ಉಡುಪಿ: ಇಬ್ಬರು ಕ್ರಿಮಿನಲ್‌ಗಳ ಗಡಿಪಾರು

KannadaprabhaNewsNetwork |  
Published : Mar 28, 2026, 02:30 AM IST
ಶಾಲಾ ಆವರಣದಲ್ಲಿ ವಿದ್ಯಾರಥಿಗಳಿಂದಲೇ ಅಡುಗೆ ತಯಾರಿ ಹೀಗಿತ್ತು... | Kannada Prabha

ಸಾರಾಂಶ

ಉಡುಪಿಯ ಶಿರ್ವ ಪೊಲೀಸ್‌ ಠಾಣಾ ವ್ಯಾಪ್ತಿಯ ಮಹಮ್ಮದ್‌ ನೌಫಿಲ್‌ ಹಾಗೂ ಮಲ್ಪೆ ಪೊಲೀಸ್‌ ಠಾಣಾ ವ್ಯಾಪ್ತಿಯ ಸುಹಾನ್‌ ಪೂಜಾರಿ ಎಂಬುವರ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿಯಾಗಿರುವ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ ಶಂಕರ್ ಅವರು ಉಡುಪಿ ಜಿಲ್ಲೆಯಿಂದ ಗಡಿಪಾರು ಆದೇಶ ಹೊರಡಿಸಿರುತ್ತಾರೆ.

ಉಡುಪಿ: ಇಲ್ಲಿನ ಶಿರ್ವ ಪೊಲೀಸ್‌ ಠಾಣಾ ವ್ಯಾಪ್ತಿಯ ಮಹಮ್ಮದ್‌ ನೌಫಿಲ್‌ ಹಾಗೂ ಮಲ್ಪೆ ಪೊಲೀಸ್‌ ಠಾಣಾ ವ್ಯಾಪ್ತಿಯ ಸುಹಾನ್‌ ಪೂಜಾರಿ ಎಂಬುವರ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿಯಾಗಿರುವ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ ಶಂಕರ್ ಅವರು ಉಡುಪಿ ಜಿಲ್ಲೆಯಿಂದ ಗಡಿಪಾರು ಆದೇಶ ಹೊರಡಿಸಿರುತ್ತಾರೆ. ಕಾಪು ತಾಲೂಕಿನ ಕಳತ್ತೂರು ಗ್ರಾಮದ ಮಹಮ್ಮದ್‌ ನೌಫಿಲ್‌ ವಿರುದ್ಧ 5 ಕ್ರಿಮಿನಲ್ ಪ್ರಕರಣಗಳಿದ್ದು, ಶಿರ್ವ ಠಾಣೆಯಲ್ಲಿ ರೌಡಿ ಶೀಟರ್ ಆಗಿದ್ದಾನೆ. ಕೊಡವೂರು ಗ್ರಾಮದ ಸುಹಾನ್‌ ಪೂಜಾರಿ ವಿರುದ್ಧ 4 ಪ್ರಕರಣ ದಾಖಲಾಗಿರುತ್ತದೆ. ಮಹಮ್ಮದ್‌ ನೌಫಿಲ್‌ ನನ್ನು ಹಾವೇರಿ ಜಿಲ್ಲೆಯ ಶಿಗ್ಗಾಂವ ಪೊಲೀಸ್ ಠಾಣಾ ವ್ಯಾಪ್ತಿಗೆ ಮತ್ತು ಸುಹಾನ್‌ ಪೂಜಾರಿ ಈತನನ್ನು ಯಾದಗಿರಿ ಜಿಲ್ಲೆಯ ಯಾದಗಿರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗುರಿ ನಿರ್ಧಾರದಲ್ಲಿ ಸ್ಪಷ್ಟತೆ ಅಗತ್ಯ: ಡಾ.ಕುರಿಯನ್‌
ಬನ್ನಂಜೆ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ ಸಂಪನ್ನ