ಉಡುಪಿ: ವಿಕಲಚೇತನರ ಸಪ್ತಾಹ ಸಮಾರೋಪ

KannadaprabhaNewsNetwork |  
Published : Dec 08, 2024, 01:17 AM IST
07ವಿಕಲ | Kannada Prabha

ಸಾರಾಂಶ

ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರಗಳ ಸಹಯೋಗದೊಂದಿಗೆ ಹಮ್ಮಿಕೊಂಡ ವಿಕಲಚೇತನರ ಸಪ್ತಾಹದ ಸಮಾರೋಪವು ರೆಡ್‌ಕ್ರಾಸ್ ಭವನದಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರಗಳ ಸಹಯೋಗದೊಂದಿಗೆ ಹಮ್ಮಿಕೊಂಡ ವಿಕಲಚೇತನರ ಸಪ್ತಾಹದ ಸಮಾರೋಪವು ರೆಡ್‌ಕ್ರಾಸ್ ಭವನದಲ್ಲಿ ನಡೆಯಿತು.ಸಮಾರೋಪ ಭಾಷಣ ಮಾಡಿದ ರೆಡ್‌ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು, ವಿಕಲಚೇತನರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯದ ಕುರಿತಾಗಿ ಮಾಹಿತಿ ನೀಡಿ, ಅವುಗಳ ಪ್ರಯೋಜನ ಪಡೆಯುವಂತೆ ಸಲಹೆ ನೀಡಿದರು. ಸಪ್ತಾಹದ ಯಶಸ್ಸಿನ ಬಗ್ಗೆ ಇಲಾಖೆಗಳನ್ನು ಅಭಿನಂದಿಸಿದರು.ತಾಲೂಕು ವಿವಿಧೊದ್ದೇಶ ಪುನರ್ವಸತಿ ಕಾರ್ಯಕರ್ತರಾದ ಮಧುಸೂದನ್ ರಾವ್‌ ಸಂವಾದವನ್ನು ನಡೆಸಿಕೊಟ್ಟರು. ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ನೋಡಲ್ ಅಧಿಕಾರಿ ಜಯಶ್ರೀ ಸ್ವಾಗತಿಸಿದರು. ಪುನರ್ವಸತಿ ಕೇಂದ್ರದ ಎಂಜಿನಿಯರ್ ಜೆನಿಸ್ ಡಿಸೋಜ ವಂದಿಸಿದರು.ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಮತ್ತು ವಿಕಲಚೇತನರ ಸಂಸ್ಥೆಗಳ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜಿಲ್ಲೆಯ ಪ್ರತಿ ತಾಲೂಕಿನಲ್ಲೂ ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಗಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''