ಕನ್ನಡಪ್ರಭ ವಾರ್ತೆ ಉಡುಪಿ
ಅವರು ಮಂಗಳವಾರ ರಜತಾದ್ರಿಯ ಜಿ.ಪಂ. ಸಭಾಂಗಣದಲ್ಲಿ ಕೆಪಿಟಿಸಿಎಲ್ ಅಧಿಕಾರಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಗ್ರೀನ್ ಹೈಡ್ರೋಜನ್ ಯೋಜನೆಯಡಿ 400 ಕಿಲೋವ್ಯಾಟ್ ವಿದ್ಯುತ್ ಉತ್ಪಾದನೆಯ ಪೈಲಟ್ ಯೋಜನೆಯನ್ನು ಮಂಗಳೂರಿನಲ್ಲಿ ಆರಂಭಿಸಲಾಗುತ್ತದೆ. ಬಳಿಕ ಖಾಸಗಿ ಸಹಭಾಗಿತ್ವದಲ್ಲಿ 30,000 ಕೋಟಿ ರು. ವೆಚ್ಚದಲ್ಲಿ 5000 ಮೆಗಾವ್ಯಾಟ್ ಯೋಜನೆಯನ್ನು ಆರಂಭಿಸಲಾಗುತ್ತದೆ ಎಂದರು.ಬಳ್ಳಾರಿ ಮತ್ತು ಬೆಳಗಾವಿಯಲ್ಲಿಯೂ ಗ್ರೀನ್ ಹೈಡ್ರೋಜನ್ ವಿದ್ಯುತ್ ಉತ್ಪಾದನೆಗೆ ಖಾಸಗಿ ಕಂಪನಿಗಳು ಮುಂದೆ ಬಂದಿವೆ ಎಂದವರು ಹೇಳಿದರು.
ಪ್ರಸ್ತುತ ವಾರಾಹಿ ಭೂಗರ್ಭ ವಿದ್ಯುತ್ ಸ್ಥಾವರದಲ್ಲಿ 500 ಮೆ.ವ್ಯಾ. ವಿದ್ಯುತ್ ಉತ್ಪಾದನೆಯಾಗುತ್ತಿದೆ. ಪಂಪಿಂಗ್ ಸ್ಟೋರೆಜ್‌ನಿಂದ ಇದು 1500 ಮೆ.ವ್ಯಾ.ಗೇರಲಿದೆ ಎಂದು ತಿಳಿಸಿದರು.ವಿದ್ಯುತ್ ಬಳಕೆ ಕಡಿಮೆಯಾಗಿದೆ
ಉಚಿತ ವಿದ್ಯುತ್ ಪಡೆಯುವುದಕ್ಕೆ 200 ಯೂನಿಟ್ ಮಿತಿ ಹಾಕಿರುವುದರಿಂದ, ಈ ಯೋಜನೆಯ ಲಾಭ ಪಡೆಯಲು 200 ಯೂನಿಟ್‌ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡುತ್ತಿದ್ದವರು ವಿದ್ಯುತ್ ಬಳಕೆ ಕಡಿಮೆ ಮಾಡಿದ್ದಾರೆ ಎಂದರು.
ರಾಜ್ಯದಲ್ಲೀಗ ಸರಾಸರಿ ಮನೆ ವಿದ್ಯುತ್ ಬಳಕೆ 58 ಯೂನಿಟ್‌ಗಳಾಗಿದ್ದು, 48 ಯೂನಿಟ್‌ಗಿಂತ ಕಡಿಮೆ ವಿದ್ಯುತ್ ಬಳಕೆ ಮಾಡುತ್ತಿರುವವರಿಗೆ ಹೆಚ್ಚುವರಿಯಾಗಿ 10 ಯೂನಿಟ್ ವಿದ್ಯುತ್ ಉಚಿತ ನೀಡುತ್ತಿದ್ದು, ಇದರಿಂದ ರಾಜ್ಯದ 70 ಲಕ್ಷ ಕುಟುಂಬಗಳಿಗೆ ಪ್ರಯೋಜನವಾಗಿದೆ ಎಂದು ಇಂಧನ ಸಚಿವ ಹೇಳಿದರು.ದಾಖಲೆಯ 40,000 ಮೆಗಾವ್ಯಾಟ್
ವಾರಾಹಿ ನದಿಯಿಂದ ಕೇವಲ 0.3 ಟಿಎಂಸಿ ನೀರನ್ನು ಒಂದು ಬಾರಿಗೆ ಬಳಸಿ 1000 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಯೋಜನೆ ಇದಾಗಿದೆ. ನದಿಯಿಂದ ನೀರನ್ನು ಗುಡ್ಡೆಯ ಮೇಲ್ಭಾಗಕ್ಕೆ ಪಂಪ್ ಮಾಡಿ ಅದರಿಂದ ವಿದ್ಯುತ್ ಉತ್ಪಾದಿಸಲಾಗುತ್ತದೆ. ಮೇಲಿನಿಂದ ಕೆಳಗೆ ಬಂದ ನೀರನ್ನು ಅಣೆಕಟ್ಟೆಯಲ್ಲಿ ಸಂಗ್ರಹಿಸಿ ಮತ್ತೇ ಅದೇ ನೀರನ್ನು ಮೇಲಕ್ಕೆ ಪಂಪ್ ಮಾಡಿ ನಿರಂತರ ವಿದ್ಯುತ್ ಉತ್ಪಾದಿಸಲಾಗುತ್ತದೆ.