ಉಡುಪಿ ಉಚ್ಚಿಲ ದಸರಾಕ್ಕೆ ವಿದ್ಯುಕ್ತ ಚಾಲನೆ

KannadaprabhaNewsNetwork |  
Published : Oct 04, 2024, 01:10 AM IST
ದಸರ3 | Kannada Prabha

ಸಾರಾಂಶ

ದ.ಕ. ಮೊಗವೀರ ಮಹಾಜನ ಸಂಘದ ವತಿಯಿಂದ ಇಲ್ಲಿನ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ 3ನೇ ವರ್ಷದ ಉಡುಪಿ ಉಚ್ಚಿಲ ದಸರಾ ಮಹೋತ್ಸವ- 2024ಕ್ಕೆ ಗುರುವಾರ ಉಡುಪಿ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ವಿದ್ಯುಕ್ತವಾಗಿ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಉಚ್ಚಿಲ

ದ.ಕ. ಮೊಗವೀರ ಮಹಾಜನ ಸಂಘದ ವತಿಯಿಂದ ಇಲ್ಲಿನ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ 3ನೇ ವರ್ಷದ ಉಡುಪಿ ಉಚ್ಚಿಲ ದಸರಾ ಮಹೋತ್ಸವ- 2024ಕ್ಕೆ ಗುರುವಾರ ಉಡುಪಿ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ವಿದ್ಯುಕ್ತವಾಗಿ ಚಾಲನೆ ನೀಡಿದರು.ನಂತರ ಮಾತನಾಡಿದ ಜಿಲ್ಲಾಧಿಕಾರಿ, ಉಡುಪಿ-ಉಚ್ಚಿಲ ನಾಡಹಬ್ಬ ದಸರಾವು ಕರಾವಳಿಯ ಸಾಂಸ್ಕೃತಿಕ ವೈಭವವನ್ನು ಹೆಚ್ಚಿಸುವಂತೆ ಆಯೋಜಿಸಲಾಗಿದೆ. ತಾಯಿ ಶಾರದೆ ಎಲ್ಲ ಜನರಿಗೆ ಮಂಗಳ ಉಂಟು ಮಾಡಲಿ ಎಂದು ಹಾರೈಸಿದರು.ಮಹಾಜನ ಸಂಘದ ಗೌರವ ಸಲಹೆಗಾರ ನಾಡೋಜ ಡಾ. ಜಿ. ಶಂಕರ್‌, ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ, ಕಾಪು ತಹಸೀಲ್ದಾರ್‌ ಡಾ. ಪ್ರತಿಭಾ ಆರ್‌., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ಪೂರ್ಣಿಮಾ, ಉಧ್ಯಮಿ ಕನ್ಯಾನ ಸದಾಶಿವ ಶೆಟ್ಟಿ, ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಅವರನ್ನು ಸನ್ಮಾನಿಸಿ ಅಭಿನಂದಿಸಿದರು.ಆಕರ್ಷಕವಾಗಿ ನಿರ್ಮಿಸಲಾಗಿರುವ ದಸರಾ ಮಂಟಪದಲ್ಲಿ ನವದುರ್ಗೆಯರ ಮತ್ತು ಶ್ರೀ ಶಾರದಾ ಮಾತೆಯ ವಿಗ್ರಹಗಳನ್ನು ಕ್ಷೇತ್ರದ ತಂತ್ರಿಗಳಾದ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿ ಹಾಗೂ ಪ್ರಧಾನ ಪುರೋಹಿತರಾದ ಕೆ.ವಿ. ರಾಘವೇಂದ್ರ ಉಪಾಧ್ಯಾಯರ ನೇತೃತ್ವದಲ್ಲಿ ಪ್ರತಿಷ್ಠಾಪಿಸಲಾಯಿತು.ಈ ದಸರಾ ಮಹೋತ್ಸವ ಪ್ರಯುಕ್ತ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನ, ಗುಡಿ ಕೈಗಾರಿಕಾ ಪ್ರಾತ್ಯಕ್ಷಿಕೆ, ಮೀನುಗಳ ಪ್ರದರ್ಶನ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಲಭ್ಯವಿರುವ ಮೀನುಗಾರಿಕೆ ಯೋಜನೆಗಳ ಮಾಹಿತಿ ಮತ್ತು ಮೀನುಗಾರಿಕಾ ಪರಿಕರಗಳ ಪ್ರದರ್ಶನ ಸೇರಿದಂತೆ ವಿವಿಧ ಪ್ರದರ್ಶನಗಳ ಉದ್ಘಾಟನೆ ನೆರವೇರಿತು.ದ.ಕ. ಮೊಗವೀರ ಮಹಾಜನ ಸಂಘದ 100ನೇ ವರ್ಷದ ಸವಿನೆನಪಿಗೆ ನವೀಕರಿಸಲ್ಪಟ್ಟ ನೂತನ ಆಡಳಿತ ಕಚೇರಿಯ ಶುಭಾರಂಭ ನೆರವೇರಿತು.ಈ ಸಂದರ್ಭ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಉಪಾಧ್ಯಕ್ಷ ಮೋಹನ್ ಬೇಂಗ್ರೆ, ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಜೊತೆ ಕಾರ್ಯದರ್ಶಿ ಸುಜಿತ್ ಸಾಲ್ಯಾನ್ ಮೂಲ್ಕಿ, ಕೋಶಾಧಿಕಾರಿ ರತ್ನಾಕರ ಸಾಲ್ಯಾನ್, ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ಗಿರಿಧರ ಸುವರ್ಣ ಮೂಳೂರು, ಕಾರ್ಯದರ್ಶಿ ನಾರಾಯಣ ಸಿ. ಕರ್ಕೇರ, ಕೋಶಾಧಿಕಾರಿ ಸುಧಾಕರ್ ಕುಂದರ್, ಸದಸ್ಯರಾದ ಮೋಹನ್ ಬಂಗೇರ ಕಾಪು, ದಿನೇಶ್ ಎರ್ಮಾಳು, ಬೆಣ್ಣೆಕುದ್ರು ಕ್ಷೇತ್ರದ ಅಧ್ಯಕ್ಷ ಆನಂದ ಸಿ. ಕುಂದರ್, ಮಹಾಜನ ಮಹಿಳಾ ಮಂಡಳಿ ಅಧ್ಯಕ್ಷೆ ಉಷಾರಾಣಿ ಬೋಳೂರು, ಪ್ರಧಾನ ಕಾರ್ಯದರ್ಶಿ ಉಷಾ ಲೋಕೇಶ್, ಕಾಪು ನಾಲ್ಕುಪಟ್ಣ ಮೊಗವೀರ ಸಭಾ ಉಚ್ಚಿಲ ಅಧ್ಯಕ್ಷ ಮನೋಜ್ ಪಿ. ಕಾಂಚನ್, ಮಹಿಳಾ ಸಭಾದ ಅಧ್ಯಕ್ಷೆ ಸುಗುಣ ಎಸ್. ಕರ್ಕೇರ, ದ.ಕ. ಮೊಗವೀರ ಮಹಾಜನ ಸಂಘ ಉಚ್ಚಿಲ ಆಡಳಿತ ಮಂಡಳಿ ಸದಸ್ಯರಾದ ವಾಸುದೇವ ಸಾಲ್ಯಾನ್ ಕಟಪಾಡಿ, ಗುಂಡು ಬಿ. ಅಮೀನ್ ಕಿದಿಯೂರು, ಸತೀಶ್ ಎಸ್. ಅಮೀನ್ ಬೆಣ್ಣೆಕುದ್ರು ಮೊದಲಾದವರು ಉಪಸ್ಥಿತರಿದ್ದರು. ದೇವಳದ ಪ್ರಬಂಧಕ ಸತೀಶ್ ಅಮೀನ್‌ ಪಡುಕೆರೆ ಕಾರ್ಯಕ್ರಮ ನಿರೂಪಿಸಿದರು.

PREV

Recommended Stories

ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ