ಉಡುಪಿ: ಉಚ್ಚಿಲ ದಸರಾ ದೀಪಾಲಂಕಾರಕ್ಕೆ ಚಾಲನೆ

KannadaprabhaNewsNetwork |  
Published : Oct 06, 2024, 01:17 AM IST
ದೀಪಾ4 | Kannada Prabha

ಸಾರಾಂಶ

ಈ ವಿದ್ಯುತ್ ದೀಪಾಲಂಕಾರವನ್ನು ಎಂ.ಆರ್.ಜಿ. ಗ್ರೂಪ್ ವತಿಯಿಂದ ಪ್ರಾಯೋಜಿಸಲಾಗಿದ್ದು, ಈ ದೀಪಾಲಂಕಾರ ವ್ಯವಸ್ಥೆಯನ್ನು ಸಂಸ್ಥೆಯ ಅಧ್ಯಕ್ಷ ಬಂಜಾರ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಉಚ್ಚಿಲ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವತಿಯಿಂದ ನಡೆಯುವ ಉಡುಪಿ-ಉಚ್ಚಿಲ‌ ದಸರಾ 2024 ಪ್ರಯುಕ್ತ ಇಲ್ಲಿನ ಶ್ರೀ ಮಹಾಲಕ್ಷ್ಮೀ ದೇವಾಲಯವು ಭವ್ಯವಾದ ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸುತ್ತಿದೆ.ಈ ವಿದ್ಯುತ್ ದೀಪಾಲಂಕಾರವನ್ನು ಎಂ.ಆರ್.ಜಿ. ಗ್ರೂಪ್ ವತಿಯಿಂದ ಪ್ರಾಯೋಜಿಸಲಾಗಿದ್ದು, ಈ ದೀಪಾಲಂಕಾರ ವ್ಯವಸ್ಥೆಯನ್ನು ಸಂಸ್ಥೆಯ ಅಧ್ಯಕ್ಷ ಬಂಜಾರ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ಗುರುವಾರ ಸಂಜೆ ಉದ್ಘಾಟಿಸಿದರು.ಈ ಸಂದರ್ಭ ‌ಉಡುಪಿ -ಉಚ್ಚಿಲ ದಸರಾದ ರುವಾರಿ, ದ.ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ನಾಡೋಜ ಡಾ. ಜಿ. ಶಂಕರ್, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶ್ಪಾಲ್‌ ಸುವರ್ಣ, ಮಹಾರಾಷ್ಟ್ರ ಸರ್ಕಾರದ ವಿಧಾನ ಪರಿಷತ್‌ ಸದಸ್ಯ ಮಿಲಿಂದ್‌ ನಾರ್ವೇಕರ್‌ ದಂಪತಿ, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ, ದಸರಾ ಸಮಿತಿ ಅಧ್ಯಕ್ಷ ವಿನಯ್ ಕರ್ಕೇರ, ಮಹಾಜನ ಸಂಘದ ಕಾರ್ಯದರ್ಶಿ ಶರಣ್ ಮಟ್ಟು, ಪ್ರಮುಖರಾದ ವಾಸುದೇವ ಸಾಲ್ಯಾನ್, ಗುಂಡು ಬಿ. ಅಮೀನ್, ಶ್ರೀಪತಿ ಭಟ್ ಉಚ್ಚಿಲ, ಮೋಹನ್ ಬೇಂಗ್ರೆ ಮೊದಲಾದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೇಲಿ ಕನ್ನಡಕ್ಕೆ ಅನ್ಯಾಯ: ಪರೀಕ್ಷೆ ಬಹಿಷ್ಕಾರ ನಿರ್ಧಾರ?
ಭತ್ತದ ನಾಡಿನಿಂದ ಅಕ್ಕಿಯ ರಫ್ತು ಬಂದ್