ಉಡುಪಿ-ಉಚ್ಚಿಲ ದಸರಾ 2025: ವಿಧ್ಯುಕ್ತ ಚಾಲನೆ

KannadaprabhaNewsNetwork |  
Published : Sep 23, 2025, 01:05 AM IST
22ದಸರಾ - ಉಡುಪಿ ಉಚ್ಚಿಲ ದಸರಾವನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಣಿ ಉದ್ಘಾಟಿಸಿದರು.  | Kannada Prabha

ಸಾರಾಂಶ

ಉಡುಪಿ - ಉಚ್ಚಿಲ ದಸರಾ ಎಂದೇ ಪ್ರಸಿದ್ಧವಾಗುತ್ತಿರುವ ಇಲ್ಲಿನ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಸೋಮವಾರ ಅದ್ಧೂರಿಯ ನವರಾತ್ರೋತ್ಸವಕ್ಕೆ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಉಚ್ಚಿಲ

ಉಡುಪಿ - ಉಚ್ಚಿಲ ದಸರಾ ಎಂದೇ ಪ್ರಸಿದ್ಧವಾಗುತ್ತಿರುವ ಇಲ್ಲಿನ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಸೋಮವಾರ ಅದ್ಧೂರಿಯ ನವರಾತ್ರೋತ್ಸವಕ್ಕೆ ಚಾಲನೆ ನೀಡಿದರು.ನಂತರ ಮಾತನಾಡಿದ ರೋಹಿಣಿ ಸಿಂಧೂರಿ, ಉಡುಪಿ - ಉಚ್ಚಿಲ ದಸರಾ ಆಚರಣೆಯು ಮೈಸೂರು ದಸರಾಕ್ಕಿಂತ ವಿಭಿನ್ನವಾಗಿದೆ. ಈ ಮಹಾಲಕ್ಷ್ಮೀ ದೇವಳಕ್ಕೆ ಬಂದ ಅನುಭವ ಬಹಳ ಸಂತಸ ತಂದಿದೆ. ಜನರ ಭಾಗವಹಿಸುವಿಕೆಯಿಂದ 11 ದಿನ ನಡೆಯುವ ಈ ದಸರಾ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಪೋಲಿಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಪೂರ್ಣಿಮ, ಉದ್ಯಮಿಗಳಾದ ಕೃಷ್ಣಮೂರ್ತಿ, ಅಂಜಲಿ ವಿಜಯ್ ಮಾತನಾಡಿದರು.

ದಸರಾ ರೂವಾರಿ ನಾಡೋಜ ಡಾ. ಜಿ. ಶಂಕರ್, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಉಪಾಧ್ಯಕ್ಷ ಮೋಹನ್ ಬೇಂಗ್ರೆ, ದಿನೇಶ್ ಎರ್ಮಾಳು, ಕ್ಷೇತ್ರಾಡಳಿಯ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ, ದಸರಾ ಉತ್ಸವ ಸಮಿತಿ ಅಧ್ಯಕ್ಷ ವಿನಯ ಕರ್ಕೇರ, ಮಹಿಳಾ ಸಂಚಾಲಕಿ ಸಂಧ್ಯಾದೀಪ ಸುನೀಲ್, ದೇವಳದ ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ, ಉದ್ಯಮಿ ಸಾಧು ಸಾಲ್ಯಾನ್, ಶ್ರೀಪತಿ ಭಟ್, ಉಷಾ ರಾಣಿ ಮಂಗಳೂರು, ಮನೋಜ್ ಕಾಂಚನ್, ಸುಜಿತ್ ಸಾಲ್ಯಾನ್, ಸತೀಶ್ ಕಾಂಚನ್, ಶಿವಕುಮಾರ್ ಮೆಂಡನ್, ಸುಗುಣ ಕರ್ಕೇರ ಮತ್ತಿತರರು ಉಪಸ್ಥಿತರಿದ್ದರು.ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೊಟ್ಯಾನ್ ಬೆಳ್ಳಂಪಳ್ಳಿ ಸ್ವಾಗತಿಸಿದರು. ದೇವಳದ ಪ್ರಧಾನ ವ್ಯವಸ್ಥಾಪಕ ಸತೀಶ್ ಅಮೀನ್ ಪಡುಕರೆ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು ವಂದಿಸಿದರು.ವಸ್ತುಪ್ರದರ್ಶನಕ್ಕೆ ಎಸ್ಪಿ ಚಾಲನೆ:

ಇದೇ ಸಂದರ್ಭ ಆಯೋಜಿಸಲಾಗಿರುವ ವೈವಿಧ್ಯಮಯ ವಸ್ತು ಪ್ರದರ್ಶನವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಉದ್ಘಾಟಿಸಿದರು.

ಈ ಪ್ರದರ್ಶನದಲ್ಲಿ ಕರಕುಶಲ ವಸ್ತುಗಳ ಜೊತೆಗೆ ತುಳುನಾಡಿನ ವಿವಿಧ ಸಾಂಪ್ರದಾಯಿಕ ಕುಲಕಸುಬಗಳ ಪ್ರಾತ್ಯಕ್ಷಿಕೆಯೂ ಇದೆ. ವಿವಿುಧ ರೀತಿಯ ಸಾಕು ಪಕ್ಷಿಗಳು, ಗಾಣದೆಣ್ಣೆ, ಪಂಚಲೋಹಗಳ ಕಲಾಕೃತಿಗಳು ಮತ್ತು ವಿಶೇಷವಾಗಿ ಸಮುದ್ರದಲ್ಲಿ ವಾಸಿಸುವ ವಿವಿಧ ಜೀವಂತ ಮೀನುಗಳ ಬಹೃತ್ ತೆರೆದ ಅಕ್ವೇರಿಯಂ ಗಮನ ಸೆಳೆಯುತ್ತಿದೆ........................

ಕಂಗೊಳಿಸುವ ಶಾರದೆ, ನವದುರ್ಗೆಯರು

ಮುಂದಿನ 11 ದಿನಗಳ ಕಾಲ ಪೂಜಿಸಲಾಗುವ ಶ್ರೀ ಶಾರದೆ ಮತ್ತು ನವದುರ್ಗೆಯರ ವಿಗ್ರಹಗಳನ್ನು ಕ್ಷೇತ್ರದ ತಂತ್ರಿಗಳಾದ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿ ಹಾಗೂ ಪ್ರಧಾನ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯರ ನೇತೃತ್ವದಲ್ಲಿ ಸೋಮವಾರ ಬೆಳಗ್ಗೆ 9 ಗಂಟೆಗೆ ಪ್ರತಿಷ್ಠಾಪಿಸಲಾಯಿತು.

ಆಳೆತ್ತರದ ಈ ಮನಮೋಹಕ ವಿಗ್ರಹಗಳನ್ನು ಶಿವಮೊಗ್ಗದ ಶ್ರೀಗುರು ಕಲಾಮಂದಿರದ ಕುಬೇರ ಮತ್ತು ಬಳಗದವರು ರಚಿಸಿದ್ದಾರೆ. ಅ.2ರಂದು ಸಂಜೆ ವೈಭವದ ಶೋಭಾಯಾತ್ರೆಯಲ್ಲಿ ಅವುಗಳ‍ನ್ನು ಕಾಪು ಕಡಲತೀರದಲ್ಲಿ ಗಂಗಾರತಿ ನಡೆಸಿ ಜಲಸ್ತಂಭನಗೊಳಿಸಲಾಗುತ್ತದೆ.

PREV

Recommended Stories

ಅಕ್ರಮ ಶಸ್ತ್ರಾಸ್ತ್ರ: ನಿನ್ನೆಯೂ ವಿಚಾರಣೆಗೆ ತಿಮರೋಡಿ ಗೈರು
ಸಿದ್ದು ಆಳ್ವಿಕೆ ಟಿಪ್ಪು ಆಳ್ವಿಕೆ ನಾಚಿಸುವಂತಿದೆ : ಬಿವೈವಿ