ಕಟ್ಟಕಡೆಯ ಜನರಿಗೂ ಲಭಿಸುವಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ಪಾತ್ರ ಮಹತ್ತರವಾಗಿದೆ. ಮಕ್ಕಳಲ್ಲಿನ ಸಾಧಾರಣ (ಮಾಡರೇಟ್) ಹಾಗೂ ತೀವ್ರ (ಸೀವಿಯರ್) ಅಪೌಷ್ಠಿಕತೆಯನ್ನು ತ್ವರಿತವಾಗಿ ಗುರುತಿಸಿ ಅರ್ಹ ಮಕ್ಕಳನ್ನು ಪೌಷ್ಠಿಕ ಪುನಶ್ಛೇತನ ಕೇಂದ್ರಗಳಿಗೆ (ಎನ್.ಆರ್.ಸಿ) ನಿರ್ದೇಶಿಸಿ ಅಪೌಷ್ಠಿಕತೆಯನ್ನು ನಿವಾರಿಸಬೇಕು ಎಂದು ಹೇಳಿದರು.ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಜ್ಯೋತ್ಸ್ನಾ ಬಿ.ಎಸ್. ಮಾತನಾಡಿ, ಮಕ್ಕಳಲ್ಲಿ ಅಪೌಷ್ಠಿಕತೆ ನಿವಾರಣೆಗಾಗಿ ಸಮತೋಲಿತ ಆಹಾರದ ಅಗತ್ಯವಿದೆ. ಪೌಷ್ಠಿಕತೆಯ ಏಳು ಅಂಶಗಳು ಕಾರ್ಬೋಹೈಡ್ರೇಟ್, ಪ್ರೋಟಿನ್, ಕೊಬ್ಬು, ವಿಟಮಿನ್, ಖನಿಜಗಳು, ಆಹಾರದ ಫೈಬರ್, ನೀರು ಇವುಗಳು ಸಮತೋಲಿತವಾಗಿ ದೇಹಕ್ಕೆ ಸೇರಿದರೆ ಉತ್ತಮ ಆರೋಗ್ಯವನ್ನು ಪಡೆಯಬಹುದು. ಈ ಅಂಶವನ್ನು ಸಮುದಾಯದ ಜನರಿಗೆ ಮನವರಿಕೆ ಮಾಡಬೇಕು ಎಂದರು.ತರಬೇತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕೋಟ ಸಿ.ಎಚ್.ಸಿ. ಆಡಳಿತ ವೈದ್ಯಾಧಿಕಾರಿ ಹಾಗೂ ಮಕ್ಕಳ ತಜ್ಞ ಡಾ.ಮಾಧವ ಪೈ, ಪ್ರಭಾರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ವಿಜಯಬಾಯಿ, ಚಂದ್ರಕಲಾ ಹಾಗೂ ಭಾಗ್ಯಲಕ್ಷ್ಮಿ, ಕುಂದಾಪುರ ಎನ್.ಆರ್.ಸಿ ಡಯಟ್ ಕೌನ್ಸಿಲರ್ ಗುರುದೇವ ವಿ.ಕುಮಾರ್ ತರಬೇತಿ ನೀಡಿದರು.ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರೀತಮ್ ಬಿ.ಎಸ್., ಜಿಲ್ಲಾ ಲೆಕ್ಕಪತ್ರ ವ್ಯವಸ್ಥಾಪಕ ಗಿರೀಶ್ ಜೆ. ಕಡ್ಡಿಪುಡಿ, ಆರ್.ಸಿ.ಎಚ್. ಡಿ.ಪಿ.ಸಿ ಸುಧೀಂದ್ರ, ಪ್ರತಿಮಾ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ