ಉಡುಪಿ ಜಿಲ್ಲಾ ಗೃಹರಕ್ಷಕ ದಳದ ವತಿಯಿಂದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟಕ್ಕೆ ಚಾಲನೆ

KannadaprabhaNewsNetwork |  
Published : Dec 17, 2024, 01:04 AM ISTUpdated : Dec 17, 2024, 07:37 AM IST
16ಹೋಮ್ | Kannada Prabha

ಸಾರಾಂಶ

ಉಡುಪಿ ಜಿಲ್ಲಾ ಗೃಹರಕ್ಷಕ ದಳದ ವತಿಯಿಂದ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ನಡೆದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟವನ್ನು ಅಂತಾರಾಷ್ಟ್ರೀಯ ಮಾಜಿ ಕ್ರೀಡಾಪಟು ರೋಹಿತ್ ಕುಮಾರ್ ಕಟೀಲ್ ಉದ್ಘಾಟಿಸಿದರು.

 ಉಡುಪಿ : ಉಡುಪಿ ಜಿಲ್ಲಾ ಗೃಹರಕ್ಷಕ ದಳದ ವತಿಯಿಂದ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ನಡೆದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟವನ್ನು ಅಂತಾರಾಷ್ಟ್ರೀಯ ಮಾಜಿ ಕ್ರೀಡಾಪಟು ರೋಹಿತ್ ಕುಮಾರ್ ಕಟೀಲ್ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಕ್ರೀಡೆಯಿಂದ ಭಾಂದವ್ಯ ವೃದ್ಧಿಸುತ್ತದೆ. ಕ್ರೀಡೆಗಳಲ್ಲಿ ಸೋಲು-ಗೆಲುವು ಸಾಮಾನ್ಯವಾಗಿದ್ದು, ಗೆಲುವಿಗಿಂತ ಕ್ರೀಡಾಕೂಟಗಳಲ್ಲಿ ಭಾಗವಹಿಸುವಿಕೆಯು ಅತಿ ಮುಖ್ಯವಾಗಿರುತ್ತದೆ. ಕ್ರೀಡಾಕೂಟಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗಿ ಉತ್ತಮ ಆರೋಗ್ಯ ಕಾಯ್ದುಕೊಳ್ಳಲು ಸಾಧ್ಯ ಎಂದರು.

ಗೃಹರಕ್ಷಕ ದಳದ ಜಿಲ್ಲಾ ಸಮಾದೇಷ್ಟ ಡಾ. ರೋಶನ್ ಕುಮಾರ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಗೃಹರಕ್ಷಕರ ಪ್ರತಿಭೆ, ಸಾಮರ್ಥ್ಯ ಪ್ರದರ್ಶಿಸಲು ಇಂತಹ ಕ್ರೀಡಾಕೂಟಗಳ ಆಯೋಜನೆ ಸಹಕಾರಿ. ಗೃಹ ರಕ್ಷಕ ದಳವು ಪೊಲೀಸ್ ಪಡೆಯ ಮತ್ತೊಂದು ಪ್ರಮುಖ ವಿಭಾಗವಾಗಿದೆ. ಗೃಹ ರಕ್ಷಕ ದಳದವರು ಶಿಸ್ತು, ತಾಳ್ಮೆ ಹಾಗೂ ಬದ್ಧತೆಗೆ ಹೆಸರಾಗಿದ್ದಾರೆ. ಕ್ರೀಡಾಕೂಟಗಳನ್ನು ಏರ್ಪಡಿಸುವುದರಿಂದ ಗೃಹರಕ್ಷಕರು ಆರೋಗ್ಯವಂತರಾಗಿ ಹಾಗೂ ಮಾನಸಿಕವಾಗಿ ಸದೃಢರಾಗಿರುತ್ತಾರೆ ಎಂದು ಹೇಳಿದರು.

ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಗೃಹರಕ್ಷಕ ಕ್ರೀಡಾಪಟುಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಕ್ರೀಡಾಂಗಣಕ್ಕೆ ಸಂದೀಪ್ ಎಚ್.ಜಿ. ಕ್ರೀಡಾಜ್ಯೋತಿ ತಂದರು. 

ಕ್ರೀಡಾ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.ಈ ಸಂದರ್ಭ ಕಾಪು ದಂಡತೀರ್ಥ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಪ್ರಶಾಂತ ಕುಮಾರ್ ಶೆಟ್ಟಿ, ಉಡುಪಿ ಪ್ರಸಾದ್ ನೇತ್ರಾಲಯದ ಆಡಳಿತ ನಿರ್ದೇಶಕ ಡಾ. ಕೃಷ್ಣಪ್ರಸಾದ್ ಉಪಸ್ಥಿತರಿದ್ದರು.ಗೃಹ ರಕ್ಷಕ ದಳದ ಸೆಕೆಂಡ್ ಇನ್ ಕಮಾಂಡ್ ರಾಜೇಶ್ ಕೆ.ಸಿ. ಸ್ವಾಗತಿಸಿದರು. ಬ್ರಹ್ಮಾವರ ಘಟಕಾಧಿಕಾರಿ ಸ್ಟೀವನ್ ಪ್ರಕಾಶ್ ಲೂಯಿಸ್ ನಿರೂಪಿಸಿದರು. ಸಹಾಯಕ ಬೋಧಕ ಕರಿಬಸಪ್ಪ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಟಿ ಆತ್ಮ*ತ್ಯೆಗೆ ಸರ್ಕಾರಿ ನೌಕರಿಗೆ ಸೇರುವಂತೆ ಕುಟುಂಬ ಒತ್ತಡ ಕಾರಣ?
ನಮ್ಮವರಿಗೆ ಇಲ್ಲದ ಪರಿಹಾರ ಅವರಿಗೆ ಏಕೆ : ಬಿಜೆಪಿ ಆಕ್ರೋಶ